ವಿದ್ಯಾರ್ಥಿಗಳು ಶಿಕ್ಷಣದಿಂದ ಭವಿಷ್ಯ ಸಾಕಾರಗೊಳಿಸಿಕೊಳ್ಳಬೇಕು: ಎನ್.ಶ್ರೀಧರ್

| Published : Jun 06 2024, 12:30 AM IST

ವಿದ್ಯಾರ್ಥಿಗಳು ಶಿಕ್ಷಣದಿಂದ ಭವಿಷ್ಯ ಸಾಕಾರಗೊಳಿಸಿಕೊಳ್ಳಬೇಕು: ಎನ್.ಶ್ರೀಧರ್
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಶಿಕ್ಷಣದ ಮೂಲಕ ಸಾಕಾರಗೊಳಿಸಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಸಮಾಜದಲ್ಲಿ ಪ್ರಬುದ್ಧ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಸವಿತಾ ಸಮಾಜ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎನ್.ಶ್ರೀಧರ್‌ ಕರೆ ನೀಡಿದರು.

ಸವಿತಾ ಸಮಾಜ ಸೇವಾ ಟ್ರಸ್ಟ್ ನಿಂದ ಉಚಿತ ಪಠ್ಯ ಪುಸ್ತಕ । ಎಸ್ಎಸ್ಎಲ್ ಸಿ- ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

---

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಶಿಕ್ಷಣದ ಮೂಲಕ ಸಾಕಾರಗೊಳಿಸಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಸಮಾಜದಲ್ಲಿ ಪ್ರಬುದ್ಧ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಸವಿತಾ ಸಮಾಜ ಸೇವಾ ಟ್ರಸ್ಟ್‌ನ ಅಧ್ಯಕ್ಷ ಎನ್.ಶ್ರೀಧರ್‌ ಕರೆ ನೀಡಿದರು.ನಗರದ ನೆಹರೂ ರಸ್ತೆಯ ಸವಿತಾ ಸಮಾಜ ಸಭಾಂಗಣದಲ್ಲಿ ಸವಿತಾ ಸಮಾಜ ಸೇವಾ ಟ್ರಸ್ಟ್ ನಿಂದ ಆಯೋಜಿಸಿದ್ದ ಉಚಿತ ಪಠ್ಯ ಪುಸ್ತಕ ಹಾಗೂ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಉತ್ತಮ ವ್ಯಕ್ತಿತ್ವ ನಿರ್ಮಾಣವಾಗಲು ಮೊದಲು ನಮ್ಮಲ್ಲಿನ ಕೀಳರಿಮೆಯನ್ನು ಬಿಡಬೇಕು. ಮಾಡುವ ಕಾಯಕದಲ್ಲಿ ಸ್ವಂತಿಕೆ ರೂಡಿಸಿಕೊಳ್ಳಬೇಕು. ಜತೆಗೆ ಧೃಢ ಸಂಕಲ್ಪವಿದ್ದಾಗ ಗುರಿ ತಲುಪಲು ಸಾಧ್ಯವಾಗಲಿದೆ ಎಂದರು.ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಶಿಕ್ಷಣದ ಮೂಲಕ ಸಾಕಾರಗೊಳಿಸಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದಲ್ಲಿ ಪ್ರಬುದ್ಧ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಸಲಹೆ ನೀಡಿದರು.ಸವಿತಾ ಸಮಾಜ ಟ್ರಸ್ಟ್‌ ಗೌರವಾನ್ವಿತ ನಿರ್ದೇಶಕ ಶ್ರೀಧರ್ ಮೋಹನ್ ಮಾತನಾಡಿ, ಕಳೆದ 24 ವರ್ಷಗಳಿಂದ ನಿರಂತರವಾಗಿ ಟ್ರಸ್ಟ್ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕ ವಿತರಣೆ ಜತೆಗೆ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ಸಮುದಾಯದಲ್ಲಿ ಬಡವರ್ಗವಿದ್ದು ಅಂತವರಿಗೂ ಟ್ರಸ್ಟ್ ನೆರವಾಗುತ್ತಿದೆ ಎಂದರು.ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ತಾಲೂಕು ಸವಿತಾ ಸಮಾಜದ ಅಧ್ಯಕ್ಷೆ ವೆಂಕಟೇಶ್, ಸವಿತಾ ಸೇವಾ ಟ್ರಸ್ಟ್‌ ಗೌರವಾನ್ವಿತ ನಿರ್ದೇಶಕರಾದ ಕೆ.ಬಾಲಕೃಷ್ಣ, ಸಿ. ವೆಂಕಟೇಶ್, ಟಿ. ಲಕ್ಷ್ಮಿಕಾಂತ್, ಎಸ್. ವೆಂಕಟೇಶ್, ಎನ್.ಗಿರೀಶ್, ಕಾಂತ, ಹರೀಶ್, ಕಾರ್ಯದರ್ಶಿ ಬಿ.ನಾಗರಾಜ್ ಉಪಸ್ಥಿತರಿದ್ದರು.ಪೋಟೋ ಫೈಲ್‌ ನೇಮ್‌ 5 ಕೆಸಿಕೆಎಂ 6ಚಿಕ್ಕಮಗಳೂರಿನ ನೆಹರೂ ರಸ್ತೆಯ ಸವಿತಾ ಸಮಾಜ ಸಭಾಂಗಣದಲ್ಲಿ ಸವಿತಾ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಉಚಿತ ಪಠ್ಯ ಪುಸ್ತಕ ಹಾಗೂ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ ಮಾಡಲಾಯಿತು.