ವಿದ್ಯಾರ್ಥಿಗಳು ಏಕಾಗ್ರತೆಯಿಂದ ಗುರಿ ಸಾಧನೆ ಮಾಡಬೇಕು: ಡಾ.ಜೆ.ಎನ್.ರಾಮಕೃಷ್ಣೇಗೌಡ

| Published : Aug 04 2024, 01:17 AM IST

ವಿದ್ಯಾರ್ಥಿಗಳು ಏಕಾಗ್ರತೆಯಿಂದ ಗುರಿ ಸಾಧನೆ ಮಾಡಬೇಕು: ಡಾ.ಜೆ.ಎನ್.ರಾಮಕೃಷ್ಣೇಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯೆಯು ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ. ಆದ್ದರಿಂದ ವಿದ್ಯಾರ್ಥಿಗಳು ಇಷ್ಟಪಟ್ಟು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಗುರಿ ಸಾಧನೆ ಮಾಡುವ ಮೂಲಕ ತಮ್ಮ ತಂದೆ ತಾಯಿಗಳಿಗೆ ಹಾಗೂ ಗುರು ಹಿರಿಯರಿಗೆ ಕೀರ್ತಿ ತರಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಗುರಿ ಸಾಧನೆ ಮಾಡಬೇಕು ಎಂದು ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಕರೆ ನೀಡಿದರು.

ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಾಗತ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದರು.

ವಿದ್ಯೆಯು ಸಾಧಕರ ಸ್ವತ್ತೇ ಹೊರತು ಸೋಮಾರಿಗಳ ಸ್ವತ್ತಲ್ಲ. ಆದ್ದರಿಂದ ವಿದ್ಯಾರ್ಥಿಗಳು ಇಷ್ಟಪಟ್ಟು ಏಕಾಗ್ರತೆಯಿಂದ ಅಭ್ಯಾಸ ಮಾಡಿ ಗುರಿ ಸಾಧನೆ ಮಾಡುವ ಮೂಲಕ ತಮ್ಮ ತಂದೆ ತಾಯಿಗಳಿಗೆ ಹಾಗೂ ಗುರು ಹಿರಿಯರಿಗೆ ಕೀರ್ತಿ ತರಬೇಕು ಎಂದು ಮನವಿ ಮಾಡಿದರು.

ಓದಿನ ಜೊತೆಗೆ ಉತ್ತಮ ಸಂಸ್ಕಾರ ಪಡೆದುಕೊಳ್ಳಬೇಕು.ವಿದ್ಯಾರ್ಥಿಗಳು ಸಾಮಾಜಿಕ ಅಸಮಾನತೆಯನ್ನು ಹೊಡೆದೋಡಿಸಿ ಜಾತಿ ಮತ ಪಂಥಗಳಿಂದ ಮುಕ್ತವಾದ ಸಮ ಸಮಾಜವನ್ನು ನಿರ್ಮಾಣ ಮಾಡಬೇಕು. ಜ್ಞಾನದ ಶಕ್ತಿ ಉಪಯೋಗಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಸಂಸ್ಥೆ ವಿದ್ಯಾರ್ಥಿನಿಯರು ನೀಡಿದ ಭರತನಾಟ್ಯ ಪ್ರದರ್ಶನವು ಸಾರ್ವಜನಿಕರು ಹಾಗೂ ಅತಿಥಿಗಳನ್ನು ರಂಜಿಸಿತು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರಸಾದೇಗೌಡ, ವ್ಯವಸ್ಥಾಪಕ ರಾಮಚಂದ್ರ, ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.

ಕೆಆರ್ ಎಸ್ ನೀರಿನ ಮಟ್ಟ

ಗರಿಷ್ಠ ಮಟ್ಟ - 124.80 ಅಡಿ

ಇಂದಿನ ಮಟ್ಟ – 123.45 ಅಡಿ

ಒಳ ಹರಿವು – 80,732ಕ್ಯುಸೆಕ್

ಹೊರ ಹರಿವು – 80,931 ಕ್ಯುಸೆಕ್

ನೀರಿನ ಸಂಗ್ರಹ – 47.584 ಟಿಎಂಸಿ