ಶೃಂಗೇರಿಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ತೀರ್ವ ಸ್ಪರ್ಧೆ, ಪೈಪೋಟಿ ಇದೆ. ನಾವು ಸಾಮಾನ್ಯ ಜ್ಞಾನ ಬೆಳೆಸಿಕೊಂಡರೆ ಮಾತ್ರ ಸ್ಪರ್ಧೆ ಎದುರಿಸಿ ಯಶಸ್ಸು ಸಾಧಿಸಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಪತ್ರಿಕೆ, ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಸುರೇಶ್ ಹೆಗ್ಡೆ ಹೇಳಿದರು.

ಸುರೇಶ್ ಹೆಗ್ಡೆ ಅಭಿಮತ । ಶ್ರೀ ಆಂಗ್ಲಮಾದ್ಯಮ ಶಾಲೆಯಲ್ಲಿ ಕನ್ನಡ ಪ್ರಭ ವಿದ್ಯಾರ್ಥಿ ಸಂಚಿಕೆ ಬಿಡುಗಡೆ

ಕನ್ನಡಪ್ರಭ ವಾರ್ತೆ ಶೃಂಗೇರಿ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ತೀರ್ವ ಸ್ಪರ್ಧೆ, ಪೈಪೋಟಿ ಇದೆ. ನಾವು ಸಾಮಾನ್ಯ ಜ್ಞಾನ ಬೆಳೆಸಿಕೊಂಡರೆ ಮಾತ್ರ ಸ್ಪರ್ಧೆ ಎದುರಿಸಿ ಯಶಸ್ಸು ಸಾಧಿಸಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಪತ್ರಿಕೆ, ಸಾಹಿತ್ಯ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಸುರೇಶ್ ಹೆಗ್ಡೆ ಹೇಳಿದರು.

ಪಟ್ಟಣದ ಹೆಗ್ಡೆ ರೆಸಿಡೆನ್ಸಿ ಸಭಾಂಗಣದಲ್ಲಿ ನಡೆದ ಕನ್ನಡ ಪ್ರಭ ಯುವ ಆವೃತ್ತಿ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರತಿ ದಿನ ಬೆಳಿಗ್ಗೆ ಪತ್ರಿಕೆ ಓದುವುದರಿಂದ ನಮಗೆ ಸಾಕಷ್ಟು ವಿಷಯ ಸಿಗುವ ಜೊತೆಗೆ ಸಾಮಾನ್ಯ ಜ್ಞಾನ ಬೆ‍ಳೆಯುತ್ತದೆ. ಪಠ್ಯ ವಿಷಯಗಳ ಜೊತೆಗೆ ಪಠ್ಯೇತರ ವಿಷಯಗಳಿಗೂ ಆದ್ಯತೆ ನೀಡಬೇಕು. ಪತ್ರಿಕೆಗಳು,ಸಾಹಿತ್ಯ ಓದುವು ದರಿಂದ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ.

ರೋಟರಿಯಿಂದ ವಿದ್ಯಾರ್ಥಿಗಳಿಗೆ ಒಂದುವರ್ಷ ಉಚಿತ ಕನ್ನಡ ಪ್ರಭ ವಿದ್ಯಾರ್ಥಿ ಸಂಚಿಕೆ ನೀಡಲಾಗುತ್ತಿದೆ. ಇದರಲ್ಲಿರುವ ಸಾಕಷ್ಟು ವಿಷಯವನ್ನು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಇಂಟರಾಕ್ಟ್ ಕ್ಲಬ್ ಉದ್ಘಾಟಿಸಲಾಯಿತು. ನೂತನ ಅಧ್ಯಕ್ಷರಾಗಿ ಮಾನಸಿ, ಕಾರ್ಯದರ್ಶಿ ಯಾಗಿ ಶ್ರೀಶಾ ಪ್ರಮಾಣ ವಚನ ಸ್ಪೀಕರಿಸಿದರು. ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸೈದಾಭಾನು ರವರನ್ನು ಗೌರವಿಸಲಾಯಿತು. ಎಚ್.ಎಲ್ ತ್ಯಾಗರಾಜ್ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ರೋಟರಿ ವಲಯ 6 ರ ಇಂಟರಾಕ್ಟ್ ಸಂಯೋಜನಾಧಿಕಾರಿ ಎ.ವಿ.ಸುಬ್ರಮಣ್ಯ,ರಾಮಕೃಷ್ಣ ಆಂಗ್ಲಮಾದ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಹೇಶ್ವರಪ್ಪ,ಹೊಳೆಕೊಪ್ಪ ಪ್ರೌಡಶಾಲೆ ಮುಖ್ಯಶಿಕ್ಷಕ ಶಿವಕುಮಾರ್,ನವೀನ್ ಕೊಲ್ಲಿ ಮತ್ತಿತರರು ಉಪಸ್ಥಿತರಿದ್ದರು.

2 ಶ್ರೀ ಚಿತ್ರ 1-

ಶೃಂಗೇರಿ ಪಟ್ಟಣದ ಶ್ರೀರಾಮಕೃಷ್ಣ ಆಂಗ್ಲಮಾದ್ಯಮ ಶಾಲೆಯಲ್ಲಿ ಕನ್ನಡಪ್ರಭ ವಿದ್ಯಾರ್ಥಿ ಸಂಚಿಯನ್ನು ರೋಟರಿ ಕ್ಲಬ್ ಅಧ್ಯಕ್ಷ ಸುರೇಶ್ ಹೆಗ್ಡೆ ಬಿಡುಗಡೆಗೊಳಿಸಿದರು.