ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಕೆ)ಯ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಐಎಸ್‌ಎಪಿ (ಇನ್‌ಫಾರ್ಮೆಶನ್ ಸರ್ಚ್, ಅನಾಲಿಸಿಸ್ ಆ್ಯಂಡ್ ಪ್ರೆಸೆಂಟೆಶನ್) ಕಾರ್ಯಕ್ರಮವನ್ನು ಆಯೋಜಸಲಾಗಿತ್ತು.

ಕುಂದಾಪುರ; ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಕೆ)ಯ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಐಎಸ್‌ಎಪಿ (ಇನ್‌ಫಾರ್ಮೆಶನ್ ಸರ್ಚ್, ಅನಾಲಿಸಿಸ್ ಆ್ಯಂಡ್ ಪ್ರೆಸೆಂಟೆಶನ್) ಕಾರ್ಯಕ್ರಮವನ್ನು ಆಯೋಜಸಲಾಗಿತ್ತು.

ಮುಖ್ಯ ಅತಿಥಿಯಾಗಿದ್ದ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವಡ, ಇಂದಿನ ಯುವ ಪೀಳಿಗೆಯಲ್ಲಿ ಅಪಾರ ಪ್ರತಿಭೆ ಹಾಗೂ ಅಗಾಧವಾದ ಸಾಮರ್ಥ್ಯ ಅಡಗಿದೆ. ಆದರೇ ವಿದ್ಯಾರ್ಥಿಗಳು ಕೇವಲ ಅಂಕ ಗಳಿಸುವುದಕ್ಕೆ ಮಾತ್ರ ಸೀಮಿತವಾಗದೆ, ತಮ್ಮಲ್ಲಿರುವ ಸೃಜನಶೀಲತೆ ಮತ್ತು ನೈಜ ಕೌಶಲ್ಯಗಳನ್ನು ಪ್ರದರ್ಶಿಸುವ ಮೂಲಕ ತಮ್ಮ ಕ್ಷೇತ್ರಗಳಲ್ಲಿ ಉತ್ಕೃಷ್ಟ ಸಾಧನೆ ಮಾಡಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ರಾಮಕೃಷ್ಣ ಹೆಗ್ಡೆ ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ಇಂದಿನ ತಂತ್ರಜ್ಞಾನ ಲೋಕದಲ್ಲಿ ಯಶಸ್ಸುಗಳಿಸಲು ಸರಿಯಾದ ಮಾಹಿತಿಯನ್ನು ಹುಡುಕುವುದು, ಅದನ್ನು ವಿಶ್ಲೇಷಿಸುವುದು ಹಾಗೂ ಸಮರ್ಥವಾಗಿ ಪ್ರಸ್ತುತಪಡಿಸುವುದು ಅಗತ್ಯ. ಈ ಕೌಶಲ್ಯಗಳು ವಿದ್ಯಾರ್ಥಿಗಳಲ್ಲಿ ಸ್ವಯಂ ಕಲಿಕೆ ಮತ್ತು ವೃತ್ತಿಪರ ಬೆಳವಣಿಗೆಗೆ ಭದ್ರ ಬುನಾದಿ ಹಾಕುತ್ತವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದದ ಐಎಂಜೆ ಸಂಸ್ಥೆಗಳ ಅಕಾಡೆಮಿಕ್ಸ್ ವಿಭಾಗದ ನಿರ್ದೇಶಕ ಡಾ.ಎಸ್.ಎನ್.ಭಟ್, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವ, ತಾರ್ಕಿಕ ಚಿಂತನೆ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸಲು ಅತ್ಯುತ್ತಮ ವೇದಿಕೆಯಾಗಿವೆ ಎಂದರು. ಕಾರ್ಯಕ್ರಮಕ್ಕೆ ಸಂಸ್ಥೆ ಅಧ್ಯಕ್ಷ ಸಿದ್ಧಾರ್ಥ ಜೆ. ಶೆಟ್ಟಿ ಶುಭ ಹಾರೈಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ, ಕಾಲೇಜಿನ ವಿದ್ಯಾರ್ಥಿಗಳು ತಮ್ಮ ವಿಭಾಗಗಳಲ್ಲಿ ಆಯೋಜಿಸಲಾದ ತಾಂತ್ರಿಕ ವಿಚಾರ ಸಂಕಿರಣಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಸ್ತುತಿ ನೀಡಿದರು. ಪ್ರಾಧ್ಯಾಪಕಿ ಫ಼ರಾನ ಇಮ್ರಾನ್ ಅತಿಥಿ ಪರಿಚಯಿಸಿದರು. ಪ್ರಾಧ್ಯಾಪಕಿ ಅಕ್ಷತಾ ಕಾಮತ್ ವಂದಿಸಿದರು. ವಿದ್ಯಾರ್ಥಿನಿ ಅಲಿಶಾ ಬಿಷಪ್ ನಿರೂಪಿಸಿದರು.