ವಿದ್ಯಾರ್ಥಿಗಳು ಮೊಬೈಲ್‌ ಗೀಳಿನಿಂದ ಹೊರಬರಲಿ: ಎಲ್.ವೈ. ಶಿರಕೋಳ

| Published : Jun 28 2025, 12:18 AM IST

ವಿದ್ಯಾರ್ಥಿಗಳು ಮೊಬೈಲ್‌ ಗೀಳಿನಿಂದ ಹೊರಬರಲಿ: ಎಲ್.ವೈ. ಶಿರಕೋಳ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿಗಳು ದುಶ್ಚಟದಿಂದ ಮತ್ತು ಮೊಬೈಲ್ ಗೀಳಿನಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ತಂದೆ- ತಾಯಿ, ಗುರು-ಹಿರಿಯರನ್ನು ಗೌರವಿಸುವ ಮೂಲಕ ಕಿರಿಯರಿಗೆ ಹಾಗೂ ಸಮಾಜಕ್ಕೆ ಮಾರ್ಗದರ್ಶಕರಾಗಬೇಕು.

ಸವಣೂರು: ಕೀಳರಿಮೆಯಿಂದ ಹೊರಬಂದು ಸಕಾರಾತ್ಮಕ ಚಿಂತನೆ ಬೆಳೆಸಿಕೊಂಡು ನಿರಂತರ ಪ್ರಯತ್ನ ಮಾಡುತ್ತಿದ್ದರೆ ಯಶಸ್ಸು ಒಲಿಯುತ್ತದೆ. ಇದಕ್ಕೆ ಅನೇಕ ಉದಾಹರಣೆಗಳು ಕಣ್ಣುಮುಂದಿವೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಲ್.ವೈ. ಶಿರಕೋಳ ತಿಳಿಸಿದರು.

ತಾಲೂಕಿನ ಗುಂಡೂರ ಗ್ರಾಮದ ವೀರಭದ್ರೇಶ್ವರ ವಿದ್ಯಾಸಂಸ್ಥೆಯ ಕೀರ್ತಿ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ದುಶ್ಚಟದಿಂದ ಮತ್ತು ಮೊಬೈಲ್ ಗೀಳಿನಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ತಂದೆ- ತಾಯಿ, ಗುರು-ಹಿರಿಯರನ್ನು ಗೌರವಿಸುವ ಮೂಲಕ ಕಿರಿಯರಿಗೆ ಹಾಗೂ ಸಮಾಜಕ್ಕೆ ಮಾರ್ಗದರ್ಶಕರಾಗಬೇಕೆಂದರು.ಸಾಹಿತಿ ಶಿವಾನಂದ ಮ್ಯಾಗೇರಿ ಹಾಗೂ ಮತ್ತೋರ್ವ ಸಾಹಿತಿ ಕೆ.ಆರ್. ಹಿರೇಮಠ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷೆ ಶಶಿಕಲಾ ಪೊಲೀಸಗೌಡ್ರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗಂಜಿಗಟ್ಟಿಯ ಶಿವಲಿಂಗ ಶಿವಾಚಾರ್ಯ ಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶಿರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಶಂಕರಗೌಡ ಪೊಲೀಸಗೌಡ, ಗಂಗಣ್ಣ ಸಾತಣ್ಣವರ, ಬಸವರಾಜ ಸವೂರ, ಪ್ರಾಚಾರ್ಯ ಮಾಲತೇಶ ದಾನಪ್ಪನವರ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವಿಮಾ ಕಂತು ಪಾವತಿಸಲು ಜು. 31 ಕೊನೆಯ ದಿನ

ಹಾನಗಲ್ಲ: ರಾಜ್ಯದಲ್ಲಿ ಪ್ರಸಕ್ತ 2025- 26ನೇ ಸಾಲಿನ ಮುಂಗಾರು ಹಂಗಾಮಿನ ಹವಾಮಾನ ಆಧರಿತ ತೋಟಗಾರಿಕೆ ಬೆಳೆ ವಿಮಾ ಯೋಜನೆ ಜಾರಿಗೊಂಡಿದ್ದು, ವಿಮಾ ಕಂತು ಪಾವತಿಸಲು ಜು. 31 ಕೊನೆಯ ದಿನವಾಗಿದೆ ಎಂದು ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಬಣಕಾರ ತಿಳಿಸಿದ್ದಾರೆ.

ತಾಲೂಕಿನಲ್ಲಿ ಹವಾಮಾನ ಆಧರಿತ ಬೆಳೆವಿಮಾ ಯೋಜನೆಯಡಿ ಪ್ರಸ್ತುತ ಮುಂಗಾರು ಹಂಗಾಮಿಗೆ ಹಸಿಮೆಣಸಿನಕಾಯಿ, ಅಡಕೆ, ಶುಂಠಿ, ಮತ್ತು ಮಾವು ಬೆಳೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ರೈತರು ಪ್ರತಿ ಹೆಕ್ಟೇರ್‌ಗೆ ಅಡಕೆಗೆ(₹6400), ಹಸಿಮೆಣಸಿನಕಾಯಿ(₹3550), ಶುಂಠಿ(₹6500), ಮಾವು(₹4000) ಕಂತು ಪಾವತಿಸಬೇಕಿದೆ.ವಿಮಾ ಕಂತು ಪಾವತಿಸಿದ ರೈತರು ಕಾಲ ಕಾಲಕ್ಕೆ ಬೆಳೆ ಸಮೀಕ್ಷೆಯನ್ನು ಖುದ್ದಾಗಿ ಅಥವಾ ಗ್ರಾಮ ಆಡಳಿತಾಧಿಕಾರಿ ಅಧೀನ ಪಿಆರ್ ಮೂಲಕ ನಿಗದಿತ ಅವಧಿಯೊಳಗಾಗಿ ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ಮಂಜುನಾಥ ಬಣಕಾರ ತಿಳಿಸಿದ್ದಾರೆ.