ಸಾರಾಂಶ
ಬಳ್ಳಾರಿ: ಪ್ರಾದೇಶಿಕ ಸಾರಿಗೆ ಕಚೇರಿ, ವಾಸವಿ ಎಜುಕೇಷನ್ ಟ್ರಸ್ಟ್ ನ ಸಹಯೋಗದಲ್ಲಿ ಇಲ್ಲಿನ ವಾಸವಿ ವಿದ್ಯಾಲಯದಲ್ಲಿ 36ನೇ ರಸ್ತೆ ಸುರಕ್ಷತಾ ಜಾಗೃತಿಯ ಮಾಸಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಾಸವಿ ಎಜ್ಯುಕೇಷನ್ ಟ್ರಸ್ಟ್‌ನ ಅಧ್ಯಕ್ಷ ವಿಠ್ಠಲ ಕೃಷ್ಣಕುಮಾರ್, ಸಂಚಾರ ನಿಯಮ ಪಾಲನೆಯಿಂದ ಅಪಘಾತಗಳನ್ನು ತಡೆಗಟ್ಟಲು ಸಾಧ್ಯವಾಗಲಿದೆ. ಪ್ರತಿಯೊಬ್ಬರ ಜೀವನ ಅಮೂಲ್ಯವಾದದ್ದು. ಸಂಚಾರ ನಿಯಮದ ಉಲ್ಲಂಘನೆಯಿಂದಾಗುವ ಒಂದು ಸಣ್ಣ ತಪ್ಪು, ಮತ್ತೊಬ್ಬರ ಜೀವನ ಕಂಟಕ ತರಬಹುದು. ಹೀಗಾಗಿ ಪ್ರತಿಯೊಬ್ಬರೂ ಹೆದ್ದಾರಿ ಹಾಗೂ ಸಂಚಾರ ನಿಯಮಗಳ ಪಾಲನೆಗೆ ಮುಂದಾಗಬೇಕು. ವಿದ್ಯಾರ್ಥಿಗಳು ಬಾಲ್ಯದಿಂದಲೇ ಸಂಚಾರ ನಿಯಮಗಳನ್ನು ತಿಳಿದುಕೊಂಡು ಅವುಗಳನ್ನು ಅನುಷ್ಠಾನಕ್ಕೆ ಮುಂದಾಗಬೇಕು ಎಂದರು.
ಪ್ರಾದೇಶಿಕ ಸಾರಿಗೆ ಇಲಾಖೆಯ ವಾಹನ ನಿರೀಕ್ಷಕ ಶ್ರೀರಫೀಕ್ ಅಹ್ಮದ್ ಅವರು ಸಂಚಾರ ನಿಯಮ ಪಾಲನೆಯ ಮಹತ್ವ ಕುರಿತು ತಿಳಿಸಿದರಲ್ಲದೆ, ಸಮುದಾಯದ ಸುರಕ್ಷತೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.ವಾಸವಿ ಎಜುಕೇಷನ್ ಟ್ರಸ್ಟ್ ನ ಮಾಜಿ ಅಧ್ಯಕ್ಷ ಪೋಲಾ ಬಸವರಾಜ್, ಕಾರ್ಯದರ್ಶಿ ಪಿ.ಎನ್ ಸುರೇಶ್, ಉಮಾ, ಸರೋಜಾ, ರೇಷ್ಮಾ, ಬೇಗಂ, ಶಾಲಾ ಮುಖ್ಯಗುರು ಯು.ವೀರೇಶ್, ಶಾಲಾ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪ್ರಾದೇಶಿಕ ಸಾರಿಗೆ ಕಚೇರಿ ವತಿಯಿಂದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.ನಾವು ಸದಾ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಧರಿಸುತ್ತೇವೆ. ಶಿಸ್ತಿನೊಂದಿಗೆ ರಸ್ತೆಗಳನ್ನು ದಾಟುತ್ತೇವೆ. ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುತ್ತೇವೆ ಎಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಶಿಕ್ಷಕಿ ಬಸವರಾಜೇಶ್ವರಿ ಕಾರ್ಯಕ್ರಮ ನಿರ್ವಹಿಸಿದರು.ಬಳ್ಳಾರಿಯ ವಾಸವಿ ವಿದ್ಯಾಲಯದಲ್ಲಿ 36ನೇ ರಸ್ತೆ ಸುರಕ್ಷತಾ ಜಾಗೃತಿಯ ಮಾಸಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.