ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು

| Published : Feb 08 2025, 12:31 AM IST

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು
Share this Article
  • FB
  • TW
  • Linkdin
  • Email

ಸಾರಾಂಶ

ಡಿಜಿಟಲ್ ಫಾಸ್ಟಿಂಗ್ ಅಂದರೆ ಮೊಬೈಲ್ ನ ಹಾಗೂ ಸಾಮಾಜಿಕ ಮಾಧ್ಯಮದ ಬಳಕೆಯನ್ನು ಕಡಿಮೆ ಮಾಡಬೇಕು. ಅದೇ ಬದುಕಲ್ಲ, ಅದಕ್ಕಿಂತಲೂ ಹೆಚ್ಚಾಗಿ ಇರುವ ಒಂದು ಜೀವನವನ್ನು ಪ್ರೀತಿಸಬೇಕು. ಆ ಜೀವನದ ಗುರಿಯನ್ನು ತಲುಪಲು ಇರುವ ಮಾರ್ಗಗಳ ಬಗ್ಗೆ ತಿಳಿದುಕೊಂಡು ಮುನ್ನುಗ್ಗಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಇಂದಿನ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು, ಆಗ ಮಾತ್ರ ವಿದ್ಯಾರ್ಥಿ ಬದುಕಿನ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅಂತಾರಾಷ್ಟ್ರೀಯ ರಾಜಕೀಯ ವಿಜ್ಞಾನ ಅಸೋಸಿಯೇಷನ್ ಅಧ್ಯಕ್ಷ ಡಾ. ಗುರುಬಸವರಾಜ ಸ್ವಾಮಿ ಪಂಡಿತ ಹೇಳಿದರು.

ರೂಪನಗರದ ದೀಪಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿವೇಕಾನಂದ ಸಭಾಂಗಣದಲ್ಲಿ ಜರುಗಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಶಾರದಾ ಪೂಜಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಡಿಜಿಟಲ್ ಫಾಸ್ಟಿಂಗ್ ಅಂದರೆ ಮೊಬೈಲ್ ನ ಹಾಗೂ ಸಾಮಾಜಿಕ ಮಾಧ್ಯಮದ ಬಳಕೆಯನ್ನು ಕಡಿಮೆ ಮಾಡಬೇಕು. ಅದೇ ಬದುಕಲ್ಲ, ಅದಕ್ಕಿಂತಲೂ ಹೆಚ್ಚಾಗಿ ಇರುವ ಒಂದು ಜೀವನವನ್ನು ಪ್ರೀತಿಸಬೇಕು. ಆ ಜೀವನದ ಗುರಿಯನ್ನು ತಲುಪಲು ಇರುವ ಮಾರ್ಗಗಳ ಬಗ್ಗೆ ತಿಳಿದುಕೊಂಡು ಮುನ್ನುಗ್ಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ದೀಪಾ ಶಿಕ್ಷಣ ಮತ್ತು ಸೇವಾ ಸಂಸ್ಥೆಯ ಅಧ್ಯಕ್ಷ ಎಂ. ರಾಮಪ್ಪ ಮಾತನಾಡಿ, ಸ್ವಂತ ನಡಾವಳಿಗಳನ್ನು ನಾವೇ ರೂಪಿಸಿಕೊಂಡು ನಾವೇ ಬದುಕುವುದನ್ನು ಕಲಿಯಬೇಕು. ಶಿಸ್ತು ಮತ್ತು ಸಂಸ್ಕಾರದ ಅಂಶಗಳನ್ನು ಅಳವಡಿಸಿಕೊಂಡು ಹೋಗಬೇಕು ಎಂದರು. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಜವಾಬ್ದಾರಿ ಪ್ರಣತಿಯನ್ನು ವರ್ಗಾವಣೆ ಮಾಡಲಾಯಿತು.

ಸಂಸ್ಥೆಯ ಕಾರ್ಯದರ್ಶಿ ವಿ.ಎನ್. ಸುಂದರ್, ಬೋಗಾದಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಲಿಂಗರಾಜು, ಬೀರಿಹುಂಡಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಆನಂದ್ ರಾಜು, ದೀಪಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶಿಲ್ಪಾ ಜಗದೀಶ್, ದೀಪಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎ.ಕೆ. ಬಾಬು, ದೀಪಾ ಕಾಲೇಜಿನ ಪ್ರಾಂಶುಪಾಲೆ ಪ್ರಣೀತಾ ಎರ್ಮಾಳ್ ಹಾಗೂ ಕಾಲೇಜಿನ ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

11 ರಂದು ಬಂಜಗೆರೆ ಸಾಹಿತ್ಯ ಕೊಡುಗೆ ಕುರಿತು ವಿಚಾರ ಸಂಕಿರಣ

ಕನ್ನಡಪ್ರಭ ವಾರ್ತೆ ಮೈಸೂರು

ಚಿಂತಕ ಬಂಜಗೆರೆ ಜಯಪ್ರಕಾಶ್ ಅವರ ಸಾಹಿತ್ಯ ಮತ್ತು ಸಾಂಸ್ಕೃತಿ ಕೊಡುಗೆ ಎಂಬ ವಿಷಯದ ಕುರಿತು ಫೆ. 11 ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ ಏರ್ಪಡಿಸಿದ್ದು, ಮೈಸೂರಿನ ಆಸಕ್ತರು ಹಾಗೂ ಸಾಹಿತ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮುಖಂಡ ಅಹಿಂದ ಜವರಪ್ಪ ಮನವಿ ಮಾಡಿದರು.

ಪದ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಾಹಿತ್ಯ ಅಕಾಡೆಮಿ, ಕರ್ನಾಟಕ ಜಾನಪದ ಅಕಾಡೆಮಿ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಾಹಿತಿ ಬರಗೂರು ರಾಮಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್‌, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಸಾಹಿತಿಗಳಾದ ಸಿದ್ದನಗೌಡ ಪಾಟೀಲ, ಎಸ್.ಜಿ. ಸಿದ್ದರಾಮಯ್ಯ, ಆರ್‌. ಸ್ವಾಮಿ ಆನಂದ್, ರವಿಕುಮಾರ್‌ಬಾಗಿ ವಿಷಯ ಮಂಡಿಸುವರು. ಲೇಖಕರೊಂದಿಗೆ ಸಂವಾದದಲ್ಲಿ ಪ್ರಕಾಶ್ ಮಂಟೇದ, ಹುಲಿಕುಂಟೆ ಮೂರ್ತಿ, ಟಿ.ಎಚ್‌. ಲವಕುಮಾರ್, ರೇಣುಕಾರಾಧ್ಯ, ಎಸ್. ಪವಿತ್ರಾ, ಎಸ್. ಮಂಜುನಾಥ್‌, ಕಿರಣ್‌ ಕುಮಾರಿ, ಕರಿಸ್ವಾಮಿ ಭಾಗವಹಿಸುವರು ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಬೋಧಿವೃಕ್ಷ ಸೊಸೈಟಿ ಫಾರ್‌ಡೆವಲಪ್‌ಮೆಂಟ್ ಅಧ್ಯಕ್ಷ ಎಂ.ಎಸ್. ಚಂದ್ರ, ಕನ್ನಡ ಸಾಹಿತ್ಯ ಕಲಾ ಕೂಟದ ಅಧ್ಯಕ್ಷ ಎಂ. ಚಂದ್ರಶೇಖರ್, ಮನೋಜ್‌, ಉತ್ತನಹಳ್ಳಿ ಶಿವಣ್ಣ ಇದ್ದರು.