ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಸಾಧನೆ ಮಾಡಿ: ಶಾಸಕ ಇಕ್ಬಾಲ್ ಹುಸೇನ್

| Published : Oct 01 2025, 01:00 AM IST

ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಸಾಧನೆ ಮಾಡಿ: ಶಾಸಕ ಇಕ್ಬಾಲ್ ಹುಸೇನ್
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿ ವಿದ್ಯಾರ್ಥಿಯಲ್ಲೂ ಪ್ರತಿಭೆಗಳಿದ್ದು, ಅದನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ. ವಿದ್ಯಾರ್ಥಿಗಳು ವಿದ್ಯಾವಂತರಾಗಿ ಬುದ್ಧಿವಂತರಾದರೆ ಸಾಲದು. ಆರೋಗ್ಯ ವಂತರಾಗಿಯೂ ಇರಬೇಕು. ಇದಕ್ಕಾಗಿ ಆಟ ಮತ್ತು ಪಾಠವನ್ನು ಸಮಾನವಾಗಿ ತೆಗೆದುಕೊಂಡು ಹೋದರೆ ಆರೋಗ್ಯ ವಂತ ಜೀವನ ನಡೆಸಲು ಸಾಧ್ಯ ವಾಗಲಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ರಾಮನಗರ

ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಬೆಳೆಸಿಕೊಳ್ಳಬೇಕು. ಉನ್ನತ ಸ್ಥಾನ ಅಲಂಕರಿಸಲು ಜೀವನದಲ್ಲಿ ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು 2025-26 ನೇ ಸಾಲಿನ ಸಾಂಸ್ಕೃತಿಕ, ಎನ್ ಎಸ್ ಎಸ್ , ರೆಡ್ ಕ್ರಾಸ್ , ರೇಂಜರ್ಸ್ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರಂಭ ಉದ್ಘಾಟಿಸಿದ ಅವರು, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.

ಪ್ರತಿ ವಿದ್ಯಾರ್ಥಿಯಲ್ಲೂ ಪ್ರತಿಭೆಗಳಿದ್ದು, ಅದನ್ನು ಗುರುತಿಸಿ, ಪ್ರೋತ್ಸಾಹಿಸುವ ಕೆಲಸ ಆಗಬೇಕಿದೆ. ವಿದ್ಯಾರ್ಥಿಗಳು ವಿದ್ಯಾವಂತರಾಗಿ ಬುದ್ಧಿವಂತರಾದರೆ ಸಾಲದು. ಆರೋಗ್ಯ ವಂತರಾಗಿಯೂ ಇರಬೇಕು. ಇದಕ್ಕಾಗಿ ಆಟ ಮತ್ತು ಪಾಠವನ್ನು ಸಮಾನವಾಗಿ ತೆಗೆದುಕೊಂಡು ಹೋದರೆ ಆರೋಗ್ಯ ವಂತ ಜೀವನ ನಡೆಸಲು ಸಾಧ್ಯ ವಾಗಲಿದೆ ಎಂದು ಹೇಳಿದರು.

ಇಂದಿನ ಮಕ್ಕಳು ನಾಳೆ ಭವ್ಯ ಭಾರತದ ಭವಿಷ್ಯ ಕಟ್ಟುವವರು. ದೇಶಕ್ಕೆ ಬೇಕಾದ ವ್ಯಕ್ತಿಗಳಾಗಿ ಮಕ್ಕಳು ಬೆಳೆಯಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಸವಾಲುಗಳನ್ನು ಎದುರಿಸಿ ಮುನ್ನುಗ್ಗಬೇಕು. ಉನ್ನತ ಹುದ್ದೆ ಅಲಂಕರಿಸುವ ಗುರಿ ಹೊಂದಬೇಕು. ಗುರು-ಹಿರಿಯರನ್ನು ಗೌರವ ಭಾವದಿಂದ ಕಾಣಬೇಕು ಎಂದರು.

ವಿದ್ಯಾರ್ಥಿ ಜೀವನ ಪ್ರಮುಖವಾದ ಘಟ್ಟ. ಇಂತಹ ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ವಿದ್ಯಾರ್ಥಿ ಜೀವನ ಸೂಕ್ಷ್ಮವಾಗಿರುವ ಕಾರಣ ಎಚ್ಚರಿಕೆ ಯಿಂದ ಇರಬೇಕು. ಪ್ರಪಂಚದಲ್ಲಿ ಕೋಟಿ ಜನರು ಹುಟ್ಟುತ್ತಾರೆ, ಸಾಯುತ್ತಾರೆ. ಈ ಅವಧಿಯಲ್ಲಿ ಸಮಾಜಕ್ಕಾಗಿ ಏನಾದರು ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ಅಕ್ಷರ ಜ್ಞಾನ ಪಡೆದು ಉನ್ನತ ಸ್ಥಾನ ಅಲಂಕರಿಸಿದರೆ ಇಡೀ ಸಮಾಜ ಗೌರವ ಕೊಡುತ್ತದೆ ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಕೆ.ರಾಜು ಮಾತನಾಡಿ, ವಿದ್ಯಾರ್ಥಿಗಳು ದೇಶದ ಭಾವಿ ಪ್ರಜೆಗಳಾಗಿದ್ದು. ನಿಮ್ಮ ಆಲೋಚನೆಯಂತೆ ದೇಶ ನಿರ್ಮಾಣವಾಗುತ್ತದೆ. ಹಾಗಾಗಿ ನೀವೆಲ್ಲರು ದುಷ್ಟ ಶಕ್ತಿಗಳಿಂದ ಎಚ್ಚರಿಕೆಯಿಂದ ಇದ್ದು, ಕೋಮು ಸೌಹಾರ್ದತೆ ಕಾಪಾಡಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ ಮಾತನಾಡಿ, ರಾಮನಗರ ಕ್ಷೇತ್ರದಲ್ಲಿ ಅನೇಕ ಶಾಸಕರನ್ನು ನೋಡಿದ್ದೇವೆ. ಆದರೆ ಇಕ್ಬಾಲ್ ಹುಸೇನ್ ಅವರಂತಹ ಕ್ರಿಯಾಶೀಲ ಶಾಸಕ ಮತ್ತೊಬ್ಬರಿಲ್ಲ.

ಎಲ್ಲ ಕಾಲೇಜುಗಳಿಗೆಯ ಭೇಟಿ ನೀಡಿ ಕಾಲೇಜು ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಸಮಸ್ಯೆ ಬಗೆ ಹರಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ವಿದ್ಯಾರ್ಥಿಗಳ ಕೋರಿಕೆಯಂತೆ ಶಾಸಕ ಇಕ್ಬಾಲ್ ಹುಸೇನ್ ರವರು ನಗರ ಸಾರಿಗೆ ಬಸ್ ವ್ಯವಸ್ಥೆ ಮಾಡಿದ್ದೇವೆ. ಅವರ ಸೂಚನೆಯಂತೆ ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ಅತಿ ಶೀಘ್ರದಲ್ಲೇ ಕಾಲೇಜಿನ ಮುಂಭಾಗ ಬಸ್ ತಂಗುದಾಣವನ್ನು ನಿರ್ಮಾಣ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಬೈರೇಗೌಡ, ಮುಖಂಡ ಗುರುಪ್ರಸಾದ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಶಿವಣ್ಣ, ಎನ್ ಎಸ್ ಎಸ್ ಘಟಕ ಸಂಚಾಲಕಿ ಕೆ.ಎನ್. ನಂದಿನಿ , ದೈಹಿಕ ಶಿಕ್ಷಣ ನಿರ್ದೇಶಕ ಡಾ.ವಿಶ್ವನಾಥಯ್ಯ, ರೆಡ್ ಕ್ರಾಸ್ ಸಮಿತಿ ಸಂಚಾಲಕ ಶ್ರೀನಿವಾಸಗೌಡ, ರೇಂಜರ್ ವಿಭಾಗದ ಸಂಚಾಲಕ ಡಾ.ಪ್ರಕಾಶ್ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.-----------------------....ಕೋಟ್......ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೂರು ನಗರ ಸಾರಿಗೆ ಬಸ್ ವ್ಯವಸ್ಥೆ ಮಾಡಿದ್ದೇವೆ. ಬಸ್ ಶೆಲ್ಟರ್ ನಿರ್ಮಿಸಿ ಕೊಡಲಾಗುವುದು. ಕಾಲೇಜು ಮುಂಭಾಗ ಕಸ ವಿಲೇವಾರಿ ಮಾಡುವಂತೆ ಸೂಚಿಸಿದ್ದೇನೆ. ಡೆಸ್ಕ್ ಗಳು, ಯುಪಿಎಸ್ ಕಲ್ಪಿಸಲು, ಸಿಸಿ ಕ್ಯಾಮೆರಾ ಅಳವಡಿಸಲು ಕಲ್ಪಿಸಲು ಕ್ರಮ ವಹಿಸುತ್ತೇನೆ.

- ಇಕ್ಬಾಲ್ ಹುಸೇನ್ , ಶಾಸಕ

30ಕೆಆರ್ ಎಂಎನ 1.ಜೆಪಿಜಿ

ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು 2025-26 ನೇ ಸಾಲಿನ ಸಾಂಸ್ಕೃತಿಕ, ಎನ್ ಎಸ್ ಎಸ್ , ರೆಡ್ ಕ್ರಾಸ್ , ರೇಂಜರ್ಸ್ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರಂಭವನ್ನು ಶಾಸಕ ಇಕ್ಬಾಲ್ ಹುಸೇನ್ ಉದ್ಘಾಟಿಸಿದರು.