ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರೋಧಿಸಿ ಹಲವು ವಿದ್ಯಾರ್ಥಿ ಸಂಘಟನೆಗಳು ಶನಿವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಚುನಾವಣಾ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು ಬಳಿಕ ಬಿಡುಗಡೆ ಮಾಡಿದರು.

-ಆಯುಕ್ತರ ಕಚೇರಿಗೆ ಮುತ್ತಿಗೆಗೆ ಯತ್ನ । ಪ್ರತಿಭಟನಾಕಾರರ ವಶ, ಬಿಡುಗಡೆ

ಕನ್ನಡಪ್ರಭ ವಾರ್ತೆ ಬೆಂಗಳೂರು

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರೋಧಿಸಿ ಹಲವು ವಿದ್ಯಾರ್ಥಿ ಸಂಘಟನೆಗಳು ಶನಿವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿ ಚುನಾವಣಾ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು ಬಳಿಕ ಬಿಡುಗಡೆ ಮಾಡಿದರು.

ಎಸ್‌ಐಆರ್‌ ವಿರೋಧಿಸಿ ಎಐಡಿಎಸ್ಓ, ಎಐಎಸ್ಎಫ್, ಎಸ್ಎಫ್ಐ, ಎಐಎಸ್ಎ ಮತ್ತಿತರ ವಿದ್ಯಾರ್ಥಿ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು. ಪ್ರತಿಭಟನೆಯಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಶಿವಸುಂದರ್, ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‌ಕುಮಾರ್‌ ರಾಜೀನಾಮೆ ನೀಡಿದ ಬಳಿಕ ಅಥವಾ ಎಸ್‌ಐಆರ್‌ ರದ್ದಾದ ಮಾತ್ರಕ್ಕೆ ನಮ್ಮ ಹೋರಾಟ ನಿಲ್ಲಬಾರದು. ಬಿಜೆಪಿ ಮತ್ತು ಕಾಂಗ್ರೆಸ್‌ನ ದಮನಕಾರಿ ನೀತಿಗಳ ವಿರುದ್ಧ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಮಾತನಾಡಿ, ಸರ್ಕಾರ ಹಾಗೂ ವ್ಯವಸ್ಥೆಯು ಮಾಡಿರುವ ಎಲ್ಲ ಅಪರಾಧಗಳಿಗೂ ತಕ್ಕ ಪಾಠ ಕಲಿಸುತ್ತೇವೆ ಎಂಬ ಸಂದೇಶವನ್ನು ಸಾರಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಎಸ್ಎಫ್‌ಐ ರಾಜ್ಯ ಉಪಾಧ್ಯಕ್ಷ ಬಸವರಾಜ್ ಮಾತನಾಡಿ, ಇಂದು ಸರ್ಕಾರ ದೇಶದ ಸಂವಿಧಾನವನ್ನು ಹಂತ ಹಂತವಾಗಿ ನಾಶ ಮಾಡುತ್ತಿದೆ. ಎಲ್ಲಾ ಕಾನೂನುಗಳನ್ನು ಬಳಸಿಕೊಂಡು ಜ್ಞಾನೇಶ್ ಕುಮಾರ್ ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡಲು ಎಲ್ಲರೂ ಒಂದಾಗಬೇಕು ಎಂದು ಕರೆ ನೀಡಿದರು. ಕ್ಯಾಪ್ಷನ್‌......

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿರೋಧಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ವಿದ್ಯಾರ್ಥಿಗಳು ಬ್ಯಾರಿಕೇಡ್‌ ಹತ್ತಿ ಪ್ರತಿಭಟನೆ ನಡೆಸಿದರು.