ವಿದ್ಯಾರ್ಥಿಗಳು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಿ: ಕೊಂಡಿರ ಗಣೇಶ್ ನಾಣಯ್ಯ

| Published : Apr 12 2025, 12:49 AM IST

ವಿದ್ಯಾರ್ಥಿಗಳು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಿ: ಕೊಂಡಿರ ಗಣೇಶ್ ನಾಣಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಇಲ್ಲಿಯ ಕೆಪಿಎಸ್ ಶಾಲಾ ಕ್ರೀಡಾಂಗಣದಲ್ಲಿ 25ನೇ ವರ್ಷದ ಹಾಕಿ ಹಾಗೂ ಇನ್ನಿತರ ಬೇಸಿಗೆ ತರಬೇತಿ ಶಿಬಿರ ನಡೆಯಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ವಿದ್ಯಾರ್ಥಿಗಳು ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಂಡು ರಜಾ ಅವಧಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಿವೃತ ಏರ್‌ಫೋರ್ಸ್ ಅಧಿಕಾರಿ ಕೊಂಡಿರ ಗಣೇಶ್ ನಾಣಯ್ಯ ಹೇಳಿದರು.

ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕ್ರೀಡಾ ಅಕಾಡೆಮಿ ವತಿಯಿಂದ ಇಲ್ಲಿಯ ಕೆಪಿಎಸ್ ಶಾಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 25ನೇ ವರ್ಷದ ಹಾಕಿ ಹಾಗೂ ಇನ್ನಿತರ ಬೇಸಿಗೆ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಹಿರಿಯರಾದ ದಿ.ಕಲಿಯಂಡ ಸಾಬು ಅಯ್ಯಣ್ಣ ಫೀಲ್ಡ್ ಮಾರ್ಷಲ್ ಕೆ.ಎ೦. ಕಾರ್ಯಪ್ಪ ಕ್ರೀಡಾ ಅಕಾಡೆಮಿ ಸ್ಥಾಪಿಸಿದ ಬಳಿಕ 25 ವರ್ಷಗಳಲ್ಲಿ ನಿರಂತರವಾಗಿ ಬೇಸಿಗೆ ಶಿಬಿರ ಆಯೋಜಿಸುತ್ತಾ ಬರಲಾಗುತ್ತಿದ್ದು, ಹಲವು ವಿದ್ಯಾರ್ಥಿಗಳು ತರಬೇತಿ ಪಡೆದು ಉನ್ನತ ಸ್ಥಾನ ಹೊಂದಿದ್ದಾರೆ. ಹಲವರು ಕ್ರೀಡಾಪಟುಳಾಗಿ ಹೊರಹೊಮ್ಮಿದ್ದಾರೆ. ವಿದ್ಯಾರ್ಥಿಗಳ ಏಳಿಗೆಯಲ್ಲಿ ಪೋಷಕರ ಪಾತ್ರ ಮುಖ್ಯ. ತರಬೇತುದಾರರು ಉತ್ತಮ ಮಾರ್ಗದರ್ಶನ ನೀಡುತ್ತಿದ್ದಾರೆ. ಅಭ್ಯಾಸದ ವೇಳೆ ಉತ್ತಮ ತರಬೇತಿಯನ್ನು ವಿದ್ಯಾರ್ಥಿಗಳು ಪಡೆದು ಉನ್ನತಿ ಕಾಣಬೇಕು ಎಂದರು.

ಈ ಸಂದರ್ಭ ಇತ್ತೀಚೆಗೆ ನಿಧನರಾದ ಅಕಾಡೆಮಿ ಸ್ಥಾಪಕ ಅಧ್ಯಕ್ಷ ಕಲಿಯಂಡ ಸಾಬು ಅಯ್ಯಣ್ಣ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕ್ರೀಡಾ ಅಕಾಡೆಮಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ನುರಿತ ತರಬೇತುದಾರರಿಂದ ವಿದ್ಯಾರ್ಥಿಗಳಿಗೆ ಹಾಕಿ ತರಬೇತಿ ಜೊತೆಗೆ ಸಾಂಸ್ಕೃತಿಕ ತರಬೇತಿಯನ್ನು ನೀಡಲಾಗುತ್ತಿದೆ. ಮಾತ್ರವಲ್ಲದೆ ಶಿಬಿರಾರ್ಥಿಗಳಿಗೆ ಅರ್ಹತಾ ಪತ್ರ ನೀಡಲಾಗುತ್ತದೆ. ಪ್ರತಿದಿನ ಹಾಲು, ಮೊಟ್ಟೆ, ಬಿಸ್ಕೆಟ್ ವಿತರಿಸುವ ಮೂಲಕ ಶಿಬಿರವನ್ನು ಆಯೋಜಿಸಲಾಗುತ್ತಿದೆ.

ಈ ಸಂದರ್ಭ ನುರಿತ ತರಬೇತುದಾರರಾದ ಅಕಾಡೆಮಿ ಕಾರ್ಯದರ್ಶಿ, ಮಾಜಿ ಸೈನಿಕ ಕೋಟೋಳಿರ ಡಾಲಿ ಅಪ್ಪಚ್ಚ ಹಾಗೂ ಕ್ರೀಡಾಪಟು ಅರೇಯಡ ಗಣೇಶ್ ಬೆಳ್ಳಿಯಪ್ಪ, ಬಿದ್ದಾಟಂಡ ಮಮತಾ ಚಿನ್ನಪ್ಪ, ಅಕಾಡೆಮಿ ಖಜಾಂಚಿ ಮಾಚೇಟಿರ ಕುಸು ಕುಶಾಲಪ್ಪ, ಅಕಾಡೆಮಿ ನಿರ್ದೇಶಕರಾದ ಕುಂಚೆಟ್ಟಿರ ಸುಧಿ, ದುಗ್ಗಳ ಸದಾನಂದ, ಪೋಷಕರು ಹಾಗೂ ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.