ಗದಗ: ಪರೀಕ್ಷೆ ಸಮೀಪಿಸುತ್ತಿದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದಬೇಕು. ಓದಿದ್ದನ್ನು ಮನನ ಮಾಡಬೇಕು. ಪ್ರತಿದಿನ ಆರು ಗಂಟೆಯಾದರೂ ಓದಬೇಕು. ಹೀಗೆ ವಿದ್ಯಾರ್ಥಿಗಳು ನಿರಂತರ ಪರಿಶ್ರಮಪಟ್ಟರೆ ಖಂಡಿತ ಯಶಸ್ಸು ನಿಮ್ಮದಾಗುತ್ತದೆ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮಿಗಳು ತಿಳಿಸಿದರು.ನಗರದ ತೋಂಟದಾರ್ಯ ಮಠದಲ್ಲಿ ನಡೆದ ಲಿಂಗಾಯತ ಪ್ರಗತಿಶೀಲ ಸಂಘದ 2785ನೇ ಶಿವಾನುಭವದ ಸಾನ್ನಿಧ್ಯ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಹತ್ತನೇ ತರಗತಿ ತುಂಬಾ ಮಹತ್ವದ ಹಂತ. ಶಿಕ್ಷಕರು ಹೇಳಿದ್ದನ್ನು ನೆನಪಿನಲ್ಲಿ ಇಟ್ಟುಕೊಂಡು, ಶ್ರಮವಹಿಸಿ ಅಭ್ಯಾಸಮಾಡಿ ಏಕಾಗ್ರತೆಯಿಂದ ಪರೀಕ್ಷೆ ಎದುರಿಸಬೇಕು ಎಂದರು.
ವಿದ್ಯಾರ್ಥಿಗಳ ಫಲಿತಾಂಶ ಚೆನ್ನಾಗಿ ಬರಬೇಕೆಂದು ಶಿಕ್ಷಕರು, ಇಲಾಖೆಯ ಅಧಿಕಾರಿಗಳು ಈ ವರ್ಷ ಬಹಳಷ್ಟು ಕಾರ್ಯಕ್ರಮ ರೂಪಿಸಿಕೊಂಡಿದ್ದಾರೆ. ಕಳೆದ ಸಾಲಿನಲ್ಲಿ ಎರಡಂಕಿಯ ಫಲಿತಾಂಶ ಬಂದಿದೆ. ಈ ವರ್ಷ ರಾಜ್ಯಮಟ್ಟದಲ್ಲಿ ಒಂದಂಕಿಯಲ್ಲಿ ಫಲಿತಾಂಶ ಬರಬೇಕು. ಅದು ಮೂರರೊಳಗೆ ಬರಬೇಕು. ಒಂದನೇ ಸ್ಥಾನ ಬರಲು ಪ್ರಯತ್ನವಿರಲಿ. ಎಲ್ಲ ವಿದ್ಯಾರ್ಥಿಗಳಿಗೆ ಒಳ್ಳೆಯದಾಗಲಿ ಎಂದರು. ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಮಕ್ಕಳಿಗೆ ಈಗಾಗಲೇ ಹೇಗೆ ಅಭ್ಯಾಸ ಮಾಡಬೇಕು ಎಂಬುದನ್ನು ಶಿಕ್ಷಕರು ಹೇಳಿದ್ದಾರೆ. ಪರೀಕ್ಷೆಯಂದು ಯಾರು ಭಯ ಪಡಬಾರದು. ಚೆನ್ನಾಗಿ ಓದಿ ಮನನ ಮಾಡಿಕೊಳ್ಳಿ. ಕಠಿಣ ವಿಷಯಗಳನ್ನು ಪದೇ ಪದೇ ಓದಿಕೊಳ್ಳಿ. ಅಂಡರ್‌ಲೈನ್ ಮಾಡಿಕೊಳ್ಳಿ. ಇಷ್ಟಪಟ್ಟು ಪ್ರತಿದಿನ ಆರು ತಾಸು ಓದಿಕೊಳ್ಳಿ. ಉತ್ತಮ ಫಲಿತಾಂಶ ಬಂದೇ ಬರುತ್ತದೆ. ನಿರಂತರ ಓದು ನಿಮ್ಮದಾಗಲಿ ಎಂದರು.ಈ ವೇಳೆ ನಿವೃತ್ತ ಉಪನಿರ್ದೇಶಕ ಐ.ಬಿ. ಬೆನಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಷಯ ಸಂಪನ್ಮೂಲ ವ್ಯಕ್ತಿಗಳಾಗಿ ಎಚ್.ಬಿ. ರಡ್ಡೇರ, ಸೆಲ್ವಾ, ಚಂದ್ರಶೇಖರ ಜೋಗಿನ, ಮುತ್ತು ಗಾರವಾಡ, ನಾಗನಗೌಡ ಮೇಟಿ, ಎಂ.ಎಂ. ಯರಗುಡಿ, ನೂರು ಅಹಮ್ಮದ್ ನದಾಫ ಅವರು ಎಸ್ಸೆಸ್ಸೆಲ್ಸಿ ಮಕ್ಕಳ ಸಂವಾದ ಕಾರ್ಯಕ್ರಮದಲ್ಲಿ ಕೇಳಿದ ಅನೇಕ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡವಿನಮನಿ, ಆರ್.ವಿ. ಶೆಟ್ಟೆಪ್ಪನವರ, ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಬಾಲಚಂದ್ರ ಭರಮಗೌಡ್ರ ಉಪಾಧ್ಯಕ್ಷ ಡಾ. ಉಮೇಶ ಪುರದ, ಕಾರ್ಯದರ್ಶಿ ವೀರಣ್ಣ ಗೋಟಡಕಿ, ಸೋಮನಾಥ ಪುರಾಣಿಕ, ನಾಗರಾಜ ಹಿರೇಮಠ, ಮಹೇಶ್ ಗಾಣಿಗೇರ, ಬಸವರಾಜ ಕಾಡಪ್ಪನವರ, ಶಿವಾನಂದ ಹೊಂಬಳ ಹಾಗೂ ಶ್ರೀಮಠದ ಸದ್ಭಕ್ತರು ಇದ್ದರು. ವಿದ್ಯಾ ಪ್ರಭು ಗಂಜಿಹಾಳ ನಿರೂಪಿಸಿದರು. ನಗರ ವಲಯದ ವಿವಿಧ ಶಾಲೆಗಳಿಂದ ಬಂದ 500ಕ್ಕೂ ಹೆಚ್ಚಿನ ಮಕ್ಕಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದಲಿ: ತೋಂಟದ ಸಿದ್ಧರಾಮ ಸ್ವಾಮೀಜಿ
ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಮಕ್ಕಳಿಗೆ ಈಗಾಗಲೇ ಹೇಗೆ ಅಭ್ಯಾಸ ಮಾಡಬೇಕು ಎಂಬುದನ್ನು ಶಿಕ್ಷಕರು ಹೇಳಿದ್ದಾರೆ. ಪರೀಕ್ಷೆಯಂದು ಯಾರು ಭಯ ಪಡಬಾರದು ಎಂದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.