ಸಾರಾಂಶ
ಪೋಷಕರು ಮಕ್ಕಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡುತ್ತಿರುವುದರಿಂದ, ಅವರು ಮೊಬೈಲ್‌ಗಳಿಗೆ ಹೆಚ್ಚು ಆಕರ್ಷಿತರಾಗಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು, ಕೌಶಲ್ಯಾಭಿವೃದ್ಧಿ ಮತ್ತು ಕಲಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ತಾಲೂಕು ಜನಪದ ಪರಿಷತ್ ಅಧ್ಯಕ್ಷ ಹಾಗು ಹಾಸನದ ಸಂತ ಜೋಸೆಫ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅನಿಲ್ ಬಿ.ಕೆ. ತಿಳಿಸಿದರು. ನೀರಿನಲ್ಲಿ ಮುಳುಗಿದವನನ್ನು ರಕ್ಷಿಸಬಹುದು, ಆದರೆ ಮೊಬೈಲ್‌ನಲ್ಲಿ ಮುಳುಗಿದವನನ್ನು ರಕ್ಷಿಸಲು ಕಷ್ಟ " ಎಂಬ ಹೋಲಿಕೆಯನ್ನು ನೀಡುತ್ತಾ, ಪೋಷಕರು ಜವಾಬ್ದಾರಿಯೊಂದಿಗೆ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೋರಾಡುವ ಅಗತ್ಯವಿದೆ ಎಂಬ ಸಂದೇಶವನ್ನು ಅವರು ಒತ್ತಿ ಹೇಳಿದರು.
ಕನ್ನಡಪ್ರಭ ವಾರ್ತೆ ಹೊಳೆನರಸೀಪುರ
ಪೋಷಕರು ಮಕ್ಕಳಿಗೆ ಹೆಚ್ಚಿನ ಸ್ವಾತಂತ್ರ್ಯ ನೀಡುತ್ತಿರುವುದರಿಂದ, ಅವರು ಮೊಬೈಲ್‌ಗಳಿಗೆ ಹೆಚ್ಚು ಆಕರ್ಷಿತರಾಗಿದ್ದಾರೆ. ವಿದ್ಯಾರ್ಥಿಗಳು ಮೊಬೈಲ್ ಬಿಟ್ಟು, ಕೌಶಲ್ಯಾಭಿವೃದ್ಧಿ ಮತ್ತು ಕಲಿಕೆಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ತಾಲೂಕು ಜನಪದ ಪರಿಷತ್ ಅಧ್ಯಕ್ಷ ಹಾಗು ಹಾಸನದ ಸಂತ ಜೋಸೆಫ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅನಿಲ್ ಬಿ.ಕೆ. ತಿಳಿಸಿದರು. ತಾಲೂಕಿನ ಚಿಟ್ಟನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಮಾತನಾಡುತ್ತಾ "ನೀರಿನಲ್ಲಿ ಮುಳುಗಿದವನನ್ನು ರಕ್ಷಿಸಬಹುದು, ಆದರೆ ಮೊಬೈಲ್‌ನಲ್ಲಿ ಮುಳುಗಿದವನನ್ನು ರಕ್ಷಿಸಲು ಕಷ್ಟ " ಎಂಬ ಹೋಲಿಕೆಯನ್ನು ನೀಡುತ್ತಾ, ಪೋಷಕರು ಜವಾಬ್ದಾರಿಯೊಂದಿಗೆ, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೋರಾಡುವ ಅಗತ್ಯವಿದೆ ಎಂಬ ಸಂದೇಶವನ್ನು ಅವರು ಒತ್ತಿ ಹೇಳಿದರು.ಶಾಲೆಯ ಮುಖ್ಯ ಶಿಕ್ಷಕ ನಾಗಣ್ಣ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, 2025-25ನೇ ಸಾಲಿನಿಂದ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲಾಗುವುದು ಎಂಬ ಖುಷಿ ವಿಚಾರನ್ನು ಗ್ರಾಮಸ್ಥರಿಗೆ ತಿಳಿಸಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಧರ್ಮರಾಜ ಧ್ವಜಾರೋಹಣ ನೆರವೇರಿಸಿದರು. ಶಿಕ್ಷಕ ಲೋಕೇಶ್ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ರಶ್ಮಿ ಸ್ವಾಗತಿಸಿದರು.
ಅತಿಥಿ ಶಿಕ್ಷಕರುಗಳಾದ ಶೀಲಾ ಮತ್ತು ಜ್ಯೋತಿಲಕ್ಷ್ಮಿ, ಕರ್ನಾಟಕ ಜಾನಪದ ಪರಿಷತ್ತು ಹೊಳೆನರಸೀಪುರ ತಾಲೂಕು ಘಟಕದ ಗೌರವ ಸಲಹೆಗಾರರಾದ ರಾಮಚಂದ್ರ, ಗ್ರಾಮದ ಹಿರಿಯ ಮುಖಂಡರಾದ ಬಸವರಾಜ್, ಚಂದ್ರು, ಸ್ನೇಹ ಬಳಗದ ಅಧ್ಯಕ್ಷ ಸಾಗರ್, ಉಪಾಧ್ಯಕ್ಷ, ಮುರಳಿ , ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ಗ್ರಾಮಸ್ಥರು ಎಲ್ಲ ಕಾರ್ಯಕ್ರಮಗಳಿಗೆ ಸಹಕಾರ ನೀಡಿದರು. ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರೀಯ ಏಕತೆ ಕುರಿತು ನೃತ್ಯ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.