ಚನ್ನಪಟ್ಟಣ: ವಿದ್ಯಾರ್ಥಿಗಳಿಗೆ ಎಳವೆಯಲ್ಲಿಯೇ ಉತ್ತಮ ಶಿಕ್ಷಣದೊಂದಿಗೆ ಸಂಸ್ಕಾರ ಮತ್ತು ಶಿಸ್ತು ಕಲಿಸುವುದು ಶಿಕ್ಷಕರು ಹಾಗೂ ಪೋಷಕರ ಕರ್ತವ್ಯ ಎಂದು ಬಾಲು ಶಾಲೆ ಸಂಸ್ಥಾಪಕ ಕಾರ್ಯದರ್ಶಿ ವಿ.ವೆಂಕಟಸುಬ್ಬಯ್ಯ ಚೆಟ್ಟಿ ತಿಳಿಸಿದರು.
ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ ಯುಕೆಜಿ ಹಾಗೂ ೭ನೇ ತರಗತಿಯ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿದರು.ಶಾಲೆಯ ಜಂಟಿ ಕಾರ್ಯದರ್ಶಿ ವಿ.ಬಾಲಸುಬ್ರಮಣ್ಯಂ ಮಾತನಾಡಿ, ವಿದ್ಯಾರ್ಥಿಗಳಿಗೆ ಬರೀ ಶಿಕ್ಷಣ ನೀಡಿದರೆ ಸಾಲದು. ಅವರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು. ಈ ನಿಟ್ಟಿನಲ್ಲಿ ಶಾಲೆಯಲ್ಲಿ ಶಿಕ್ಷಣದ ಜತೆಗೆ ಸ್ಪರ್ಧಾತ್ಮಕ ಜಗತ್ತಿಗೆ ಅಗತ್ಯವಿರುವ ಕೌಶಲ್ಯಗಳನ್ನು ಕಲಿಸಲು ಆದ್ಯತೆ ನೀಡಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷೆ ಡಾ. ಕೆ.ಪಿ.ಶೈಲಜಾ ಧರ್ಮದರ್ಶಿ ಕವಿತಾ ಬಾಲಸುಬ್ರಹ್ಮಣ್ಯಂ, ಮುಖ್ಯೋಪಾಧ್ಯಾಯಿನಿ ಕವಿತಾ , ಆಡಳಿತಾಧಿಕಾರಿ ಮೆಹರ್ ಸುಲ್ತಾನ, ಪೋಷಕರು ಇದ್ದರು.ಪೊಟೋ೧೧ಸಿಪಿಟಿ೨: ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ಯುಕೆಜಿ ಹಾಗೂ ೭ನೇ ತರಗತಿಯ ವಿದ್ಯಾರ್ಥಿಗಳ ಪದವಿ ಪ್ರಧಾನ ಸಮಾರಂಭ ನಡೆಯಿತು.