ವಿದ್ಯಾರ್ಥಿಗಳು ಅಹಂ ತ್ಯಜಿಸಿ ಪ್ರಜ್ಞಾವಂತ ನಾಗರಿಕರಾಗಿ: ಅದಮಾರು ಸ್ವಾಮೀಜಿ

| Published : Jul 15 2025, 11:45 PM IST

ವಿದ್ಯಾರ್ಥಿಗಳು ಅಹಂ ತ್ಯಜಿಸಿ ಪ್ರಜ್ಞಾವಂತ ನಾಗರಿಕರಾಗಿ: ಅದಮಾರು ಸ್ವಾಮೀಜಿ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನಡೆಸಿದ ಮೂರು ದಿನಗಳ ‘ಶೈಕ್ಷಣಿಕ ಮಾರ್ಗದರ್ಶನ - ಪರಿಚಯ’ ಕಾರ್ಯಕ್ರಮವನ್ನು ಅದಮಾರು ಮಠದ ಹಿರಿಯ ಸ್ವಾಮೀಜಿ, ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿಮರಗಳಂತೆ ಸೆಟೆದು ನಿಂತಾಗ ಬೀಳುವ ಅಪಾಯವಿದೆ, ಸಣ್ಣ ಸಸಿಗಳು ಬಾಗುವುದರಿಂದ ದೀರ್ಘ ಕಾಲ ಬಾಳುತ್ತವೆ. ಅಂತೆಯೇ ಮಾನವ ಅಹಂಕಾರವನ್ನು ತ್ಯಜಿಸಿ, ಬಾಗಿ ಗೌರವಿಸುವ ಗುಣಗಳನ್ನು ಬೆಳೆಸಿಕೊಳ್ಳಬೇಕು, ವಿದ್ಯಾರ್ಥಿಗಳು ಪ್ರಜ್ಞಾವಂತ ನಾಗರಿಕರಾಗಿ ಸಮಾಜದ ರಕ್ಷಣೆಗಾಗಿ ನಿಲ್ಲಬೇಕು. ಎಂದು ಅದಮಾರು ಮಠದ ಹಿರಿಯ ಸ್ವಾಮೀಜಿ, ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಹೇಳಿದ್ದಾರೆ.

ಪೂರ್ಣಪ್ರಜ್ಞ (ಸ್ವಾಯತ್ತ) ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನಡೆಸಿದ ಮೂರು ದಿನಗಳ ‘ಶೈಕ್ಷಣಿಕ ಮಾರ್ಗದರ್ಶನ - ಪರಿಚಯ’ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಶ್ರೀ ಅದಮಾರು ಮಠ ಎಜುಕೇಶನ್ ಕೌನ್ಸಿಲ್, ಬೆಂಗಳೂರು ಇದರ ಗೌರವ ಕಾರ್ಯದರ್ಶಿ ಡಾ. ಎ. ಪಿ. ಭಟ್ ಮಾತನಾಡಿ, ಪೂರ್ಣಪ್ರಜ್ಞ ವಿದ್ಯಾಸಂಸ್ಥೆಗೆ ತನ್ನದೇ ಆದ ವೈಶಿಷ್ಟ್ಯವಿದೆ, ಇಲ್ಲಿ ವಿದ್ಯಾರ್ಜನೆ ಮಾಡಿದ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅಸಾಧ್ಯವಾದುದನ್ನು ಸಾಧಿಸುವ ಛಲ ನಿಮ್ಮಲ್ಲಿರಬೇಕು ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಜಿ. ಎಸ್ ಚಂದ್ರಶೇಖರ್, ಗೌರವ ಕೌಶಾಧಿಕಾರಿ ಸಿಎ ಪ್ರಶಾಂತ್ ಹೊಳ್ಳ, ಪೂರ್ಣಪ್ರಜ್ಞ ಕಾಲೇಜು ಸಮೂಹ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಪಿ. ಎಸ್. ಐತಾಳ್ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾಲೇಜು ಪ್ರಾಂಶುಪಾಲ ಡಾ.ರಾಮು ಎಲ್. ಅವರು ೨೦೨೫- ೨೬ನೇ ಸಾಲಿನ ವಿದ್ಯಾರ್ಥಿಗಳ ದಾಖಲಾತಿ ವರದಿ ಮಂಡಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಡಾ.ರಮೇಶ್ ಟಿ.ಎಸ್, ಜಯಲಕ್ಷ್ಮಿ, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿಜಯಲಕ್ಷ್ಮಿ ಸಿ. ಭಟ್, ಕಾಲೇಜು ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ಡಾ.ವಿನಯ್ ಕುಮಾರ್ ಡಿ. ಉಪಸ್ಥಿತರಿದ್ದರು. ಉಪನ್ಯಾಸಕಿ ಪ್ರೀತಾ ಮೈಪಾಡಿ ನಿರ್ವಹಿಸಿದರು.