ಸಾರಾಂಶ
ಹಾವೇರಿ: ವಿದ್ಯಾಭ್ಯಾಸದ ಜೊತೆಗೆ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದು ವಿದ್ಯಾರ್ಥಿಗಳಿಗೆ ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು. ತಾಲೂಕಿನ ಗಾಂಧಿಪುರ ಸರ್ಕಾರಿ ಪ್ರಥಮ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಸೋಮವಾರ ಸಾಂಸ್ಕೃತಿಕ ವೇದಿಕೆ ಕ್ರೀಡಾ ವಿಭಾಗ ರಾಷ್ಟ್ರೀಯ ಸೇವಾ ಯೋಜನೆ, ಸ್ಕೌಟ್ಸ್ ಮತ್ತು ಗೈಡ್ಸ ಹಾಗೂ ರೆಡ್ ಕ್ರಾಸ್ ಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಗಳಾದ ಹಾವೇರಿ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಡಾ. ವಿಜಯಲಕ್ಷ್ಮಿ ಎಂ. ತಿರ್ಲಾಪುರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಒಳ್ಳೆಯ ನಾಯಕತ್ವದ ಗುಣಗಳನ್ನು ಮತ್ತು ಸಂಸ್ಕಾರವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಕಲಿಯುವುದು ಬಹಳ ಮುಖ್ಯವಾಗಿದೆ. ಉನ್ನತ ಶಿಕ್ಷಣದ ಮಹತ್ವದ ಕುರಿತು ತಿಳಿದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಸಾನಿಧ್ಯ ವಹಿಸಿದ್ದ ಡಾ. ಗುರುಲಿಂಗ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಒಳ್ಳೆಯ ಹವ್ಯಾಸವನ್ನು ಬೆಳೆಸಿಕೊಳ್ಳುವುದರ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ತಂದೆ-ತಾಯಿ ಮತ್ತು ಗುರುಗಳಿಗೆ ಋಣಿಯಾಗಿರಬೇಕು ಎಂದರು.ಮಹಾವಿದ್ಯಾಲಯದ ಪ್ರಾಂಶುಪಾಲ ಪ್ರೊ. ಡಿ.ಟಿ. ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಯಶ್ರೀ ಸ್ವಾಗತಿಸಿದರು. ಹನುಮಂತ ಕಾರ್ಯಕ್ರಮ ನಿರೂಪಿಸಿದರು. ತಿಪ್ಪೇಸ್ವಾಮಿ ವಂದಿಸಿದರು.