ಸಾರಾಂಶ
ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ
ಬೀದರ್: ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡದೇ, ಶಿಕ್ಷಣದಿಂದ ವಂಚಿತರಾಗುವಂತೆ ಮಾಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಶುಕ್ರವಾರ ಬೀದರ್ ನಗರದ ಗುಂಪಾ ರಸ್ತೆಯ ವೃತ್ತದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಉನ್ನತ ಶಿಕ್ಷಣದ ಆಸೆ ಇಟ್ಟುಕೊಂಡು, ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಸರ್ಕಾರ ನೆರವಿಗೆ ಧಾವಿಸುತ್ತದೆ. ಹೀಗಾಗಿ ಹಲವಾರು ವಿದ್ಯಾರ್ಥಿಗಳು ನಮಗೆ ಆರ್ಥಿಕ ಬೆಂಬಲವನ್ನು ವಿದ್ಯಾರ್ಥಿ ವೇತನದ ರೂಪದಲ್ಲಿ ನೀಡುತ್ತದೆ ಎಂದು ಕಾಲೇಜುಗಳಿಗೆ ದಾಖಲಾಗುತ್ತಾರೆ. ಆದರೆ ರಾಜ್ಯ ಸರ್ಕಾರ ಶಿಕ್ಷಣಕ್ಕೆ ನೀಡಬೇಕಾದ ಪ್ರಾಮುಖ್ಯತೆ ನೀಡದೆ ಇರುವುದು, ವಿದ್ಯಾರ್ಥಿವೇತನದಲ್ಲೂ ರಾಜಕೀಯ ಮುಂದುವರಿಸುತ್ತಿರುವುದು ವಿದ್ಯಾರ್ಥಿಗಳ ಶೋಚನೀಯ ಸ್ಥಿತಿಗೆ ಕಾರಣವಾಗಿದೆ.ಎಸ್‌ಎಸ್‌ಪಿ ತಂತ್ರಾಂಶದ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ ಇತರೆ ಇಲಾಖೆಗಳಡಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪದವಿ ಸ್ನಾತಕೋತ್ತರ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುತ್ತಾರೆ. ಆದರೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯಾರ್ಥಿ ವೇತನ ನೀಡದೆ ಲಕ್ಷಾಂತರ ವಿದ್ಯಾರ್ಥಿಗಳ ಶಿಕ್ಷಣವನ್ನು ಅತಂತ್ರ ಸ್ಥಿತಿಗೆ ತರುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಈ ಸಂದರ್ಭದಲ್ಲಿ ನಗರ ಸಂಘಟನಾ ಕಾರ್ಯದರ್ಶಿ ಹೇಮಂತ, ಎಸ್ಎಫ್‌ಡಿ ಪ್ರಮುಖರಾದ ಅಂಬ್ರೇಶ ಬಿರಾದಾರ, ಲಕ್ಷ್ಮಿಕಾಂತ, ಪವನ, ನಾಗರಾಜ, ಓಂಕಾರ, ಮಂಜುನಾಥ, ಮಹೇಶ, ಆನಂದ, ದಾವೀದ್ ಹಲವು ಕಾಲೇಜುಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))