ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ ಇರಬೇಕು- ಬಿಇಒ ನಾಯಕ ಹೇಳಿಕೆ

| Published : Jul 11 2025, 11:48 PM IST

ಸಾರಾಂಶ

ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮ ಬಲ ಇರಬೇಕು. ವಿದ್ಯಾರ್ಥಿಗಳು ಶ್ರಮ ವಹಿಸಿ ಶ್ರದ್ಧೆಯಿಂದ ಕಲಿತರೆ ಯಾವುದೇ ರೀತಿಯ ಸಾಧನೆ ಮಾಡಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಣಕೀ ನಾಯಕ ಹೇಳಿದರು.

ಶಿರಹಟ್ಟಿ: ವಿದ್ಯಾರ್ಥಿಗಳಲ್ಲಿ ಸಾಧಿಸುವ ಛಲ, ಆತ್ಮ ಬಲ ಇರಬೇಕು. ವಿದ್ಯಾರ್ಥಿಗಳು ಶ್ರಮ ವಹಿಸಿ ಶ್ರದ್ಧೆಯಿಂದ ಕಲಿತರೆ ಯಾವುದೇ ರೀತಿಯ ಸಾಧನೆ ಮಾಡಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಣಕೀ ನಾಯಕ ಹೇಳಿದರು. ತಾಲೂಕಿನ ಹೊಳೆ- ಇಟಗಿ ಗ್ರಾಮದ ಎಸ್‌ಜಿಬಿಎಂ ಪ್ರೌಢ ಶಾಲೆಯಲ್ಲಿ ಆರ್.ಕೆ. ಪಾಟೀಲ ಅವರ ಜನ್ಮದಿನದ ಪ್ರಯುಕ್ತ ಶಾಲೆಯ ವಿದ್ಯಾರ್ಥಿಗಳಿಗೆ ''''ಕನ್ನಡಪ್ರಭ'''' ಯುವ ಆವೃತ್ತಿ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದರು. ವಿದ್ಯಾರ್ಥಿಗಳು ಸತತ ಪ್ರಯತ್ನ ಪಟ್ಟು ಓದುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.

ಸಮುದಾಯವನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ಜ್ಞಾನದ ಅರಿವು ಶಿಕ್ಷಣದಿಂದ ಸಿಗುತ್ತದೆ. ಪ್ರತಿ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು. ಕನ್ನಡಪ್ರಭ ಯುವ ಆವೃತ್ತಿ ಮಕ್ಕಳ ಓದಿಗೆ ಪೂರಕವಾಗಿದೆ. ನಿತ್ಯ ಈ ಪತ್ತಿಕೆ ಓದುವ ಮೂಲಕ ತಮ್ಮ ಶೈಕ್ಷಣಿಕ ಗುರಿ ಸಾಧಿಸಬೇಕು ಎಂದು ಹೇಳಿದರು.ಸರಕಾರಿ ನೌಕರ ಸಂಘದ ಗೌರವಾಧ್ಯಕ್ಷ ಶರಣಬಸವಗೌಡ ಪಾಟೀಲ ಮಾತನಾಡಿ, ಮಕ್ಕಳಿಗೆ ಜ್ಞಾನಾರ್ಜನೆ ನೀಡುವುದು, ಕಲೆ, ಸಾಹಿತ್ಯ, ಸಂಸ್ಕೃತಿಯ ಕುರಿತು ಮನವರಿಕೆ ಮಾಡುವುದು ಕೌಶಲ್ಯ ಕ್ರಿಯಾಶೀಲತೆಯನ್ನು ಬೆಳೆಸುವುದರಿಂದ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ. ಅಷ್ಟೇ ಆಗಾಗ್ಗೆ ಕಲುಷಿತಗೊಳ್ಳುವ ಸಮಾಜವನ್ನು ಸುಧಾರಿಸುವ ಮಾರ್ಗ ತೆರೆದುಕೊಳ್ಳತ್ತದೆ. ಸಮಾಜಕ್ಕೆ ಇಂಥ ಅಮೂಲ್ಯ ಕೊಡುಗೆ ನೀಡುವ ಅವಕಾಶ ಶಿಕ್ಷಕರಿಗೆ ಮಾತ್ರ ಇರುತ್ತದೆ ಎಂದು ಹೇಳಿದರು.ಶಾಲೆಯ ಮುಖ್ಯೋಪಾಧ್ಯಾಯ ಎಂ.ಎಂ. ಹುಡೇದಮನಿ ಮಾತನಾಡಿ, ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ ಎಲ್ಲ ಶಿಕ್ಷಕರ ಸಹಕಾರ ಮತ್ತು ಶಿಕ್ಷಣ ಇಲಾಖೆ ಮಾರ್ಗದರ್ಶನದಂತೆ ಮಕ್ಕಳನ್ನು ಸಿದ್ಧಗೊಳಿಸಿ ಶಾಲೆಯ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮಾಜಿ ಗ್ರಾಪಂ ಸದಸ್ಯ ಕುಮಾರಗೌಡ್ರ ಪಾಟೀಲ, ಶಿದ್ಲಿಂಗಸ್ವಾಮಿ ಪಶುಪತಿಮಠ, ಸತೀಶ ಪಶುಪತಿಹಾಳ,ಟಿ.ಎಸ್. ಪೂಜಾರ, ಜಿ.ಡಿ. ಕುಮಶಿ, ಅಶ್ವಿನಿ ಹುಡೇದಮನಿ, ಭಾರತಿ ದೊಡ್ಡವೀರಪ್ಪ ಹಳ್ಳೆಪ್ಪನವರ ಇದ್ದರು.