ಸಾರಾಂಶ
ಭಾಲ್ಕಿ ತಾಲೂಕಿನ ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ 40ನೇ ವರ್ಷದ ಮಾಣಿಕ್ಯ ಮಹೋತ್ಸವ ಕಾರ್ಯಕ್ರಮವನ್ನು ಇಸಿಓ ಸಹದೇವ.ಜಿ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಭಾಲ್ಕಿ
ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಹಬ್ಬದಂತೆ ಸಂಭ್ರಮಿಸಬೇಕು. ಅಂದಾಗ ಮಾತ್ರ ಹೆಚ್ಚಿನ ಅಂಕ ಗಳಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಇಸಿಓ ಸಹದೇವ.ಜಿ ಅಭಿಪ್ರಾಯಪಟ್ಟರು.ತಾಲೂಕಿನ ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ 40 ವರ್ಷದ ಮಾಣಿಕ್ಯ ಮಹೋತ್ಸವ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿ, ಮಾರ್ಚ ಮತ್ತು ಎಪ್ರಿಲ್ ತಿಂಗಳುಗಳು ನಾವು ಓದಿದ ವಿಷಯಕ್ಕೆ ಓರೆ ಹಚ್ಚುವ ತಿಂಗಳಾಗಿವೆ. ಒಂದು ವರ್ಷಕಾಲ ಓದಿದ ಎಲ್ಲಾ ವಿಷಯಗಳನ್ನು ಮನದಲ್ಲಿಟ್ಟುಕೊಂಡು, ಮೂರು ಗಂಟೆಗಳ ಕಾಲ ನಡೆಯುವ ಪರೀಕ್ಷೆ ಬಿಡಿಸಬೇಕಾಗಿದೆ. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ, ಪರೀಕ್ಷೆ ಹಬ್ಬದ ರೀತಿಯಲ್ಲಿ ಸಂಭ್ರಮಿಸಿ ಪ್ರಶ್ನೆಗಳಿಗೆ ತಕ್ಕ ಉತ್ತರ ಬರೆಯಬೇಕೆಂದರು.
ನಿವೃತ್ತ ಮುಖ್ಯಶಿಕ್ಷಕ ಜಯರಾಜ ದಾಬಶೆಟ್ಟಿ ಮಾತನಾಡಿ, ಪ್ರಸ್ತುತ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಮೂರು ಸಲ ಪರೀಕ್ಷೆ ಬರೆದು ಉತ್ತೀರ್ಣರಾಗಲು ಅವಕಾಶ ಕಲ್ಪಿಸಿಕೊಡಲಾಗಿದೆ. ಮೂರು ಸಲದ ಪರೀಕ್ಷೆಗಳಲ್ಲಿ, ಯಾವ, ಯಾವ ವಿಷಯಗಳಲ್ಲಿ, ಹೆಚ್ಚಿನ ಅಂಕಗಳಿವೆಯೋ, ಅವುಗಳನ್ನು ಪರಿಗಣಿಸಲಾಗುವುದು. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಉತ್ತಮವಾಗಿ ಪರೀಕ್ಷೆ ಎದುರಿಸಿ ಉತ್ತೀರ್ಣರಾಗಬೇಕೆಂದು ಸಲಹೆ ನೀಡಿದರು.ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ದತ್ತಾತ್ರಿ ಕಾಟಕರ ಮಾತನಾಡಿದರು.
ಸಂಸ್ಥೆಯ ಅಧ್ಯಕ್ಷೆ ಮೋಜಾಬಾಯಿ ಕಲವಾಡಿಕರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕಿ ಶೋಭಾ ಮಾಸಿಮಾಡೆ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಶಿವಕುಮಾರ ವಾಡಿಕರ ಶಾಲಾ ವರದಿ ವಾಚನ ಮಾಡಿದರು.ಇದೇ ವೇಳೆ ಚಿತ್ರಕಲಾ ಶಿಕ್ಷಕ ಶಿವಶರಣಪ್ಪ ಸೊನಾಳೆ ಅವರನ್ನು ಗೌರವಿಸಲಾಯಿತು ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನಕಲು ರಹಿತ ಪರೀಕ್ಷೆ ಬರೆಯುವ ಬಗ್ಗೆ ತಿಳಿಸಿದರು.
ಸಂಸ್ಥೆಯ ನಿದೇರ್ಶಕಿ ಕಿರಣ ಕಲವಾಡಿಕರ್, ಪುಷ್ಪಾ ಕಲವಾಡಿಕರ, ಸಿಆರ್‌ಪಿ ಸಂತೋಷ ಧಬಾಲೆ, ಮುಖ್ಯಶಿಕ್ಷಕ ಕಿರಣಕುಮಾರ ಭಾಟಸಿಂಗಿ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಿಲಿಂದಾ, ಬಸವರಾಜ ಕುಂಬಾರ, ವಿಜಯಕುಮಾರ ಬಾಜೋಳಗಾ, ಓಂ ಝೆಡ್ ಬಿರಾದಾರ, ಆನಂದ ಖಂಡಗೊಂಡ, ಶಿವಾನಂದ ಕೃಷ್ಣಪ್ಪ, ಪ್ರದೀಪ ಜೊಳದಪಕೆ ಉಪಸ್ಥಿತರಿದ್ದರು.