ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಆರೋಗ್ಯಕ್ಕೂ ಆದ್ಯತೆ ನೀಡಬೇಕು: ಡಾ.ಎಂ.ಚಂದ್ರಶೇಖರ್

| Published : Sep 24 2025, 01:00 AM IST

ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಆರೋಗ್ಯಕ್ಕೂ ಆದ್ಯತೆ ನೀಡಬೇಕು: ಡಾ.ಎಂ.ಚಂದ್ರಶೇಖರ್
Share this Article
  • FB
  • TW
  • Linkdin
  • Email

ಸಾರಾಂಶ

ಶಾಲಾ ಕಾಲೇಜುಗಳಲ್ಲಿ ಕ್ರೀಡೆ, ದೈಹಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡದೆ ಕೊನೆ ಸ್ಥಾನಕ್ಕೆ ತಳಲಾಗಿದೆ. ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ದೈಹಿಕ ಶಿಕ್ಷಣಕ್ಕೆ ನೀಡುತ್ತಿಲ್ಲ. ವಿದ್ಯಾರ್ಥಿಗಳು ಮೊಬೈಲ್, ಟಿವಿ, ಕಂಪ್ಯೂಟರ್ ಗೀಳಿಗೆ ಬಿದ್ದು ದಿನದಲ್ಲಿ 3-4 ಗಂಟೆ ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ವಿದ್ಯಾರ್ಥಿಗಳು ಪಠ್ಯದ ಶಿಕ್ಷಣ ಕೊಡುವಷ್ಟೇ ಆದ್ಯತೆಯನ್ನು ಆರೋಗ್ಯದ ದೃಷ್ಟಿಯಿಂದ ಕ್ರೀಡೆಗೂ ನೀಡಬೇಕು ಎಂದು ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಚಂದ್ರಶೇಖರ್ ಹೇಳಿದರು.

ತಾಲೂಕಿನ ಜಯಂತಿ ನಗರದ ಶ್ರೀಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ನಡೆದ 14 ಹಾಗೂ 17 ವರ್ಷ ವಯೋಮಾನದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಬಳಿಕ ಮಾತನಾಡಿದರು.

ಶಾಲಾ ಕಾಲೇಜುಗಳಲ್ಲಿ ಕ್ರೀಡೆ, ದೈಹಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡದೆ ಕೊನೆ ಸ್ಥಾನಕ್ಕೆ ತಳಲಾಗಿದೆ. ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ದೈಹಿಕ ಶಿಕ್ಷಣಕ್ಕೆ ನೀಡುತ್ತಿಲ್ಲ. ವಿದ್ಯಾರ್ಥಿಗಳು ಮೊಬೈಲ್, ಟಿವಿ, ಕಂಪ್ಯೂಟರ್ ಗೀಳಿಗೆ ಬಿದ್ದು ದಿನದಲ್ಲಿ 3-4 ಗಂಟೆ ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಕ್ರೀಡೆ, ದೈಹಿಕ ಶಿಕ್ಷಣಕ್ಕೆ ಹೊತ್ತು ನೀಡಿದರೆ ಆರೋಗ್ಯರ ಕಾಪಾಡಿಕೊಳ್ಳಬಹುದು, ಮಾನಸಿಕವಾಗಿಯೂ ಸದೃಢರಾಗಬಹುದು ಎಂದರು.

ಪ್ರತಿಯೊಬ್ಬರು ತಮ್ಮ ಬಿಡುವಿನ ಸಮಯದಲ್ಲಿ ಕನಿಷ್ಠ ಒಂದು ಗಂಟೆಯಾದರು ಕ್ರೀಡೆ, ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು, ನಿರಂತರವಾಗಿ ಕ್ರೀಡೆಯಲ್ಲಿ ತೊಡಗಿಸಿಕೊಂಡರು ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಡಾ.ಸಿ.ಎ.ಅರವಿಂದ್ ಮಾತನಾಡಿ, ವೈದ್ಯರು ಹತ್ತಿರವಾದಷ್ಟು ಮನುಷ್ಯರಿಗೆ ಕಾಯಿಲೆಗಳು ಸಹ ಹತ್ತಿರವಾಗುತ್ತವೆ. ವೈದ್ಯರಿದ್ದಾರೆ ಔಷಧ ಪಡೆದುಕೊಳ್ಳೋಣ ಎಂಬ ಭಾವನೆ ಮೂಡುತ್ತವೆ. ಇದು ಆಗಬಾರದುಯ ವೈದ್ಯರ ಬಳಿ ಬರದಂತೆ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ ಪ್ರತಿಯೊಬ್ಬರು ನಿರಂತರವಾಗಿ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ಜಿಲ್ಲಾ ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಜಿಲ್ಲೆಯ 7 ತಾಲೂಕುಗಳಿಂದ ಒಟ್ಟು 32 ತಂಡಗಳು ಭಾಗವಹಿಸಿದ್ದವು.

ಕಾರ್ಯಕ್ರಮದಲ್ಲಿ ಸಂಸ್ಥೆ ಅಧ್ಯಕ್ಷ ಪಿ.ಹೊನ್ನರಾಜು, ಸಂಸ್ಥಾಪಕ ಕಾರ್ಯದರ್ಶಿ ಪ್ರೊ.ಎಂ.ಪಂಚಲಿಂಗೇಗೌಡ, ಕಾರ್ಯದರ್ಶಿ ಪಿ.ಅಕ್ಷಯ್, ದೈಹಿಕ ಶಿಕ್ಷಣ ಪರಿವೀಕ್ಷಕ ಮಾದೇಶ್, ಸ.ನೌ.ಸ.ಅಧ್ಯಕ್ಷ ಕೆಂಪೇಗೌಡ, ಜಿಲ್ಲಾ ಗ್ರೇಡ್-1 ದೈ.ಶಿ.ಸ.ಅಧ್ಯಕ್ಷ ಸಿ.ಎನ್.ಶಿವಕುಮಾರ್, ತಾಲೂಕು ಅಧ್ಯಕ್ಷ ಯೋಗೇಶ್, ಜಿ.ಪ್ರೌ.ಸ.ಶಿ.ಸಂ. ಉಪಾಧ್ಯಕ್ಷ ನಾಗೇಗೌಡ, ಕೆ.ಕುಬೇರ್, ಶ್ರೀನಿವಾಸ್ ಸೇರಿದಂತೆ ಹಲವರು ಹಾಜರಿದ್ದರು.