ವಿದ್ಯಾರ್ಥಿಗಳು ಸಂವಿಧಾನದ ಮೌಲ್ಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವಗಳನ್ನು ಎತ್ತಿ ಹಿಡಿಯುವ ಮತ್ತು ಪ್ರಜಾಪ್ರಭುತ್ವದ ಆದರ್ಶಗಳಿಗೆ ಬದ್ಧವಾಗಿ ನಡೆಯಬೇಕು ಎಂದು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹೊನ್ನಾಂಜಿನಯ್ಯ ಡಿ.ಆರ್. ಹೇಳಿದರು.
ಕನ್ನಡಪ್ರಭ ವಾರ್ತೆ ಶಿರಾ ವಿದ್ಯಾರ್ಥಿಗಳು ಸಂವಿಧಾನದ ಮೌಲ್ಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವಗಳನ್ನು ಎತ್ತಿ ಹಿಡಿಯುವ ಮತ್ತು ಪ್ರಜಾಪ್ರಭುತ್ವದ ಆದರ್ಶಗಳಿಗೆ ಬದ್ಧವಾಗಿ ನಡೆಯಬೇಕು ಎಂದು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಹೊನ್ನಾಂಜಿನಯ್ಯ ಡಿ.ಆರ್. ಹೇಳಿದರು. ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶ (ಐಕ್ಯೂಎಸಿ) ವತಿಯಿಂದ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಭಾರತದ ಸಂವಿದಾನವು ವಿಶ್ವಶ್ರೇಷ್ಠ ಸಂವಿಧಾನವಾಗಿದೆ ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಕಾಲೇಜಿನ ಐಕ್ಯೂಎಸಿ ಸಂಚಾಲಕರಾದ ಪ್ರಭಾಸ್ ಪಂಡಿತ್ ಟಿ.ಎಸ್. ಅವರು ಮಾತನಾಡಿ ನಮ್ಮ ಸಂವಿಧಾನವು ಕೇವಲ ಕಾನೂನು ಸಂಹಿತೆಯಲ್ಲ ಅಸಂಖ್ಯಾತ ಭಾರತೀಯರ ದೃಷ್ಟಿಕೋನ, ಹೋರಾಟ ಮತ್ತು ಆಕಾಂಕ್ಷೆಗಳನ್ನು ಸಾಕಾರ ಸ್ವರೂಪ. ನ್ಯಾಯ, ಸ್ವಾತಂತ್ರ್ಯ, ಧರ್ಮ, ಸಮಾನತೆ, ಭ್ರಾತೃತ್ವ, ಬಹುತ್ವ, ಅಧ್ಯಾತ್ಮಿಕ ಮತ್ತು ನೈತಿಕ ಸಮಗ್ರತೆ ಮತ್ತಿತರ ಉದಾತ್ತ ಮೌಲ್ಯಗಳನ್ನು ಇದು ಆಧರಿಸಿದೆ. ಹಕ್ಕುಗಳ ಜೊತೆಗೇ ಜವಾಬ್ದಾರಿಗಳನ್ನು ನಮಗೆ ವಹಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ.ಚಂದ್ರಶೇಖರಪ್ಪ ಡಿ. ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ವೆಂಕಟೇಶ್ ಮೂರ್ತಿ, ಪತ್ರಾಂಕಿತ ವ್ಯವಸ್ಥಾಪಕ ಶ್ರೀ ಶ್ರೀನಿವಾಸ ಮೂರ್ತಿ ಸೇರಿದಂತೆ ಉಪನ್ಯಾಸಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.