ಸದೃಢ ದೇಶ ಕಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಸದೃಢ ದೇಶ ಕಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾದುದು ಎಂದು ಶಾಸಕ ಡಾ.ಮಂತರ್ ಗೌಡ ಅಭಿಪ್ರಾಯಿಸಿದರು.ಇಲ್ಲಿನ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಜೀವನ ಇಂದಿನ ಯುವಜನತೆಗೆ ಮಾದರಿಯಾಗಿದೆ. ವಿದ್ಯಾರ್ಥಿಗಳು ಅವರ ತತ್ವ ಮತ್ತು ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸದೃಢ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಚ್.ಸಿ.ನಾಗೇಶ್ ವಹಿಸಿದ್ದರು. ವೇದಿಕೆಯಲ್ಲಿ ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಗೀತಾ, ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಇನ್ನರ್‌ವೀಲ್ ಸಂಸ್ಥೆ ಅಧ್ಯಕ್ಷೆ ತನ್ಮಯೀ ಪ್ರವೀಣ್, ಹಿರಿಯರಾದ ಎ.ಪಿ.ಶಂಕರಪ್ಪ, ಮುಖ್ಯ ಶಿಕ್ಷಕಿ ಎಂ.ಜೆ.ಅಣ್ಣಮ್ಮ ಮತ್ತಿತರರು ಇದ್ದರು.ಇದೇ ಸಂದರ್ಭ ಹಿರಿಯರಿಗೆ, ದಾನಿಗಳಿಗೆ, ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ನಮ್ಮ ಸಂಸ್ಕೃತಿ, ನಾಡು, ನುಡಿಗೆ ಸಂಬಂಧಿಸಿದ ವಿಭಿನ್ನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.