ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು : ಶೀಲಾ

| Published : Jul 21 2025, 12:00 AM IST

ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು : ಶೀಲಾ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಅದಕ್ಕೆ ವಿದ್ಯಾರ್ಥಿ ಸಂಘವೇ ಪ್ರಥಮ ಹೆಜ್ಜೆಯಾಗಿದೆ ಎಂದು ನಗರಸಭಾ ಅಧ್ಯಕ್ಷೆ ಬಿ.ಶೀಲಾ ದಿನೇಶ್ ಹೇಳಿದರು.

ಶಾಲಾ ವಿದ್ಯಾರ್ಥಿ ಸಂಘ, ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು. ಅದಕ್ಕೆ ವಿದ್ಯಾರ್ಥಿ ಸಂಘವೇ ಪ್ರಥಮ ಹೆಜ್ಜೆಯಾಗಿದೆ ಎಂದು ನಗರಸಭಾ ಅಧ್ಯಕ್ಷೆ ಬಿ.ಶೀಲಾ ದಿನೇಶ್ ಹೇಳಿದರು.ಜ್ಯೋತಿನಗರದ ಸಮೀಪದ ಮಲೆನಾಡು ವಿದ್ಯಾಸಂಸ್ಥೆ ಪ್ರಾಯೋಗಿಕ ಪ್ರೌಢಶಾಲೆ ಬಿ.ಇಡಿ ಕಾಲೇಜು ಸಭಾಂಗಣದಲ್ಲಿ ನಡೆದ ಶಾಲಾ ವಿದ್ಯಾರ್ಥಿ ಸಂಘ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ವಿಶ್ವದಲ್ಲೇ ಅತಿ ಹೆಚ್ಚು ಯುವ ಸಮೂಹ ಹೊಂದಿರುವ ರಾಷ್ಟ್ರ ಭಾರತ. ಕೆಲವೇ ವರ್ಷಗಳಲ್ಲಿ ಪ್ರಬುದ್ಧ ಹಾಗೂ ಪ್ರಬಲ ದೇಶವಾಗುವುದರಲ್ಲಿ ಸಂಶಯ ವಿಲ್ಲ. ಹೀಗಾಗಿ ಯುವ ಪೀಳಿಗೆ ಕಲಿಕೆಯಲ್ಲಿ ಹೆಚ್ಚು ಶ್ರದ್ದೆ ವಹಿಸಬೇಕು. ಜೊತೆಗೆ ಸಮಾಜದಲ್ಲಿ ಸನ್ನಡತೆ ವ್ಯಕ್ತಿಯಾಗಿ ರೂಪುಗೊಳ್ಳ ಬೇಕು ಎಂದು ಸಲಹೆ ಮಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಂದ ಚುನಾಯಿತರಾದ ನಾಯಕರು ಆಳ್ವಿಕೆ ನಡೆಸುತ್ತಾರೆ. ಉತ್ತಮ ಆಡಳಿತ ನಡೆಸು ವವರು ಭವಿಷ್ಯದಲ್ಲಿ ಜನಮೆಚ್ಚಿಗೆಗೆ ಪಾತ್ರರಾಗುತ್ತಾರೆ. ಹೀಗಾಗಿ ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಪ್ರಜಾಪ್ರಭುತ್ವದ ಹಂತಗಳನ್ನು ತಿಳಿಯಲು ವಿದ್ಯಾರ್ಥಿ ಸಂಘ ಅತ್ಯವಶ್ಯಕ ಎಂದು ಹೇಳಿದರು.

ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದ ಎಂಇಎಸ್ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯ್‌ಕುಮಾರ್, ಪ್ರತಿಯೊಬ್ಬ ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ರುದ್ರಪ್ಪ ಮಾತನಾಡಿ, ಪ್ರತಿಭಾ ಪುರಸ್ಕಾರ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತವೆ. ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗುತ್ತದೆ. ಇದು ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಲೆನಾಡು ವಿದ್ಯಾ ಸಂಸ್ಥೆ ಅಧ್ಯಕ್ಷ ಎನ್.ಕೇಶವಮೂರ್ತಿ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ವಿ.ಷಡಾಕ್ಷರಿ, ಶಾಲೆಯ ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು. 20 ಕೆಸಿಕೆಎಂ 2ಚಿಕ್ಕಮಗಳೂರಿನ ಮಲೆನಾಡು ವಿದ್ಯಾಸಂಸ್ಥೆ ಬಿ.ಇಡಿ ಕಾಲೇಜು ಸಭಾಂಗಣದಲ್ಲಿ ನಡೆದ ಶಾಲಾ ವಿದ್ಯಾರ್ಥಿ ಸಂಘ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್‌ ಉದ್ಘಾಟಿಸಿದರು. ಡಾ. ಡಿ.ಎಲ್‌. ವಿಜಯಕು ಮಾರ್‌, ಎನ್‌. ಕೇಶವಮೂರ್ತಿ ಇದ್ದರು.