ಕಾಲೇಜಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

| Published : Dec 04 2024, 12:34 AM IST

ಕಾಲೇಜಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿ ವರ್ಷವೂ ಎಲ್ಲ ಕಾಲೇಜುಗಳಲ್ಲಿ ನಡೆಯುವಂತೆ ಇಲ್ಲಿ ಎನ್‌ಎಸ್‌ಎಸ್‌ ಕ್ಯಾಂಪ್‌ ನಡೆಸುತ್ತಿಲ್ಲ. ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಭರಿಸಿಕೊಳ್ಳುವುದು, ನೀಡಿದ ಹಣಕ್ಕೆ ರಸೀದಿ ನೀಡುವುದಿಲ್ಲ.

ಕುಂದಗೋಳ:

ಪಟ್ಟಣದ ಲಿಂ. ಶಿತಿಕಂಠೇಶ್ವರ ಶಿವಾಚಾರ್ಯ ‌ಮಹಾಸ್ವಾಮಿಗಳ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುವುದು ಸೇರಿದಂತೆ ಪ್ರಾಚಾರ್ಯರ ಮೇಲೆ ಕ್ರಮಕ್ಕೆ ಒತ್ತಾಯಿಸಿ ಮಂಗಳವಾರ ನೂರಾರು ವಿದ್ಯಾರ್ಥಿನಿಯರು ಕಾಲೇಜು ಎದುರು ಪ್ರತಿಭಟಿಸಿದರು.

ಕಾಲೇಜಿನಲ್ಲಿ ಕುಡಿಯಲು ಸಮರ್ಪಕ ನೀರು, ಶೌಚಾಲಯ ವ್ಯವಸ್ಥೆ, ಆಟದ ಮೈದಾನ, ಗ್ರಂಥಾಲಯದಲ್ಲಿ ವ್ಯವಸ್ಥಿತ ಪುಸ್ತಕಗಳ ವ್ಯವಸ್ಥೆ ಕಲ್ಪಿಸಬೇಕಿದೆ. ಕಾಲೇಜಿನಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಕಾಲೇಜಿನಲ್ಲಿ ಬಿದ್ದಿರುವ ಕಸವನ್ನು ವಿದ್ಯಾರ್ಥಿಗಳೇ ಸ್ವಚ್ಛಗೊಳಿಸಬೇಕು. ಇಲ್ಲದೇ ಇದ್ದರೆ ವಿದ್ಯಾರ್ಥಿಗಳಿಗೆ ಇಂಟರ್‌ನಲ್‌ ಮಾರ್ಕ್ಸ್‌ ನೀಡುವುದಿಲ್ಲ ಎಂದು ಪ್ರಾಚಾರ್ಯರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿ ವರ್ಷವೂ ಎಲ್ಲ ಕಾಲೇಜುಗಳಲ್ಲಿ ನಡೆಯುವಂತೆ ಇಲ್ಲಿ ಎನ್‌ಎಸ್‌ಎಸ್‌ ಕ್ಯಾಂಪ್‌ ನಡೆಸುತ್ತಿಲ್ಲ. ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಭರಿಸಿಕೊಳ್ಳುವುದು, ನೀಡಿದ ಹಣಕ್ಕೆ ರಸೀದಿ ನೀಡುವುದಿಲ್ಲ. ಕೇಳಲು ಹೋದರೆ ಪ್ರಾಚಾರ್ಯ ಗಿರೀಶ ಅಂತರಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಈ ಕೂಡಲೇ ಪ್ರಾಚಾರ್ಯರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಪ್ರಾಚಾರ್ಯರು ನಿಗದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ತಗೆದುಕೊಳ್ಳುತ್ತಿರುವುದು, ವಿದ್ಯಾರ್ಥಿಗಳಿಂದ ಕಾಲೇಜು ಶುಚಿಗೊಳಿಸುವುದು, ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಈ ಕೂಡಲೇ ಪ್ರಾಚಾರ್ಯರನ್ನು ಅಮಾನತುಗೊಳಿಸಿ ತನಿಖೆಗೆ ಒಳಪಡಿಸುವಂತೆ ಡಿಡಿಪಿಯುಗೆ ನಿರ್ದೇಶನ ನೀಡಿದ್ದೇನೆ ಎಂದು ಶಾಸಕ ಎಂ.ಆರ್‌. ಪಾಟೀಲ ಹೇಳಿದರು.