ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಅಳವಡಿಸಿಕೊಳ್ಳಿ: ಶಿಕ್ಷಣ ಸಂಯೋಜಕ ಶ್ರೀನಿವಾಸ್

| Published : Feb 10 2024, 01:45 AM IST

ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಅಳವಡಿಸಿಕೊಳ್ಳಿ: ಶಿಕ್ಷಣ ಸಂಯೋಜಕ ಶ್ರೀನಿವಾಸ್
Share this Article
  • FB
  • TW
  • Linkdin
  • Email

ಸಾರಾಂಶ

ಡಾ.ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯಗಳನ್ನು ವಿದ್ಯಾರ್ಥಿಗಳು ಸೇರಿ ಎಲ್ಲರೂ ಸಮರ್ಪಕವಾಗಿ ಅಳವಡಿಸಿಕೊಂಡರೆ ಭವ್ಯ ಭಾರತ ನಿರ್ಮಾಣವಾಗಲಿದೆ. ಸಂವಿಧಾನದ ಮಹತ್ವ ತಿಳಿಸಲು ಪ್ರತಿ ಹಳ್ಳಿಯಲ್ಲೂ ಜಾಗೃತಿ ರಥ ಸಂಚರಿಸುತ್ತಿದೆ .

ಕನ್ನಡಪ್ರಭ ವಾರ್ತೆ ಮೇಲುಕೋಟೆ

ದೇಶದಲ್ಲಿ ಸಂವಿಧಾನ ಜಾರಿಯಾಗಿದ್ದರಿಂದ ಭಾರತೀಯರೆಲ್ಲರಿಗೂ ಸಮಾನ ಅವಕಾಶ ದೊರೆಯುವಂತಾಗಿದೆ ಎಂದು ಶಿಕ್ಷಣ ಸಂಯೋಜಕ ಶ್ರೀನಿವಾಸ್ ತಿಳಿಸಿದರು.

ಮೇಲುಕೋಟೆಯಲ್ಲಿ ಸಂವಿಧಾನ ಜಾಗೃತಿ ರಥವನ್ನು ಸ್ವಾಗತಿಸಿ ಮಾತನಾಡಿದ ಅವರು, ಡಾ.ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯಗಳನ್ನು ವಿದ್ಯಾರ್ಥಿಗಳು ಸೇರಿ ಎಲ್ಲರೂ ಸಮರ್ಪಕವಾಗಿ ಅಳವಡಿಸಿಕೊಂಡರೆ ಭವ್ಯ ಭಾರತ ನಿರ್ಮಾಣವಾಗಲಿದೆ. ಸಂವಿಧಾನದ ಮಹತ್ವ ತಿಳಿಸಲು ಪ್ರತಿ ಹಳ್ಳಿಯಲ್ಲೂ ಜಾಗೃತಿ ರಥ ಸಂಚರಿಸುತ್ತಿದೆ ಎಂದು ಹೇಳಿದರು.

ಮೇಲುಕೋಟೆ ಗ್ರಾಪಂ ಅಧ್ಯಕ್ಷ ಎನ್.ಸೋಮಶೇಖರ್, ಉಪಾಧ್ಯಕ್ಷ ತಿರುಮಲೆ, ಸದಸ್ಯ ಜಿ.ಕೆ.ಕುಮಾರ್ ಸೇರಿ ಸದಸ್ಯರು ಗ್ರಾಪಂ ಆವರಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಪೂಜೆ ಸಲ್ಲಿಸಿ ಸ್ವಾಗತ ಕೋರಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲೇಶ್ ಮಾತನಾಡಿ, ತಾಲೂಕಿನ ಡಿಂಕಾ ಗ್ರಾಮಕ್ಕೆ ಪ್ರವೇಶಿಸಿದ ಜಾಗೃತಿ ರಥಕ್ಕೆ ಅದ್ಧೂರಿಯಾಗಿ ಸ್ವಾಗತ ನೀಡಲಾಗಿದೆ. ಮೇಲುಕೋಟೆ ಹೋಬಳಿ ಗ್ರಾಮಗಳು, ಹಾಗೂ ಪಾಂಡವಪುರ ಪಟ್ಟಣ ಹಾಗೂ ತಾಲೂಕಿನ ಎಲ್ಲಾ ಗ್ರಾಪಂನಲ್ಲಿ ಜಾಗೃತಿ ಮೂಡಿಸಿದ ರಥವು ಶ್ರೀರಂಗಪಟ್ಟಣ ತಾಲೂಕು ಪ್ರವೇಶಿಸಿದೆ ಎಂದು ಹೇಳಿದರು.

ಹೋಬಳಿಯ ಎಲ್ಲಾ ಗ್ರಾಪಂಗಳಿಗೆ ಆಗಮಿಸಿದ ರಥಕ್ಕೆ ಸರ್ಕಾರಿ ಶಾಲಾ ಮಕ್ಕಳು ಪೂರ್ಣಕುಂಭದೊಂದಿಗೆ ಅದ್ಧೂರಿಯಾಗಿ ಸ್ವಾಗತ ಕೋರಿದರು.

ಗ್ರಾಪಂ ಸದಸ್ಯ ಹೊಸಹಳ್ಳಿ ಜಯರಾಮ್, ವಸತಿ ಶಾಲೆ ಪ್ರಾಂಶುಪಾಲರು ಗಂಗೇಶ್, ಯದುಶೈಲ ಪ್ರೌಢಶಾಲೆ ಮುಖ್ಯ ಶಿಕ್ಷಕ ವಸಂತಕುಮಾರ್ ಹಾಗೂ ಸಹಶಿಕ್ಷಕರಾದ ಗುರುದೇವ್, ನಾಯಕ, ಶಿವಣ್ಣ ಮತ್ತು ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಲೋಕೇಶ್, ಕೋಮಲ,ಜಯರಾಮು, ದಶವಂತಕುಮಾರ್,ರೂಪ ಹಾಗೂ ಶಶಿಕುಮಾರ್, ಪಿಡಿಒ ರಾಜೇಶ್ ಪಾಲ್ಗೊಂಡಿದ್ದರು.