ಸಾರಾಂಶ
ಕನ್ನಡ ಏಕೀಕರಣಕ್ಕಾಗಿ ದುಡಿದ ಮಹನೀಯರನ್ನು ಮಕ್ಕಳಿಗೆ ಪರಿಚಯಿಸುವಂತಹ ಕಾರ್ಯ ಶಿಕ್ಷಕರು ಮಾಡಬೇಕು.
ಯಲಬುರ್ಗಾ: ಪ್ರತಿಯೊಬ್ಬ ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅಭಿಮಾನ ಹೊಂದಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಮಹಾಂತೇಶ ಗಾಂಜಿ ಹೇಳಿದರು.
ಪಟ್ಟಣದ ಸರ್ಕಾರಿ ಕಿರಿಯ ಪ್ರಾಥಮಿಕ ನಂ.೩ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.ಕನ್ನಡ ಏಕೀಕರಣಕ್ಕಾಗಿ ದುಡಿದ ಮಹನೀಯರನ್ನು ಮಕ್ಕಳಿಗೆ ಪರಿಚಯಿಸುವಂತಹ ಕಾರ್ಯ ಶಿಕ್ಷಕರು ಮಾಡಬೇಕು. ಆ ನಿಟ್ಟಿನಲ್ಲಿ ಮಕ್ಕಳು ಮಾತೃಭಾಷೆ ಕನ್ನಡದಲ್ಲಿ ಶಿಕ್ಷಣ ಪಡೆಯುವಂತೆ ಪ್ರೇರೇಪಿಸಬೇಕು ಎಂದರು. ಇದೆ ವೇಳೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಂದ ಶಾಲೆಗೆ ೧೦ಡೆಸ್ಕ್ ಹಾಗೂ ಒಂದು ಡಯಾಸ್ ದೇಣಿಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಶರಣಪ್ಪ ತೊಂಡಿಹಾಳ, ಶರಣಪ್ಪ ಮಾಟರಂಗಿ, ಸುರೇಶ ದಿವಟರ, ಮುಖ್ಯಶಿಕ್ಷಕ ಕಳಕಮಲ್ಲಪ್ಪ ಅಂತೂರ, ಅಮರೇಶಪ್ಪ ಗಾಂಜಿ, ದಾವಲಬೀ, ಗಿರಿಜಮ್ಮ ಹಟ್ಟಿ ಸೇರಿದಂತೆ ಮತ್ತಿತರರು ಇದ್ದರು.;Resize=(128,128))
;Resize=(128,128))