ಸಾರಾಂಶ
ಮಂಗಳೂರು ಎಕ್ಸ್‌ಪರ್ಟ್ ಪದವಿ ಪೂರ್ವಕಾಲೇಜಿನ ವಾರ್ಷಿಕ ದಿನಾಚರಣೆ ‘ಎಕ್ಸ್‌ಪರ್ಟ್ ಡೇ’ ಸಭಾಂಗಣದಲ್ಲಿ ನಡೆಯಿತು. ಎಕ್ಸ್‌ಪರ್ಟ್ ಕಾಲೇಜಿನ ಹಳೆ ವಿದ್ಯಾರ್ಥಿ ಅಭಿರಾಮ್ ರಾವ್ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಮಂಗಳೂರುವಿದ್ಯಾರ್ಥಿಗಳು ಕೇವಲ ಶಿಕ್ಷಣದಲ್ಲಿ ಮಾತ್ರ ಸಾಧನೆಯನ್ನು ಮಾಡದೆ ತಮ್ಮನ್ನು ಒಳ್ಳೆಯ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಯಾವುದೇ ಕ್ಷೇತ್ರವನ್ನು ನಾವು ಆಯ್ಕೆ ಮಾಡಿದರು ಪರಿಶ್ರಮವಿಲ್ಲದೆ ಯಶಸ್ಸು, ನೆಮ್ಮದಿಯ ಬದುಕನ್ನು ಪಡೆಯಲು ಖಂಡಿತ ಸಾಧ್ಯವಿಲ್ಲ ಎಂದು ಎಕ್ಸ್‌ಪರ್ಟ್ ಕಾಲೇಜಿನ ಹಳೆ ವಿದ್ಯಾರ್ಥಿ ಅಭಿರಾಮ್ ರಾವ್ ತಿಳಿಸಿದರು.
ಎಕ್ಸ್‌ಪರ್ಟ್ ಪದವಿ ಪೂರ್ವಕಾಲೇಜಿನ ವಾರ್ಷಿಕ ದಿನಾಚರಣೆ ‘ಎಕ್ಸ್‌ಪರ್ಟ್ ಡೇ’ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್. ನಾಯಕ್ ಹಾಗೂ ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್ ವಿದ್ಯಾರ್ಥಿಗಳಿಗೆ ಕಾಲೇಜಿನ ವಾರ್ಷಿಕೋತ್ಸವದ ಕುರಿತಾಗಿ ಶುಭ ಹಾರೈಸಿದರು.ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಮಚಂದ್ರಭಟ್ ಸ್ವಾಗತಿಸಿದರು. ಪ್ರಥಮ ಪಿಯುಸಿ ವಿದ್ಯಾರ್ಥಿನಿ ಜಾಹ್ನವಿ ಶೆಣೈ ನಿರೂಪಿಸಿದರು.ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್. ನಾಯಕ್, ವಾಸ್ತುಶಿಲ್ಪತಜ್ಞೆ ದೀಪಿಕಾ ಎ. ನಾಯಕ್, ಸಂಯೋಜಕ ಉಪನ್ಯಾಸಕ ಭರತ್‌ಚಂದ್ರ ಇದ್ದರು.
ಶಿಕ್ಷಣ ಸಂಸ್ಥೆಯ ಟ್ರಸ್ಟಿ ಸುರೇಶ್ ಪೈ ಅವರು ಶೈಕ್ಷಣಿಕ ಸಾಲಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಬಹುಮಾನ ವಿತರಿಸಿದರು.