ವಿದ್ಯಾರ್ಥಿಗಳು ಬೆಂಕಿಯಾಗದೇ, ದೀಪದಂತೆ ಬೆಳಗಬೇಕು: ಕಮಾಂಡೆಂಟ್‌ ಎಸ್‌.ಯುವಕುಮಾರ್‌

| Published : Nov 30 2023, 01:15 AM IST

ವಿದ್ಯಾರ್ಥಿಗಳು ಬೆಂಕಿಯಾಗದೇ, ದೀಪದಂತೆ ಬೆಳಗಬೇಕು: ಕಮಾಂಡೆಂಟ್‌ ಎಸ್‌.ಯುವಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ಹಳೆ ವಿದ್ಯಾರ್ಥಿಗಳ ಸಂಘದ ಸಂಚಾಲಕ ಹಾಗೂ ಇತಿಹಾಸ ಪ್ರಾಧ್ಯಾಪಕ ಡಾ. ಕೆ.ಎನ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಮಲ್ನಾಡ್ ಕೋಚಿಂಗ್ ಸೆಂಟರ್ ನಿರ್ದೇಶಕ ತೀರ್ಥಹಳ್ಳಿ ಕೇಶವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಸ್ತು ಅತಿ ಮುಖ್ಯ. ಸರ್ಕಾರಿ ಉದ್ಯೋಗಗಳು ಲಭಿಸಲು ಇಂದು ಕಷ್ಟಪಡಬೇಕಾಗಿದೆ. ಮಲ್ನಾಡ್ ಕೋಚಿಂಗ್ ಸೆಂಟರ್ ಲಕ್ಷಾಂತರ ಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ದೊಡ್ಡ ದೊಡ್ಡ ಪರೀಕ್ಷೆಗಳನ್ನು ಪಾಸ್ ಮಾಡಲು ನನ್ನಿಂದ ಸಾಧ್ಯವಿಲ್ಲ ಎಂಬ ಕೀಳರಿಮೆ, ಸೋಮಾರಿತನ ಬಿಟ್ಟು ಸಾಮಾಜಿಕ ಜಾಲತಾಣಗಳ ದಾಸರಾಗದೇ ಪರೀಕ್ಷೆಗಳನ್ನು ಎದುರಿಸಬೇಕು ಎಂದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವಿದ್ಯಾರ್ಥಿಗಳು ಒಳ್ಳೆಯ ಆಲೋಚನೆಗಳನ್ನು ಇಟ್ಟುಕೊಂಡು ಮುನ್ನಡೆದರೆ ಸಮಾಜಕ್ಕೆ ಆಸ್ತಿಯಾಗುತ್ತಾರೆ, ಇಲ್ಲವಾದರೆ ಅಸ್ಥಿಯಾಗುತ್ತಾರೆ. ವಿದ್ಯಾರ್ಥಿಗಳು ದೀಪವಾಗಿ ಬೆಳಗಬೇಕು ಹೊರತು, ಬೆಂಕಿಯಾಗಿ ಉರಿಯಬೇಡಿ ಎಂದು ರಾಜ್ಯ ಮೀಸಲು ಪೊಲೀಸ್ ಪಡೆಯ ಕಮಾಂಡೆಂಟ್ ಎಸ್.ಯುವಕುಮಾರ್ ಹೇಳಿದರು.

ನಗರದ ಸಹ್ಯಾದ್ರಿ ಕಲಾ ಕಾಲೇಜ್, ಹಳೆ ವಿದ್ಯಾರ್ಥಿಗಳ ಸಂಘ, ರಾಷ್ಟ್ರೀಯ ಸೇವಾ ಯೋಜನೆಗಳ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ ಅವಕಾಶ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ, ವಿದ್ಯಾರ್ಥಿ ಜೀವನವನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕು. ಪರೀಕ್ಷೆಗಾಗಿ ಮಾತ್ರ ಓದದೇ, ತಮ್ಮ ಓದಿನಿಂದ ಸಮಾಜಕ್ಕೆ ಏನಾದರೂ ಕೊಡುಗೆ ಕೊಡುವ ರೀತಿ ಬೆಳೆಯಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಸೈಯದ್ ಸನಾವುಲ್ಲ ಮಾತನಾಡಿ, ವಿದ್ಯಾರ್ಥಿಗಳು ವ್ಯಾಸಂಗ ಮಾಡುವಾಗಲೇ ನಿರ್ದಿಷ್ಟ ಗುರಿ ಇಟ್ಟುಕೊಳ್ಳಬೇಕು. ಕೆಲಸಕ್ಕೆ ಸೇರಬೇಕು ಎನ್ನುವ ಭಾವನೆ ಬೆಳೆಸಿಕೊಳ್ಳಬೇಕು. ಸರ್ಕಾರಿ ಉದ್ಯೋಗಗಳಂತೂ ಈಗ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ದಕ್ಕಲು ಸಾಧ್ಯ. ಆದ್ದರಿಂದ ಕಷ್ಟಪಟ್ಟು ಓದಿ. ಜ್ಞಾನ ಸಂಪಾದಿಸಿ, ವಿದ್ಯಾರ್ಥಿಗಳು ಕೆಲವು ವರ್ಷ ಓದಿದರೆ ಹಲವು ವರ್ಷಗಳು ಸುಖದಿಂದ ಇರಬಹುದು ಎಂದರು.

ಹಳೆ ವಿದ್ಯಾರ್ಥಿಗಳ ಸಂಘದ ಸಂಚಾಲಕ ಹಾಗೂ ಇತಿಹಾಸ ಪ್ರಾಧ್ಯಾಪಕ ಡಾ. ಕೆ.ಎನ್. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಂಗಳೂರಿನ ಮಲ್ನಾಡ್ ಕೋಚಿಂಗ್ ಸೆಂಟರ್ ನಿರ್ದೇಶಕ ತೀರ್ಥಹಳ್ಳಿ ಕೇಶವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಸ್ತು ಅತಿ ಮುಖ್ಯ. ಸರ್ಕಾರಿ ಉದ್ಯೋಗಗಳು ಲಭಿಸಲು ಇಂದು ಕಷ್ಟಪಡಬೇಕಾಗಿದೆ. ಮಲ್ನಾಡ್ ಕೋಚಿಂಗ್ ಸೆಂಟರ್ ಲಕ್ಷಾಂತರ ಜನರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ದೊಡ್ಡ ದೊಡ್ಡ ಪರೀಕ್ಷೆಗಳನ್ನು ಪಾಸ್ ಮಾಡಲು ನನ್ನಿಂದ ಸಾಧ್ಯವಿಲ್ಲ ಎಂಬ ಕೀಳರಿಮೆ, ಸೋಮಾರಿತನ ಬಿಟ್ಟು ಸಾಮಾಜಿಕ ಜಾಲತಾಣಗಳ ದಾಸರಾಗದೇ ಪರೀಕ್ಷೆಗಳನ್ನು ಎದುರಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಎಂ.ಎ. ಇಂಗ್ಲಿಷ್‌ನಲ್ಲಿ ಅತಿ ಹೆಚ್ಚು ಅಂಕ ಪಡೆದ ಸಲ್ಮಾ ತಬಸುಮ್ ಅವರಿಗೆ ನಗದು ಬಹುಮಾನ ನೀಡಿ, ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಘಟಕ-1ರ ಕಾರ್ಯಕ್ರಮಾಧಿಕಾರಿ ಡಾ. ಬಿ.ಎನ್. ಪ್ರಕಾಶ್ ಮರ್ಗನಳ್ಳಿ, ಘಟಕ 2ರ ಅಧಿಕಾರಿ ಡಾ.ಮುದುಕಪ್ಪ, ಆನಂದಪುರ ಜ್ಞಾನಸಹ್ಯಾದ್ರಿ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಡಾ. ಆರ್.ಸುರೇಶ್, ಸಹ್ಯಾದ್ರಿ ಕಾಲೇಜಿನ ಹಳೆಯ ವಿದ್ಯಾರ್ಥಿ ವೈ.ಎಚ್. ನಾಗರಾಜ್, ಪ್ರೊ.ಸಿರಾಜ್ ಅಹಮ್ಮದ್, ಡಾ.ಹಾಲಮ್ಮ, ಜಿ.ಆರ್. ಲವ ಮತ್ತಿತರರು ಇದ್ದರು.

- - -

-29ಎಸ್‌ಎಂಜಿಕೆಪಿ01:

ಪದವಿ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ ಅವಕಾಶ ಕುರಿತ ಕಾರ್ಯಾಗಾರವನ್ನು ಕಮಾಂಡೆಂಟ್ ಎಸ್. ಯುವಕುಮಾರ್ ಉದ್ಘಾಟಿಸಿದರು.