ಸಾರಾಂಶ
ಅಕ್ಷರ, ಶಿಕ್ಷಣ ಎನ್ನವುದು ಪ್ರತಿಯೊಬ್ಬರಿಗೂ ಅತ್ಯವಶ್ಯಕ. ಸಮಾಜದ ಅನಕ್ಷರಸ್ಥರನ್ನು ಗುರುತಿಸಿ ಅವರಿಗೆ ಅಕ್ಷರಭ್ಯಾಸ ಮಾಡಿಸಿ ಶಿಕ್ಷಣ ಕಲಿಸುವ ಕೆಲಸವವನ್ನು ವಿದ್ಯಾರ್ಥಿಗಳು ಮಾಡಿದರೆ ಸಾಕ್ಷರತೆ ದಿನಾಚರಣೆ ಮಾಡಿದಕ್ಕೂ ಸಾರ್ಥಕವಾಗುತ್ತದೆ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಸಾಕ್ಷರತೆ ಶಿಕ್ಷಣದ ಪಂಚಾಂಗ ಮಾತ್ರವಲ್ಲದೆ ಅಭಿವೃದ್ಧಿಶೀಲ ರಾಷ್ಟ್ರದ ಬೆನ್ನೆಲುಬಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಸಾಹಿತ್ಯ, ಪತ್ರಿಕೆ ಓದುಕ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಪ್ರಾಂಶುಪಾಲ ಡಾ.ನಿಶಾಂತ್ ಎ.ನಾಯ್ಡು ಹೇಳಿದರುತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಿಟರರಿ ಕ್ಲಬ್ ಆಂತರಿಕ ಗುಣಮಟ್ಟ ಭರವಸೆ ಕೋಶದ ಘಟಕದಿಂದ ನಡೆದ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಮಾತನಾಡಿದರು.
ಅಕ್ಷರ, ಶಿಕ್ಷಣ ಎನ್ನವುದು ಪ್ರತಿಯೊಬ್ಬರಿಗೂ ಅತ್ಯವಶ್ಯಕ. ಸಮಾಜದ ಅನಕ್ಷರಸ್ಥರನ್ನು ಗುರುತಿಸಿ ಅವರಿಗೆ ಅಕ್ಷರಭ್ಯಾಸ ಮಾಡಿಸಿ ಶಿಕ್ಷಣ ಕಲಿಸುವ ಕೆಲಸವವನ್ನು ವಿದ್ಯಾರ್ಥಿಗಳು ಮಾಡಿದರೆ ಸಾಕ್ಷರತೆ ದಿನಾಚರಣೆ ಮಾಡಿದಕ್ಕೂ ಸಾರ್ಥಕವಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಕನಿಷ್ಠ ಪಕ್ಷ ತಮ್ಮ ಗ್ರಾಮಗಳಲ್ಲಿ ಇರುವ ಅನಕ್ಷರಸ್ಥರನ್ನು ಗುರುತಿಸಿ ಅವರಿಗೆ ಅಕ್ಷರ ಕಲಿಸುವ ಕೆಲಸ ಮಾಡಬೇಕು ಎಂದರು.ಪತ್ರಕರ್ತ ಚನ್ನಮಾದೇಗೌಡ ಮಾತನಾಡಿ, ಭೂಮಿ ಮೇಲೆ ಜೀವಿಸುವ ಪ್ರತಿಯೊಬ್ಬ ವ್ಯಕ್ತಿಯು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ವೈಯಕ್ತಿಕ ಹಕ್ಕುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ನಮ್ಮ ಭಾವನೆ, ಆಲೋಚನೆ ವ್ಯಕ್ತಪಡಿಸಲು ಇರುವ ಏಕೈಕ ಮಾರ್ಗ ಸಾಕ್ಷರತೆ, ಓದುವ ಬರೆಯುವ ಮತ್ತು ಗ್ರಹಿಸುವ ಮೂಲಕ ಸಂವಹನ ನಡೆಸುವ ಸಾಮರ್ಥ್ಯ ಶಿಕ್ಷಣಕ್ಕಿದೆ ಎಂದರು.
ವಿದ್ಯಾರ್ಥಿಗಳು ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಹೆಚ್ಚು ಅರಿವು ಮೂಡಿಸಿಕೊಳ್ಳಬೇಕು. ಸ್ಪರ್ಧಾತ್ಮ ಯುಗದಲ್ಲಿ ಇರುವ ವಿದ್ಯಾರ್ಥಿಗಳು ನಿರಂತರವಾಗಿ ಪತ್ರಿಕೆಗಳನ್ನು ಓದುವ ಹವ್ಯಾಸ ರೂಡಿಸಿಕೊಂಡರೆ ಮುಂದೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಜತೆಗೆ ದೊಡ್ಡ ಹುದ್ದೆಗಳನ್ನು ಅಲಂಕರಿಸಲು ನೆರವಾಗುತ್ತವೆ ಎಂದರು.ಕಾರ್ಯಕ್ರಮದಲ್ಲಿ ಆಂತರಿಕ ಗುಣಮಟ್ಟ ಭರವಸೆಯ ಘಟಕದ ಸಂಯೋಜಕ ರಘುನಂದನ್, ಲಿಟರರಿ ಕಬ್ಲ್‌ನ ಸದಸ್ಯ ಮೋನಿಷ್, ಕನ್ನಡ ವಿಭಾಗದ ಮುಖ್ಯಸ್ಥ ಶ್ರೀಧರ್, ಉಪನ್ಯಾಸಕ ಕುಮಾರ್ ಸೇರಿದಂತೆ ಉಪಸ್ಥಿತರಿದ್ದರು.