ಕಲೆ, ಸಾಹಿತ್ಯ, ಸಂಗೀತವಿಲ್ಲದ ಬದುಕು ಪಶು ಸಮಾನ ಎಂಬ ಹೇಳಿಕೆ ಇದೆ. ವಿವಿಧ ಕೃತಿಗಳನ್ನು ಓದುವ ಮೂಲಕ ವಿಶಾಲ ಜಗತ್ತಿಗೆ ತೆರೆದುಕೊಂಡಾಗ ಸಂಕುಚಿತತೆ ಕಡಿಮೆಯಾಗಿ ಸಂಪೂರ್ಣ ವ್ಯಕ್ತಿತ್ವ ರೂಪುಗೊಳ್ಳುತ್ತದೆ.

ಗದಗ: ಸಾಹಿತ್ಯ, ಸಂಸ್ಕೃತಿಯ ವಾರಸುದಾರರಾಗಿರುವ ಯುವ ಜನಾಂಗ ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಅಭಿರುಚಿಗಳನ್ನು ಬೆಳೆಸಿಕೊಂಡು ಸಹೃದಯತೆ ಹೊಂದಬೇಕು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮದಿನದ ನಿಮಿತ್ತ ಯುವ ದಿನಾಚರಣೆ ಅಂಗವಾಗಿ ಜರುಗಿದ ಸಾಹಿತ್ಯಾಭಿರುಚಿ ಸಂವಾದ ಹಾಗೂ ಯುವ ಕವಿಗೋಷ್ಠಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಲೆ, ಸಾಹಿತ್ಯ, ಸಂಗೀತವಿಲ್ಲದ ಬದುಕು ಪಶು ಸಮಾನ ಎಂಬ ಹೇಳಿಕೆ ಇದೆ. ವಿವಿಧ ಕೃತಿಗಳನ್ನು ಓದುವ ಮೂಲಕ ವಿಶಾಲ ಜಗತ್ತಿಗೆ ತೆರೆದುಕೊಂಡಾಗ ಸಂಕುಚಿತತೆ ಕಡಿಮೆಯಾಗಿ ಸಂಪೂರ್ಣ ವ್ಯಕ್ತಿತ್ವ ರೂಪಗೊಳ್ಳುತ್ತದೆ. ಯುವ ಸಮೂಹ ಅಂತರ್ಜಾಲದಲ್ಲಿ ತಮ್ಮನ್ನು ತಾವು ಕಳೆದುಕೊಳ್ಳದೇ ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು. ಶ್ರೀಮಂತ ಸಂಸ್ಕೃತಿಯ ಅರಿವನ್ನು ಹೊಂದಬೇಕು. ಯುವಕರಲ್ಲಿರುವ ಅಗಾಧ ಶಕ್ತಿ, ಸಾಮರ್ಥ್ಯ ವ್ಯಕ್ತಿಯ ಉನ್ನತಿಯ ಜೊತೆಗೆ ದೇಶದ ಪ್ರಗತಿಗೆ ಪೂರಕವಾಗಬೇಕು. ಆಗ ಮಾತ್ರ ಸ್ವಾಮಿ ವಿವೇಕಾನಂದರ ಆದರ್ಶ ಪಾಲನೆಯಾಗುತ್ತದೆ ಎಂದರು.ನಂತರ ನಡೆದ ಸಂವಾದ ಕಾರ್ಯಕ್ರಮದಲ್ಲಿ ಎಂ.ಎಸ್. ಹುಲ್ಲೂರ, ವೀರೇಶ ಹರ್ಲಾಪೂರ, ರಾಜೇಶ್ವರಿ ಬಡ್ನಿ, ಅನುಪ್ರಿಯಾ ಬಾಪುರಿ, ಅನ್ನಪೂರ್ಣ ಕಾಡಣ್ಣವರ, ಮೇಘಾ ಹಾದಿಮನಿ ತಮ್ಮ ಅಭಿಪ್ರಾಯ ಮಂಡಿಸಿದರು. ನಂತರ ಜರುಗಿದ ಯುವ ಕವಿಗೋಷ್ಠಿಯಲ್ಲಿ ಗಣೇಶ ಪಾಟೀಲ, ಲಕ್ಷ್ಮೀ ಪಾಟೀಲ ಸಂತೋಷ ಜಿಜ್ಜೇರಿ, ಸಂಗೀತಾ ಜೋಗಿನ, ಅನ್ನಪೂರ್ಣ ಕುರಿ, ಅನಿತಾ ಅರಳಿ ಕವನ ವಾಚಿಸಿದರು.

ರಕ್ಷಿತಾ ಗಿಡ್ನಂದಿ ನಿರೂಪಿಸಿದರು. ಅಮರೇಶ ರಾಂಪೂರ ಸ್ವಾಗತಿಸಿದರು. ರಾಹುಲ್ ಗಿಡ್ನಂದಿ ವಂದಿಸಿದರು. ಚಂದ್ರಶೇಖರ ವಸ್ತ್ರದ, ವಿದ್ಯಾಧರ ದೊಡ್ಡಮನಿ, ಅನ್ನದಾನಿ ಹಿರೇಮಠ, ಶಶಿಕಾಂತ ಕೊರ್ಲಹಳ್ಳಿ, ವಿ.ಎಸ್. ದಲಾಲಿ, ಕೆ.ಎಸ್. ದಂಡಗಿ, ಕಿಶೋರಬಾಬು ನಾಗರಕಟ್ಟಿ, ಶೈಲಶ್ರೀ ಕಪ್ಪರದ, ಡಿ.ಎಸ್. ಬಾಪುರಿ, ಕೆ.ಎಸ್. ಬಾಳಿಕಾಯಿ, ಎ.ಎಸ್. ಮಕಾನದಾರ, ಬಸವರಾಜ ಗಣಪ್ಪನವರ, ಸಿ.ಎಂ. ಮಾರನಬಸರಿ, ರತ್ನಾ ಪುರಂತರ, ಶೈಲಜಾ ಗಿಡ್ನಂದಿ, ರಾಜಶೇಖರ ಕರಡಿ, ಬಿ.ಬಿ. ಹೊಳಗುಂದಿ, ಶಿಲ್ಪಾ ಮ್ಯಾಗೇರಿ, ಐಶ್ವರ್ಯ ಧರಣೆಪ್ಪಗೌಡರ, ಪ್ರತಿಭಾ ಪಾಟೀಲ, ಪ್ರೇಮಾ ಕಾಡಣ್ಣವರ, ಎಂ.ಎಂ. ಮಕಾನದಾರ, ಎಸ್.ಪಿ. ಗೌಳಿ, ರವಿ ದೇವರಡ್ಡಿ, ಸಾಕ್ಷಿ ದೇವರಡ್ಡಿ, ವಿ.ಎಸ್. ದಿಂಡೂರ, ಅಂದಾನೆಪ್ಪ ವಿಭೂತಿ, ಸುಧೀರ ಘೋರ್ಪಡೆ, ರಾಮಚಂದ್ರ ಮೋನೆ, ಆನಂದ ಹಡಪದ, ಉಮಾ ಕಣವಿ ಮೊದಲಾದವರು ಉಪಸ್ಥಿತರಿದ್ದರು.