ಸಾರಾಂಶ
ಎಂಇಎಸ್‌ನಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದಾರಿ ತಪ್ಪುತ್ತಿದು, ಮಕ್ಕಳು ಶಾಲಾ ಅವಧಿಯಲ್ಲಿ ಶಿಕ್ಷಣದ ಕಡೆಗೆ ಗಮನ ಹರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಮಲೆನಾಡು ವಿದ್ಯಾ ಸಂಸ್ಥೆ ಸಭಾಂಗಣದಲ್ಲಿ ನಡೆದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಲೈಂಗಿಕ ಶೋಷಣೆ, ಬಾಲ ಕಾರ್ಮಿಕತೆ ಪದ್ಧತಿ, ಜೀತಕ್ಕಾಗಿ ಹಾಗೂ ಇನ್ನು ಮುಂತಾದ ಕೃತ್ಯಗಳಿಗೆ ಮಾನವ ಕಳ್ಳ ಸಾಗಾಣಿಕೆ ಮಾಡುತ್ತಾರೆ ಎಂದು ಹೇಳಿದರು.ಜೀವನದಲ್ಲಿ ಮಕ್ಕಳು ಗುರಿ ಇಟ್ಟುಕೊಂಡು ವಿದ್ಯಾಭ್ಯಾಸ ಮಾಡಬೇಕು, ಆ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕು. ಇತ್ತೀಚಿನ ದಿನಗಳಲ್ಲಿ ಲೈಂಗಿಕವಾಗಿ ಬಳಸಿಕೊಳ್ಳಲು, ಭಿಕ್ಷಾಟನೆಗೆ ಬಳಸಲು ಬಾಲಕಾರ್ಮಿಕರಾಗಿ ದುಡಿಸಿಕೊಳ್ಳಲು ಹಾಗೂ ಬಾಲ್ಯ ವಿವಾಹ ಮಾಡುವ ಉದ್ದೇಶದಿಂದ ಮಾನವ ಕಳ್ಳ ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ. ಲೋಕೇಶ್ವರಪ್ಪ ಮಾತನಾಡಿ, ಇಂದು ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ಜಾಗೃತಿ ಮತ್ತು ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಎಂಇಎಸ್, ಎಸ್ಎಸ್ಎಂ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಬಿ ಜಯಶ್ರೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ತರೀಕೆರೆ ವಕೀಲರಾದ ವಿಭ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುರೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ. ರಂಗನಾಥ್, ಮಹಿಳಾ ಪೊಲೀಸ್ ಠಾಣೆ ಪಿಎಸ್‌ಐ ನಂದಿನಿ ಉಪಸ್ಥಿತರಿದ್ದರು.3 ಕೆಸಿಕೆಎಂ 2ಚಿಕ್ಕಮಗಳೂರಿನ ಮಲೆನಾಡು ವಿದ್ಯಾ ಸಂಸ್ಥೆ ಸಭಾಂಗಣದಲ್ಲಿ ನಡೆದ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ನ್ಯಾ. ಹನುಮಂತಪ್ಪ ಉದ್ಘಾಟಿಸಿದರು.