ವಿದ್ಯಾರ್ಥಿಗಳು ದೇಶಪ್ರೇಮ ಮೈಗೂಡಿಸಿಕೊಳ್ಳಬೇಕು: ಯು.ಟಿ.ಖಾದರ್‌

| Published : Dec 30 2023, 01:30 AM IST

ವಿದ್ಯಾರ್ಥಿಗಳು ದೇಶಪ್ರೇಮ ಮೈಗೂಡಿಸಿಕೊಳ್ಳಬೇಕು: ಯು.ಟಿ.ಖಾದರ್‌
Share this Article
  • FB
  • TW
  • Linkdin
  • Email

ಸಾರಾಂಶ

ಮಂಗಳೂರಿನಲ್ಲಿ ನಡೆದ ಸೇವಾದಳ ಶತಮಾನೋತ್ಸವ ಕಾರ್ಯಕ್ರಮದ ಪ್ರಾರಂಭದಲ್ಲಿ ಸುಮಾರು 300 ಮಂದಿ ಸೇವಾದಳದ ಶಾಲಾ ವಿದ್ಯಾರ್ಥಿಗಳು ನಗರದ ಬಲ್ಮಠದಲ್ಲಿರುವ ಸರ್ಕಾರಿ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜು ಆವರಣದಿಂದ ಪುರಭವನದ ಗಾಂಧಿ ಪಾರ್ಕ್‌ಗೆ ಜಾಥಾ ನಡೆಸಿದರು. ಜಾಥಾಕ್ಕೆ ವಿಧಾನಪರಿಷತ್‌ ಸದಸ್ಯ ಕೆ. ಹರೀಶ್‌ ಕುಮಾರ್‌ ಚಾಲನೆ ನೀಡಿ

ಕನ್ನಡಪ್ರಭ ವಾರ್ತೆ ಮಂಗಳೂರು

ಸೇವಾದಳ ದೇಶದ ದೊಡ್ಡ ಸಂಘಟನೆಯಾಗಿದೆ. ವಿದ್ಯಾರ್ಥಿಗಳು ದೇಶಪ್ರೇಮವನ್ನು ಮೈಗೂಡಿಸಿಕೊಳ್ಳುವುದರೊಂದಿಗೆ ಇಂತಹ ಸಂಘಟನೆಗಳಲ್ಲಿ ತೊಡಗಿಸಿಕೊಂಡು ದೇಶ ಸೇವೆ ಮಾಡಬೇಕು ಎಂದು ವಿದಾನಸಭಾ ಅಧ್ಯಕ್ಷ ಯು.ಟಿ.ಖಾದರ್‌ ಕರೆ ನೀಡಿದರು.

ಭಾರತ ಸೇವಾದಳ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಸೇವಾದಳದ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ಗುರುವಾರ ನಗರದ ಕುದ್ಮುಲ್‌ ರಂಗರಾವ್‌ ಪುರಭವನದ ಗಾಂಧಿ ಪ್ರತಿಮೆ ಬಳಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಹಳಷ್ಟುಮಂದಿ ಯುವಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ದೇಶ ಸೇವೆ ಮಾಡುವ ಮನಸ್ಸು ಪ್ರತಿಯೊಬ್ಬರಲ್ಲೂ ಮೂಡಬೇಕು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಎಲ್ಲರೂ ತಿಳಿದುಕೊಂಡು ಅವರ ಆದರ್ಶದಡಿ ಸಾಗಬೇಕು ಎಂದರು.

ಪ್ರಾರಂಭದಲ್ಲಿ ಸುಮಾರು 300 ಮಂದಿ ಸೇವಾದಳದ ಶಾಲಾ ವಿದ್ಯಾರ್ಥಿಗಳು ನಗರದ ಬಲ್ಮಠದಲ್ಲಿರುವ ಸರ್ಕಾರಿ ಹೆಣ್ಮಕ್ಕಳ ಪದವಿ ಪೂರ್ವ ಕಾಲೇಜು ಆವರಣದಿಂದ ಪುರಭವನದ ಗಾಂಧಿ ಪಾರ್ಕ್‌ಗೆ ಜಾಥಾ ನಡೆಸಿದರು. ಜಾಥಾಕ್ಕೆ ವಿಧಾನಪರಿಷತ್‌ ಸದಸ್ಯ ಕೆ. ಹರೀಶ್‌ ಕುಮಾರ್‌ ಚಾಲನೆ ನೀಡಿ ಮಾತನಾಡಿ, ದೇಶದ ಭವಿಷ್ಯಕ್ಕೆ ಸೇವಾದಳದ ಅಗತ್ಯವಿದೆ. ಸೇವಾದಳದ ವಿದ್ಯಾರ್ಥಿಗಳಿಗೆ ನೀಡುವಂತಹ ಶಿಸ್ತಿನ ಪಾಠದಿಂದ ಸುಂದರ ಭಾರತ ನಿರ್ಮಾಣವಾಗಲಿ ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿ ಸದಸ್ಯ ಬಶೀರ್‌ ಬೈಕಂಪಾಡಿ, ಜಿಲ್ಲಾ ಕಾರ್ಯದರ್ಶಿ ಟಿ.ಕೆ. ಸುಧೀರ್‌, ತಾಲೂಕು ಅಧ್ಯಕ್ಷ ಪ್ರಭಾಕರ್‌ ಶ್ರೀಯಾನ್‌, ಪದಾಧಿಕಾರಿಗಳಾದ ಉದಯ್‌ ಕುಂದರ್‌, ಪ್ರೇಮ್‌ ಚಂದ್‌, ಕೃತಿನ್‌ ಕುಮಾರ್‌, ಸಂಘಟಕ ಮಂಜೇಗೌಡ, ಬೆಂಗ್ರೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಕೇಶ್‌ ಇದ್ದರು.