ಡ್ರಗ್ಸ್ ವಿರುದ್ಧ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಅರಿವು ಮೂಡಿಸಬೇಕು: ಪಿಎಸ್ಸೈ ಬಸವರಾಜ್

| Published : Jun 30 2024, 12:55 AM IST

ಡ್ರಗ್ಸ್ ವಿರುದ್ಧ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಅರಿವು ಮೂಡಿಸಬೇಕು: ಪಿಎಸ್ಸೈ ಬಸವರಾಜ್
Share this Article
  • FB
  • TW
  • Linkdin
  • Email

ಸಾರಾಂಶ

ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ 'ಮಾದಕ ದ್ರವ್ಯ ವಿರೋಧಿ ದಿನಾಚರಣೆ’ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಗಂಗೊಳ್ಳಿ

ಈಗಿನ ಯುವ ಜನತೆಗೆ ಮಾದಕ ದ್ರವ್ಯಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಸಮಗ್ರ ಅರಿವು ಇರಬೇಕು. ಸಮಾಜದಲ್ಲಿ ಈ ವಿಚಾರದ ಬಗ್ಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸ್ವಯಂ ಪ್ರೇರಿತರಾಗಿ ತೊಡಗಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಆರಕ್ಷಕ ಠಾಣೆಯ ಕ್ರೈಂ ಪಿಎಸ್ಐ ಬಸವರಾಜ ಕನಶೆಟ್ಟಿ ಹೇಳಿದರು.

ಅವರು, ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ಉಪವಿಭಾಗದ ಗಂಗೊಳ್ಳಿ ಆರಕ್ಷಕ ಠಾಣೆ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ''''ಮಾದಕ ದ್ರವ್ಯ ವಿರೋಧಿ ದಿನಾಚರಣೆ’ಯ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಸ್ವಾಗತಿಸಿದರು. ವಿದ್ಯಾರ್ಥಿನಿ ಟ್ರೆನಿಟಾ ರೆಬೆಲ್ಲೋ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣ ಆರ್. ಕೆ. ವಂದಿಸಿದರು.