ಸಾರಾಂಶ
ವಿದ್ಯಾರ್ಥಿ ಜೀವನ ಹೂವಿನ ಹಾಸಿಗೆಯಲ್ಲ, ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದಿಂದ ಮಾತ್ರ ಯಶಸ್ಸು ಸಿಗುತ್ತದೆ
ಲಕ್ಷ್ಮೇಶ್ವರ:ವಿದ್ಯಾರ್ಥಿಗಳು ಅಭ್ಯಾಸದ ಕಡೆಗೆ ಹೆಚ್ಚಿನ ಗಮನ ನೀಡುವ ಜತೆಯಲ್ಲಿ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಪಟ್ಟಣದ ತೋಟಪ್ಪ ಮಾನ್ವಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನೂತನ ಶೌಚಾಲಯದ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ವಿದ್ಯಾರ್ಥಿ ಜೀವನ ಹೂವಿನ ಹಾಸಿಗೆಯಲ್ಲ, ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದಿಂದ ಮಾತ್ರ ಯಶಸ್ಸು ಸಿಗುತ್ತದೆ. ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಹೆಚ್ಚಿನ ಮುಂಜಾಗ್ರತೆ ವಹಿಸುವುದು ಅಗತ್ಯ. ಮುಂದಿನ ದಿನಗಳಲ್ಲಿ ಯುವಕರಲ್ಲಿ ಸ್ಪರ್ಧೆ ಹೆಚ್ಚಾಗಿರುತ್ತದೆ, ಹೀಗಾಗಿ ಯಶಸ್ಸು ಸುಲಭವಲ್ಲ. ವಿದ್ಯಾರ್ಥಿಗಳು ಆಟ, ಪಾಠದ ಜತೆಯಲ್ಲಿ ಆರೋಗ್ಯ ಹಾಗೂ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಶುದ್ಧವಾದ ನೀರು ಕುಡಿಯುವುದು, ಉತ್ತಮ ಹವ್ಯಾಸ ಹೊಂದುವುದು ಹಾಗೂ ಆರೋಗ್ಯದ ಬಗ್ಗೆ ಗಮನ ನೀಡುವ ಕಾರ್ಯ ವಿದ್ಯಾರ್ಥಿಗಳು ಮಾಡಬೇಕು ಎಂದು ಹೇಳಿದ ಅವರು, ಮುಂದಿನ ದಿನಗಳಲ್ಲಿ ಪಟ್ಟಣದ ಪಪೂ ಕಾಲೇಜಿಗೆ ಬೇಕಾದ ಮೂಲ ಸೌಲಭ್ಯ ಒದಗಿಸುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು.
ಈ ವೇಳೆ ಶಿರಹಟ್ಟಿ ಮಂಡಲದ ಬಿಜೆಪಿ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ್, ಅನಿಲ ಮುಳಗುಂದ, ನವೀನ ಬೆಳ್ಳಟ್ಟಿ, ಶಕ್ತಿ ಕತ್ತಿ, ಸಂತೋಷ ಜಾವೂರ, ಗಿರೀಶ್ ಚೌರೆಡ್ಡಿ, ಬಸವರಾಜ ಕುಂಬಾರ, ಅಂಗಡಿ, ಮಂಜುನಾಥ ಕೊಕ್ಕರಗುಂದಿ, ನಾಗರಾಜ ಸಾತಪುತೆ. ಬಸವರಾಜ ಸಾಸಲವಾಡ ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))