ವಿದ್ಯಾರ್ಥಿಗಳು ಸರ್ಕಾರಿ ಸೌಲಭ್ಯ ಬಳಸಿಕೊಳ್ಳಿ

| Published : Nov 16 2025, 03:15 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಯರಗಟ್ಟಿ ಸರ್ಕಾರ ಮಕ್ಕಳಿಗಾಗಿ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಶೂ ಭಾಗ್ಯ, ಅಕ್ಷರ ದಾಸೋಹ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಮಕ್ಕಳು ಅವುಗಳನ್ನು ಸಮಪರ್ಕವಾಗಿ ಬಳಸಿಕೊಳ್ಳಬೇಕು ಎಂದು ತಹಸೀಲ್ದಾರ್‌ ಎಮ್.ವ್ಹಿ.ಗುಂಡಪ್ಪಗೋಳ ಹೇಳಿದರು.

ಕನ್ನಡಪ್ರಭ ವಾರ್ತೆ ಯರಗಟ್ಟಿ

ಸರ್ಕಾರ ಮಕ್ಕಳಿಗಾಗಿ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಶೂ ಭಾಗ್ಯ, ಅಕ್ಷರ ದಾಸೋಹ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಮಕ್ಕಳು ಅವುಗಳನ್ನು ಸಮಪರ್ಕವಾಗಿ ಬಳಸಿಕೊಳ್ಳಬೇಕು ಎಂದು ತಹಸೀಲ್ದಾರ್‌ ಎಮ್.ವ್ಹಿ.ಗುಂಡಪ್ಪಗೋಳ ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಪೋಷಕ ಶಿಕ್ಷಕರ ಮಹಾಸಭೆಯನ್ನುಉದ್ಘಾಟಿಸಿ ಅವರು ಮಾತನಾಡಿದರು.

ಎಂ.ಎಂ.ಚಿಲದ ಮಾತನಾಡಿ, ವಿದ್ಯಾರ್ಥಿಗಳ ಪೋಷಕರನ್ನು ಶಿಕ್ಷಣ ಪ್ರಕ್ರಿಯೆಯಲ್ಲಿ ತೊಡಗಿಸುವುದು, ಸರ್ಕಾರಿ ಶಾಲೆ, ಕಾಲೇಜುಗಳ ಬಗ್ಗೆ ಭರವಸೆ ಮೂಡಿಸುವುದು, ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಹಂಚಿಕೆ, ಪೋಷಕರೊಂದಿಗೆ ಮಕ್ಕಳ ಪ್ರಗತಿಯ ಬಗ್ಗೆ ಚರ್ಚೆ ಮಾಡಿ ಮಾಹಿತಿ ಪಡೆದರು.

ಈ ಕಾರ್ಯಕ್ರಮದಲ್ಲಿ ಒಳಗೊಂಡಿರುವ ವಿಷಯಗಳು. ಮಕ್ಕಳ ಪ್ರಗತಿ, ಹಾಜರಾತಿ, ಪರೀಕ್ಷೆ ಸಿದ್ಧತೆ, ವಿವಿಧ ಕಾಯ್ದೆಗಳ ಬಗ್ಗೆ ಮಾಹಿತಿಯನ್ನು ಪೋಷಕರ ಜೊತೆ ಹಂಚಿಕೊಳ್ಳಲಾಯಿತು.

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವೇಳೆ ಆಗಿರುವ ರಜಾ ದಿನಗಳನ್ನು ಸರಿದೂಗಿಸಿಕೊಳ್ಳಲು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಕಲಿಕಾ ಅವಧಿ ವಿಸ್ತರಣೆ ಮಾಡುವಂತೆ ಸರ್ಕಾರದಿಂದ ಆದೇಶ ಬಂದಿದೆ. ಸ್ಥಳೀಯವಾಗಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ ಬೆಳಿಗ್ಗೆ ಅಥವಾ ಸಂಜೆ ಒಂದು ತಾಸು ಹೆಚ್ಚುವರಿ ತರಗತಿ ನಡೆಸಲು ಸರ್ಕಾರ ಸೂಚಿಸಿದೆ. ಹೀಗಾಗಿ, ಡಿಸೆಂಬರ್ ಒಳಗಾಗಿ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಳಿಸಿ ಪುನರ್ ಮನನ ನಡೆಸಲಾಗುತ್ತದೆ ಎಂದು ತಿಳಿಸಿದರು.

ಪಪಂ ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಪಂ ಸದಸ್ಯ ಸಲಿಂಬೇಗ ಜಮಾದಾರ, ಡಾ.ವಿಶ್ವನಾಥ ತಾವಂಶಿ, ಶಿಕ್ಷಣ ಸಂಯೋಜಕರಾದ ಎಂ.ಬಿ.ಕಡಕೋಳ, ಅರ್ಜನ ಕಾಮಣ್ಣವರ, ಎಸ್‌ಡಿಎಂಸಿ ಸದಸ್ಯರಾದ ಪ್ರಮೋದ ಬಡಿಗೇರ, ಗದಿಗೆಪ್ಪ ಕಡಕೋಳ, ಶಾಲಾ ಮುಖ್ಯೋಪಾಧ್ಯಾಯ ಎ.ಎ.ಮಕ್ತುಮನ್ನವರ, ಶಿಕ್ಷಕರಾದ ಎಸ್.ಬಿ.ಮಿಕಲಿ, ಎಂ.ಎಂ.ಚಿಲದ, ಬಾಲಕಿಯರ ವಸತಿ ನಿಲಯ ಪಾಲಕರಾದ ಆಶಾ ಪರೀಟ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವಸಂತ ಬಡಿಗೇರ, ಪಾಲಕ ಪೋಷಕರಾದ ರಾಜೇಶ್ವರಿ ಕರಿಗೋಣ್ಣವರ, ರೇಣುಕಾ ಯಂಕಣಿ, ಕಾವೇರಿ ಬಡಿಗೇರ, ಹೇಮಾ ಉಗ್ರಾಣ, ಸವಿತಾ ಮಾಸ್ತಿ, ಸೈಯ್ಯದಸಾಬ ಮುಖೇರಿ, ಬಸವ್ವ ಅಡಿಕಾರ, ತುಕಾರಾಮ ದಂಡಿನ, ಬಸವರಾಜ ಮಾನೋಜಿ, ಶಂಕರ ಕಂಬಾರ, ಮುಂತಾದವರು ಹಾಜರಿದ್ದರು. ಮಕ್ಕಳ ಪ್ರಗತಿಯ ಕುರಿತು ಸಮಾಲೋಚನೆ ನಡೆಸಿದರು.