ಎಸ್ ಟಿಜಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಜೆಇಇ ಪರೀಕ್ಷೆಯಲ್ಲಿ ತೇರ್ಗಡೆ

| Published : Aug 15 2024, 01:51 AM IST

ಎಸ್ ಟಿಜಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಜೆಇಇ ಪರೀಕ್ಷೆಯಲ್ಲಿ ತೇರ್ಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್‌ಐಟಿ) ಹಾಗೂ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಗೆ ಪ್ರವೇಶ ಪಡೆಯಲು ಜೆಇಇ ಪರೀಕ್ಷೆ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಎಸ್‌ಟಿಜಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಜೆಇಇ ತರಬೇತಿ ನೀಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವಾಗುತ್ತಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಎಸ್‌ಟಿಜಿ ಶಿಕ್ಷಣ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಜೆಇಇ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿಗಳಾದ ಡಿ.ಕೆ.ಚೈತನ್ಯ, ರಮೇಶ್‌ಗೌಡ ಪಾಟೀಲ್ ಹಾಗೂ ಎಲ್.ಪಿ.ಸಂಜಿತ್ ಜೆಇಇ ಪರೀಕ್ಷೆ ತೇರ್ಗಡೆಹೊಂದಿದ್ದು, ಡಿ.ಕೆ.ಚೈತನ್ಯ, ರಮೇಶ್‌ಗೌಡ ಪಾಟೀಲ್ ಅವರು ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ(ಐಐಐಟಿ)ಯಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಸಂವಹನ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ. ಎಲ್.ಪಿ.ಸಂಜಿತ್ ಸೂರತ್‌ಕಲ್‌ನ ಎನ್‌ಐಟಿಕೆ ಸಂಸ್ಥೆಯಲ್ಲಿ ಮೈನಿಗ್ ಎಂಜಿನಿಯರಿಂಗ್ ಆಯ್ಕೆಯಾಗಿದ್ದಾರೆ.

ಸಂಸ್ಥೆ ಸಿಇಓ ಸಿ.ಪಿ.ಶಿವರಾಜು ಮಾತನಾಡಿ, ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ(ಎನ್‌ಐಟಿ) ಹಾಗೂ ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ)ಗೆ ಪ್ರವೇಶ ಪಡೆಯಲು ಜೆಇಇ ಪರೀಕ್ಷೆ ಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಎಸ್‌ಟಿಜಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಿಗೆ ಜೆಇಇ ತರಬೇತಿ ನೀಡುವ ಮೂಲಕ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವಾಗುತ್ತಿದೆ ಎಂದರು.

ಜೆಇಇ ಪರೀಕ್ಷೆ ತೇರ್ಗಡೆಯಾಗಿ ವಿದ್ಯಾರ್ಥಿಗಳಾದ ಡಿ.ಕೆ.ಚೈತನ್ಯ, ರಮೇಶ್‌ಗೌಡಪಾಟೀಲ್ ಹಾಗೂ ಎಲ್.ಪಿ.ಸಂಜಿತ್‌ಗೆ ಶಾಲೆ ಪರವಾಗಿ ಅಭಿನಂಧನೆ ಸಲ್ಲಿಸುತ್ತೇನೆ ಎಂದರು.

ಈ ವೇಳೆ ವಿದ್ಯಾರ್ಥಿಗಳಾದ ಡಿ.ಕೆ.ಚೈತನ್ಯ, ರಮೇಶ್‌ಗೌಡಪಾಟೀಲ್ ಹಾಗೂ ಎಲ್.ಪಿ.ಸಂಜಿತ್ ಅವರಿಗೆ ಸಂಸ್ಥೆ ಅಧ್ಯಕ್ಷ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಸಿಇಒ ಸಿ.ಪಿ.ಶಿವರಾಜು ಸೇರಿದಂತೆ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದಿಂದ ಅಭಿನಂಧನೆ ಸಲ್ಲಿಸಿದರು.