ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡಿಕೊಳ್ಳಬಾರದು: ನಿರ್ಮಲಾನಂದನಾಥ ಸ್ವಾಮೀಜಿ

| Published : Jun 29 2024, 12:31 AM IST

ವಿದ್ಯಾರ್ಥಿಗಳು ಸಮಯವನ್ನು ಹಾಳು ಮಾಡಿಕೊಳ್ಳಬಾರದು: ನಿರ್ಮಲಾನಂದನಾಥ ಸ್ವಾಮೀಜಿ
Share this Article
  • FB
  • TW
  • Linkdin
  • Email

ಸಾರಾಂಶ

ಪಿಯುಸಿಯಲ್ಲಿ ಪಡೆದ ಅಂಕಗಳು ನಿಮ್ಮ ಯಶಸ್ಸಿನ ಗುಟ್ಟು ಅಡಗಿದೆ. ಏಕೆಂದರೆ ನೀವು ಶ್ರದ್ಧೆಯಿಂದ ಓದಿ ಪಡೆದ ಅಂಕಗಳು ನಿಮ್ಮ ಮುಂದಿನ ಭವಿಷ್ಯದ ನೀಟ್‌ಮತ್ತು ಸಿಇಟಿ ಸೇರಿದಂತೆ ಇತರೆ ಪ್ರವೇಶಾತಿ ಪರೀಕ್ಷೆಗೆ ಅನುಕೂಲವಾಗಲಿದೆ. ತುಂಬಾ ಚೆನ್ನಾಗಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳು ಉನ್ನತ ಮಟ್ಟದ ಅಧಿಕಾರ ಪಡೆದಿದ್ದಾರೆ. ಅದೇರೀತಿ ಆದಿಚುಂಚನಗಿರಿ ವಿದ್ಯಾರ್ಥಿಗಳು ಸಹ ಹೆಸರು ತಂದಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಸಮಯವನ್ನು ಹಾಳು ಮಾಡಿಕೊಳ್ಳದೇ ಭವಿಷ್ಯದಲ್ಲಿ ಗುರಿ ಸಾಧನೆಗೆ ಮುಂದಾಗಬೇಕು ಎಂದು ಶ್ರೀಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ ನೀಡಿದರು.

ನಗರದ ಬಿಜಿಎಸ್ ಸಮುದಾಯ ಭವನದಲ್ಲಿ ವಿಶ್ವ ಮಾನವ ಪಿಯು ಕಾಲೇಜು ವತಿಯಿಂದ ನಡೆದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತದಲ್ಲಿ ವಿದ್ಯಾರ್ಥಿಗಳು ಹೆಚ್ಚು ಪರಿಶ್ರಮ ಹಾಕಿದರೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ನಿಮ್ಮದಾಗುತ್ತದೆ. ವಿದ್ಯೆ ಮರೆತು ಅಡಂಬರದಿಂದ ಕಾಲಹರಣ ಮಾಡಿದರೆ ವಿದ್ಯಾರ್ಥಿ ಜೀವನ ಕಳೆದವರು ಮುಂದೆ ಪಶ್ಚಾತಾಪ ಪಡಬೇಕಾಗುತ್ತದೆ ಎಂದು ಸಲಹೆ ನೀಡಿದರು.

ಸಾಧನೆ ಮಾಡುವುದಕ್ಕೆ ಸಿಕ್ಕಿರುವ ಈ ವಿದ್ಯಾರ್ಥಿ ದಿಸೆಯಲ್ಲಿನ ಸಮಯವನ್ನು ಸದ್ಭಳಕೆ ಮಾಡಿಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ಆ ಮೂಲಕ ಯಶಸ್ಸಿನ ಗುರಿಯತ್ತ ಮುನ್ನುಗ್ಗಬೇಕು. ಓದುವ ಹವ್ಯಾಸದ ಜೊತೆಗೆ ದೈಹಿಕ ಆರೋಗ್ಯದ ಕಡೆಯು ಗಮನಹರಿಸುವುದು ಸೂಕ್ತ ಎಂದರು.

ಡಿಡಿಪಿಐ ಚೆಲುವಯ್ಯ ಮಾತನಾಡಿ, ಪಿಯುಸಿಯಲ್ಲಿ ಪಡೆದ ಅಂಕಗಳು ನಿಮ್ಮ ಯಶಸ್ಸಿನ ಗುಟ್ಟು ಅಡಗಿದೆ. ಏಕೆಂದರೆ ನೀವು ಶ್ರದ್ಧೆಯಿಂದ ಓದಿ ಪಡೆದ ಅಂಕಗಳು ನಿಮ್ಮ ಮುಂದಿನ ಭವಿಷ್ಯದ ನೀಟ್‌ಮತ್ತು ಸಿಇಟಿ ಸೇರಿದಂತೆ ಇತರೆ ಪ್ರವೇಶಾತಿ ಪರೀಕ್ಷೆಗೆ ಅನುಕೂಲವಾಗಲಿದೆ. ತುಂಬಾ ಚೆನ್ನಾಗಿ ಅಧ್ಯಯನ ನಡೆಸಿದ ವಿದ್ಯಾರ್ಥಿಗಳು ಉನ್ನತ ಮಟ್ಟದ ಅಧಿಕಾರ ಪಡೆದಿದ್ದಾರೆ. ಅದೇರೀತಿ ಆದಿಚುಂಚನಗಿರಿ ವಿದ್ಯಾರ್ಥಿಗಳು ಸಹ ಹೆಸರು ತಂದಿದ್ದಾರೆ ಎಂದು ಶ್ಲಾಘಿಸಿದರು.

ಇದೇ ವೇಳೆ ವಿಶ್ವಮಾನವ ಪಿಯು ಕಾಲೇಜಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಬಿಇಓ ಮಹದೇವು ಸೇರಿದಂತೆ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.ಜುಲೈ 2 ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿಚಾರ ಸಂಕಿರಣ

ಕನ್ನಡಪ್ರಭ ವಾರ್ತೆ ಮಂಡ್ಯಕನ್ನಡ ಸೇನೆ ಕರ್ನಾಟಕ ಜಿಲ್ಲಾ ಘಟಕದಿಂದ ಐಎಎಸ್ ಮತ್ತು ಐಪಿಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿಚಾರ ಸಂಕಿರಣವನ್ನು ಜು.2ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದನಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಎಚ್.ಸಿ.ಮಂಜುನಾಥ್ ಹೇಳಿದರು.

ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಡಾ.ಕುಮಾರ ನೆರವೇರಿಸಲಿದ್ದು, ಮೈಸೂರು ಮಹಾರಾಣಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಪಿ.ಎನ್.ಹೇಮಚಂದ್ರ ವಿಚಾರ ಮಂಡನೆ ಮಾಡುವರು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಅಧ್ಯಕ್ಷತೆಯನ್ನು ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಉಪಸ್ಥಿತರಿರುವರು. ಅತಿಥಿಗಳಾಗಿ ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯಾನಂದ, ಎಸ್.ಬಿ.ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ, ಆದರ್ಶ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಲ್.ಮೂರ್ತಿ , ಕನ್ನಡ ಸೇನೆಯ ಎನ್.ಮುನಿರಾಜೇಗೌಡ, ಮುನಿಕೃಷ್ಣ, ಸೌಭಾಗ್ಯ ಶಿವಲಿಂಗು ಅತಿಥಿಗಳಾಗಿ ಭಾಗವಹಿಸುವರು ಎಂದರು.

ಗೋಷ್ಠಿಯಲ್ಲಿ ದೇವಮ್ಮ, ಬೆಟ್ಟಹಳ್ಳಿ ಮಂಜುನಾಥ, ಸೌಭಾಗ್ಯ, ಮಂಜು ಇದ್ದರು.