ಸಾರಾಂಶ
- ಅಣಜಿಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ ಕಟ್ಟಡ ಉದ್ಘಾಟಿಸಿ ಸಂಸದೆ ಡಾ.ಪ್ರಭಾ - - - ಕನ್ನಡಪ್ರಭ ವಾರ್ತೆ ದಾವಣಗೆರೆ ವಸತಿ ಶಾಲೆ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಹೇಳಬೇಕು. ಇದರಿಂದ ಅವರಲ್ಲಿನ ಆತಂಕ ನಿವಾರಣೆಗೊಳಿಸಲು ಸಾಧ್ಯವಾಗುತ್ತದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ತಾಲೂಕಿನ ಅಣಜಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ನೂತನ ಶಾಲಾ ಕಟ್ಟಡ ಉದ್ಘಾಟನೆ ನೆರವೇರಿಸಿ, ಮಕ್ಕಳೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.ಸ್ವಚ್ಛ ಹಾಗೂ ಸುಂದರ ವಾತಾವರಣದಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಉತ್ತಮವಾದ ಪರಿಸರವಿದೆ. ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ಲಭಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದೆಯಾಗಿ ನಾನು ಕೂಡ ಸೂಕ್ತ ಸಹಕಾರ ನೀಡುತ್ತೇವೆ ಎಂದರು.
ಪೋಷಕರು ನಂಬಿಕೆಯಿಟ್ಟು ಶಾಲೆಗೆ ಕಳಿಸುತ್ತಾರೆ. ಆದ್ದರಿಂದ ಮಕ್ಕಳು ಕೂಡ ಶಿಸ್ತು- ಸಂಯಮದಿಂದ ವರ್ತಿಸಬೇಕು. ಮಕ್ಕಳು ಉತ್ತಮ ವಿದ್ಯಾಭ್ಯಾಸದತ್ತ ಗಮನಹರಿಸಬೇಕು. ಜೊತೆಗೆ ಕ್ರೀಡೆ ಸೇರಿದಂತೆ ಇತರೆ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಗೋಲ್ಡನ್ ಟೈಮ್ ಇದ್ದಂತೆ, ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಮಾಡುವ ಜೊತೆಗೆ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ಮಾಡಬೇಕು ಎಂದು ಹೇಳಿದರು.ಶಾಲೆಯ ಸುತ್ತಲೂ ಕಾಂಪೌಂಡ್ ನಿರ್ಮಾಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಂಪೌಂಡ್ ನಿರ್ಮಾಣ ಮಾಡಲಾಗುವುದು ಎಂದರು.
ಇದೇ ವೇಳೆ ಸಂಸದರು ವಿದ್ಯಾರ್ಥಿಗಳೊಂದಿಗೆ ಕೆಲಸಮಯ ಮುಕ್ತ ಸಂವಾದ ನಡೆಸಿ, ಶಿಕ್ಷಣದ ಮಹತ್ವ ಹಾಗೂ ವಿದ್ಯಾರ್ಥಿಗಳ ಆಸಕ್ತಿ ಬಗ್ಗೆ ಅರಿವು ಮೂಡಿಸಿದ್ದು ವಿಶೇಷವಾಗಿತ್ತು.ಕಾರ್ಯಕ್ರಮದಲ್ಲಿ ಶಾಸಕ ಕೆ.ಎಸ್. ಬಸವಂತಪ್ಪ, ತಹಸೀಲ್ದಾರ್ ಎಂ.ಬಿ. ಅಶ್ವಥ್, ಗ್ರಾಪಂ ಅಧ್ಯಕ್ಷ ಲೋಕಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ಚಂದ್ರಣ್ಣ, ಕಲ್ಪನಾ ಪರಶುರಾಮ್ ಹಾಗೂ ಅಣಜಿ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- - - -22ಕೆಡಿವಿಜಿ31.ಜೆಪಿಜಿ:ದಾವಣಗೆರೆ ತಾಲೂಕು ಅಣಜಿ ಗ್ರಾಮದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ನೂತನ ಶಾಲಾಕಟ್ಟಡವನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಉದ್ಘಾಟಿಸಿದರು. -22ಕೆಡಿವಿಜಿ32.ಜೆಪಿಜಿ:
ದಾವಣಗೆರೆ ತಾಲೂಕು ಅಣಜಿ ಗ್ರಾಮದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ವಸತಿ ಶಾಲೆ ಮಕ್ಕಳೊಂದಿಗೆ ಸಂವಾದ ನಡೆಸಿದರು.