ವಿದ್ಯಾರ್ಥಿಗಳು ದೊಡ್ಡ ದೊಡ್ಡ ಸಾಧನೆಗಳಿಗೆ ತೊಡಗಿಸಿಕೊಳ್ಳಿ: ಎನ್.ಡಿ. ಯೋಗೇಶ್ ಸಲಹೆ

| Published : Aug 03 2025, 01:30 AM IST

ಸಾರಾಂಶ

ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮೊದಲಾದರೆ ನಂತರ ಗುರುಗಳ ಪಾತ್ರವೇ ಹಿರಿದಾದದ್ದು. ವಿದ್ಯಾರ್ಥಿಗಳು ಪೋಷಕರ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಬೆಳೆದು ಸಾಧನೆ ಮಾಡಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಾರದ ಸಮಾವೇಶದಲ್ಲಿ ಮಡಿಕೇರಿಯ ನಿವೃತ್ತ ಎಲ್‌ ಐಸಿ ಡೆವಲಪ್‌ಮೆಂಟ್ ಆಫೀಸರ್ ಎನ್.ಡಿ. ಯೋಗೇಶ್ ಅವರನ್ನು ಸನ್ಮಾನಿಸಲಾಯಿತು.

ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ವಿದ್ಯಾರ್ಥಿಗಳು ಸಣ್ಣ ಸಣ್ಣ ಕೆಲಸಗಳನ್ನು ಮಾಡುವುದರ ಮೂಲಕ ದೊಡ್ಡ ದೊಡ್ಡ ಸಾಧನೆಗಳಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಲ್ಲಕ್ಕಿಂತ ಮೊದಲು ವಿದ್ಯಾರ್ಥಿಗಳು ಸಾಧನಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು. ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮೊದಲಾದರೆ ನಂತರ ಗುರುಗಳ ಪಾತ್ರವೇ ಹಿರಿದಾದದ್ದು. ವಿದ್ಯಾರ್ಥಿಗಳು ಪೋಷಕರ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಬೆಳೆದು ಸಾಧನೆ ಮಾಡಬೇಕು. ಮಹಾಜನ ವಿದ್ಯಾಸಂಸ್ಥೆಯ ಬಗ್ಗೆ ನನಗೆ ಉತ್ತಮ ಬಾಂಧವ್ಯ ಹಾಗೂ ಅಪಾರ ಗೌರವವಿದೆ. ಕಾರಣ ಶಿಸ್ತಿಗೆ, ಗುಣಮಟ್ಟದ ಶಿಕ್ಷಣದ ಜೊತೆ ಜೊತೆಗೆ ಅವರಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ. ಇಂದಿನ ವಾರದ ಸಮಾವೇಶದಲ್ಲಿ ಅಭಿನಂದಿತರಾದ ವಿದ್ಯಾರ್ಥಿಗಳೇ ನಿದರ್ಶನ ಎಂದರು. ಐಕ್ಯೂಎಸಿ ಸಂಯೋಜಕಿ ಡಿ. ಗೀತಾ, ಪ್ರಾಂಶುಪಾಲೆ ಡಾ.ಬಿ.ಆರ್. ಜಯಕುಮಾರಿ, ಶೈಕ್ಷಣಿಕ ಡೀನ್ ಡಾ.ಎಚ್. ಶ್ರೀಧರ್ ಹಾಗೂ ಹಿರಿಯ ಪ್ರಾಧ್ಯಾಪಕ ಡಾ.ಎಚ್.ಆರ್. ತಿಮ್ಮೇಗೌಡ ಇದ್ದರು. ವಾರದ ಸಮಾವೇಶವನ್ನು ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುನಿಲ್ ನಿರೂಪಿಸಿದರು.