ವಿದ್ಯಾರ್ಥಿಗಳು ಶಿಸ್ತು ಪಾಲಿಸಲಿ: ಶಾಸಕ ಭೀಮಣ್ಣ ನಾಯ್ಕ

| Published : Jul 20 2025, 01:15 AM IST

ಸಾರಾಂಶ

ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ನುರಿತ ಹಾಗೂ ಅನುಭವಿ ಶಿಕ್ಷಕರಿರುತ್ತಾರೆ.

ಸಿದ್ದಾಪುರ: ಪಟ್ಟಣದ ಹಾಳದಕಟ್ಟಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತು, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಚಾಲನೆ ನೀಡಿದರು.

ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ನುರಿತ ಹಾಗೂ ಅನುಭವಿ ಶಿಕ್ಷಕರಿರುತ್ತಾರೆ. ವಿದ್ಯಾರ್ಥಿಗಳು ಮೊದಲು ಶಿಸ್ತನ್ನು ಪಾಲಿಸಬೇಕು. ಶಿರಸಿ ಹಾಗೂ ಸಿದ್ದಾಪುರದ ಸರ್ಕಾರಿ ಪದವಿ ಕಾಲೇಜಿಗೆ ವಿದ್ಯಾರ್ಥಿಗಳ ಬೇಡಿಕೆಯ ಕೋರ್ಸ್‌ಗಳನ್ನು ಮಂಜೂರಿ ಮಾಡಿಸಿದ್ದೇನೆ. ಕಾಲೇಜಿನ ಸಭಾಭವನಕ್ಕೆ ಅನುದಾನ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುರೇಂದ್ರ ದಫೇದಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಜ್ಞಾನ ಹೆಚ್ಚಿದಂತೆ ಅವಕಾಶಗಳು ಹೆಚ್ಚು ತೆರೆದುಕೊಳ್ಳುತ್ತೇವೆ. ಪ್ರತಿ ಹಂತದಲ್ಲೂ ಜೀವನೋತ್ಸಾಹ ಇರಬೇಕು. ಸಾಮಾಜಿಕ ಕಳಕಳಿಯೊಂದಿಗೆ ಜೀವನದಲ್ಲಿ ನಿಮ್ಮ ಗುರಿ ಸಾಧಿಸಿ ಎಂದರು.

ಕಾಲೇಜಿನ ಪ್ರಾಚಾರ್ಯ ಭಾಸ್ಕರ ಹೆಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ವೇಳೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಲೀನಾ ಫರ್ನಾಂಡಿಸ್, ಲೀಲಾವತಿ ನಾಯ್ಕ, ತಾಪಂ ಮಾಜಿ ಅಧ್ಯಕ್ಷ ಸಿ.ಆರ್. ನಾಯ್ಕ, ವಿದ್ಯಾರ್ಥಿ ವೇದಿಕೆಯ ರಾಜೇಶ ನಾಯ್ಕ, ಯೋಶಿತಾ ಕೆ.ಎಸ್. ಉಪಸ್ಥಿತರಿದ್ದರು.

ಕಾಲೇಜಿನ ಉಪನ್ಯಾಸಕ ಕೆ.ಎಂ. ಲಕ್ಷ್ಮಣ ಸ್ವಾಗತಿಸಿದರು. ರಾಮಕೃಷ್ಣ ಸಭಾಹಿತ ಮನವಿ ವಾಚಿಸಿದರು.

ಸಿದ್ದಾಪುರದ ಸರ್ಕಾರಿ ಪಪೂ ಕಾಲೇಜಿನಲ್ಲಿ ಭೀಮಣ್ಣ ನಾಯ್ಕ ವಿದ್ಯಾರ್ಥಿ ಸಂಸತ್ತು, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಿದರು.