ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರನಗರದ ಹೃದಯ ಭಾಗದಲ್ಲಿರುವ ಡಿ.ವಿ.ಗುಂಡಪ್ಪ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಗ್ರಂಥಾಲಯದಲ್ಲಿನ ವಾಚನಾಲಯ, ನಿಯತಕಾಲಿಕೆಗಳ ಕೊಠಡಿ ಸೇರಿದಂತೆ ವಿವಿಧೆಡೆ ಭೇಟಿ ನೀಡಿ, ಓದುಗರು ಹಾಗೂ ಸ್ಪರ್ಧಾಕಾಂಕ್ಷಿಗಳೊಂದಿಗೆ ಮುಕ್ತವಾಗಿ ಮಾತನಾಡಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಸ್ಪರ್ಧಾಕಾಂಕ್ಷಿಗಳು ಹಾಗೂ ವಿದ್ಯಾರ್ಥಿಗಳು ಈ ಗ್ರಂಥಾಲಯ ಉಪಯೋಗಿಸಿಕೊಂಡು ಉತ್ತಮ ಅಂಕ ಪಡೆಯುವುದರ ಜೊತೆಗೆ, ಉನ್ನತ ಹುದ್ದೆ ಅಲಂಕರಿಸಬೇಕೆಂದು ಹೇಳಿದರು. ಅಂಬೇಡ್ಕರ್ ಅಧ್ಯಯನ ಕೇಂದ್ರ
ಗ್ರಂಥಾಲಯದಲ್ಲಿ ಅಂಬೇಡ್ಕರ್ ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಲು ಸ್ಥಳವನ್ನು ಗುರುತಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಗ್ರಂಥಾಲಯದಲ್ಲಿ ಓಡುತ್ತಿರುವ ವಿದ್ಯಾರ್ಥಿಗಳು ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗಲು ಅಗತ್ಯ ಪುಸ್ತಕಗಳು ಬೇಕಾಗಿವೆ ಎಂದು ಜಿಲ್ಲಾಧಿಕಾರಿಗೆ ತಿಳಿಸಿದರು.ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಗ್ರಂಥಾಲಯಗಳನ್ನು ನಿರ್ಮಾಣ ಮಾಡಬೇಕೆಂದು ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯ ಅಧಿಕಾರಿಗೆ ಸೂಚಿಸಿದರು. ನಂತರ ಶೌಚಾಲಯಕ್ಕೆ ಭೇಟಿ ನೀಡಿ, ವಿಶೇಷ ಚೇತನರು ಶೌಚಾಲಯ ಬಳಸಲು ಮತ್ತು ಹೋಗಿ ಬರಲು ಜಾಗವನ್ನು ಮಾಡಿಕೊಡಿ ಎಂದು ಸಲಹೆ ನೀಡಿದರು.ಅದೇ ರೀತಿಯಾಗಿ ಬ್ರೈಲ್ ಪುಸ್ತಕಗಳು ಮತ್ತು ಉಪಕರಣಗಳಗಳ ಬಗ್ಗೆ ಮಾಹಿತಿ ಪಡೆದರು.
ಓದುಗರಿಗೆ ನೀರಿನ ವ್ಯವಸ್ಥೆಗ್ರಂಥಾಲಯದಲ್ಲಿ ಓದಲು ಬರುವಂತಹ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕುರಿತು ಮಾತನಾಡಿ ಪಕ್ಕದಲ್ಲಿರುವ ರಂಗಮಂದಿರಕ್ಕೆ ಯಾರಗೊಳ್ ನೀರಿನ ಸಂಪರ್ಕ ಇದ್ದು ಅದನ್ನು ಗ್ರಂಥಾಲಯಕ್ಕೆ ಸಂಪರ್ಕಗೊಳಿಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ರಂಥಾಧಿಕಾರಿ ಎನ್.ಗಣೇಶ ಇದ್ದರು.