ಸಾರಾಂಶ
ಹನುಮಸಾಗರ ಹಾಗೂ ಹನುಮನಾಳ ಹೋಬಳಿಯ ವ್ಯಾಪ್ತಿಯ ಸುತ್ತಲಿನ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪ್ರತಿದಿನ ಇಳಕಲ್, ಹುನಗುಂದ, ಗಜೇಂದ್ರಗಡ ಹಾಗೂ ಕುಷ್ಟಗಿ ಪಟ್ಟಣಗಳ ಶಾಲಾ ಕಾಲೇಜುಗಳಿಗೆ ಸಂಚರಿಸುತ್ತಾರೆ.
ಹನುಮಸಾಗರ: ಗ್ರಾಮದಿಂದ ನಾನಾ ಭಾಗಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ದೀಢಿರ್ ಪ್ರತಿಭಟನೆ ನಡೆಸಿ ಬಸ್‌ಗಳನ್ನು ಬಸ್ ನಿಲ್ದಾಣದಲ್ಲಿ ಕೂಡಿ ಹಾಕಿದ ಘಟನೆ ಮಂಗಳವಾರ ನಡೆಯಿತು.
ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, ಹನುಮಸಾಗರ ಹಾಗೂ ಹನುಮನಾಳ ಹೋಬಳಿಯ ವ್ಯಾಪ್ತಿಯ ಸುತ್ತಲಿನ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಪ್ರತಿದಿನ ಇಳಕಲ್, ಹುನಗುಂದ, ಗಜೇಂದ್ರಗಡ ಹಾಗೂ ಕುಷ್ಟಗಿ ಪಟ್ಟಣಗಳ ಶಾಲಾ ಕಾಲೇಜುಗಳಿಗೆ ಸಂಚರಿಸುತ್ತಾರೆ. ಆದರೆ ವಿದ್ಯಾರ್ಥಿಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲ. ಇದರಿಂದ ಶೈಕ್ಷಣಿಕ ಬೆಳವಣಿಗೆಗೆ ತೊಂದರೆಯಾಗುತ್ತಿದೆ. ಡಿಪೋದ ವ್ಯವಸ್ಥಾಪಕರು ವಿದ್ಯಾರ್ಥಿಗಳ ಜೀವನದ ಜತೆ ಚೆಲ್ಲಾಟ ಆಡುತ್ತಿದ್ದಾರೆ.ಸಾರಿಗೆ ವ್ಯವಸ್ಥೆ ಕಲ್ಪಿಸುವರೆಗೆ ಪ್ರತಿಭಟನೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.ಸ್ಥಳಕ್ಕೆ ಪಿಎಸ್‌ಐ ಧನುಂಜಯ ಎಂ.ಭೇಟಿ ನೀಡಿದರು. ನಂತರ ಅವರು ಮಾತನಾಡಿ, ವಿದ್ಯಾರ್ಥಿಗಳು ಪ್ರತಿಭಟನೆ ಮಾಡಲು ಮೊದಲು ಅನುಮತಿ ಪಡೆಯಬೇಕು. ಹೀಗೆ ಏಕಾಏಕಿ ಪ್ರತಿಭಟನೆ ನಡೆಸಲು ಬರುವದಿಲ್ಲ.ಡಿಪೋ ವ್ಯವಸ್ಥಾಪಕರೊಂದಿಗೆ ಚರ್ಚಿಸಲಾಗುವದು. ನಿಲ್ದಾಣದಲ್ಲಿ ಕೂಡಿ ಹಾಕಿರುವ ಬಸ್ ಚಲಿಸುವಂತೆ ತಿಳಿಸಿದ ನಂತರ ಪ್ರತಿಭಟನೆ ಹಿಂಪಡೆದರು. ಇದೇ ವೇಳೆ ಇಳಕಲ್, ಹುನಗುಂದ ಹೋಗುವ ವಿದ್ಯಾರ್ಥಿಗಳು ಇತರರು ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))