ವಿಜಯಪುರ: ಪಟ್ಟಣದಿಂದ ವಿವಿಧ ಭಾಗಗಳಿಗೆ ಸಂಚರಿಸುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸಮರ್ಪಕ ಬಸ್ ಸೌಲಭ್ಯವಿಲ್ಲದೆ ನಿತ್ಯ ತೊಂದರೆ ಅನುಭವಿಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸುಗಳನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿದರು
ವಿಜಯಪುರ: ಪಟ್ಟಣದಿಂದ ವಿವಿಧ ಭಾಗಗಳಿಗೆ ಸಂಚರಿಸುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸಮರ್ಪಕ ಬಸ್ ಸೌಲಭ್ಯವಿಲ್ಲದೆ ನಿತ್ಯ ತೊಂದರೆ ಅನುಭವಿಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸುಗಳನ್ನು ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.
ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ನೂರಾರು ಗ್ರಾಮಗಳಿಂದ ಪ್ರತಿದಿನ ಶಿಕ್ಷಣಕ್ಕಾಗಿ ಸಾವಿರಾರು ವಿದ್ಯಾರ್ಥಿಗಳು ಪ್ರಯಾಣಿಸುತ್ತಾರೆ. ಕೋಲಾರ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಬೆಂಗಳೂರು, ದೇವನಹಳ್ಳಿ, ಯಲಹಂಕ ಹಾಗೂ ದೊಡ್ಡಬಳ್ಳಾಪುರ ಮಾರ್ಗವಾಗಿ ತೆರಳುವ ವಿದ್ಯಾರ್ಥಿಗಳಿಗೆ ಪ್ರತಿದಿನ ಬಸ್ಗಳ ಅಭಾವ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಮಯಕ್ಕೆ ಸರಿಯಾಗಿ ಶಾಲಾ ಕಾಲೇಜುಗಳಿಗೆ ತಲುಪಲಾಗದೆ ಸಮಸ್ಯೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಜನದಟ್ಟಣೆ, ಪ್ರಾಣಾಪಾಯದ ಪ್ರಯಾಣ:
ಬೆಳಗಿನ ವೇಳೆಯಲ್ಲಿ ಶಾಲಾ-ಕಾಲೇಜುಗಳಿಗೆ ತೆರಳುವ ಸಮಯಕ್ಕೆ ಸರಿಯಾಗಿ ಬಸ್ಗಳು ಬರುವುದಿಲ್ಲ. ಬರುವ ಕೆಲವೇ ಬಸ್ಗಳಲ್ಲಿ ನಿಲ್ಲಲು ಕೂಡ ಜಾಗವಿಲ್ಲದಷ್ಟು ಪ್ರಯಾಣಿಕರು ಕಿಕ್ಕಿರಿದು ತುಂಬಿರುತ್ತಾರೆ. ಬಸ್ ಹತ್ತುವ ರಭಸದಲ್ಲಿ ಹಲವು ವಿದ್ಯಾರ್ಥಿಗಳು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆಗಳೂ ನಡೆದಿವೆ. ಸಾವಿರಾರು ರೂಪಾಯಿ ಖರ್ಚು ಮಾಡಿ ಬಸ್ ಪಾಸ್ ಮಾಡಿಸಿಕೊಂಡರೂ ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲದೆ ತರಗತಿಗಳಿಗೆ ತಡವಾಗಿ ತಲುಪುವಂತಾಗಿದೆ. ಹೆಚ್ಚುವರಿ ಬಸ್ಗಳನ್ನು ಓಡಿಸಲು ಮನವಿ ಮಾಡಿದರೆ ಕಲೆಕ್ಷನ್ ಆಗುವುದಿಲ್ಲ ಎಂಬ ಬೇಜವಾಬ್ದಾರಿ ಉತ್ತರ ನೀಡುತ್ತಾರೆ ಎಂದು ಆರೋಪಿಸಿದರು.ವಿದ್ಯಾರ್ಥಿಗಳಾದ ಚಂದು, ರಮೇಶ್, ಆಶಾ, ಮಣಿ, ಸುರೇಶ್, ಮನುಜಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಸಾರಿಗೆ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯಿಂದಾಗಿ ಬಸ್ ನಿಲ್ದಾಣದ ಸುತ್ತಮುತ್ತ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.ಪೊಲೀಸ್ ಇನ್ಸ್ಸ್ಪೆಕ್ಟರ್ ಮಧ್ಯಸ್ಥಿಕೆ ? ತಾತ್ಕಾಲಿಕ ಶಮನ:
ಪ್ರತಿಭಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ವಿಜಯಪುರ ಪೊಲೀಸ್ ಇನ್ಸ್ಸ್ಪೆಕ್ಟರ್ ಲಕ್ಷ್ಮೀನಾರಾಯಣ್ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ಬಳಿಕ ಕೆಎಸ್ಆಸ್ಟಿಸಿ ಚಿಕ್ಕಬಳ್ಳಾಪುರ ಘಟಕದ ವ್ಯವಸ್ಥಾಪಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಬೆಳಿಗ್ಗೆ ೭ ರಿಂದ ೯ ಗಂಟೆ ಹಾಗೂ ಸಂಜೆ ೪ ರಿಂದ ೬ ಗಂಟೆ ಅವಧಿಯಲ್ಲಿ ಹೆಚ್ಚುವರಿ ೨ ಬಸ್ಗಳನ್ನು ಕಡ್ಡಾಯವಾಗಿ ಕಾರ್ಯಾಚರಣೆಗೆ ಇಳಿಸುವಂತೆ ಮನವಿ ಮಾಡಿದರು. ಸಾರಿಗೆ ಇಲಾಖೆ ಅಧಿಕಾರಿಗಳಿಂದ ಸೂಕ್ತ ಭರವಸೆ ದೊರೆತ ಬಳಿಕವೇ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ಒಂದು ವೇಳೆ ಕೊಟ್ಟಿರುವ ಭರವಸೆಯಂತೆ ಹೆಚ್ಚುವರಿ ಬಸ್ಗಳನ್ನು ಓಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಬಸ್ಗಳನ್ನು ತಡೆದು ತಾಲೂಕಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.ಕೋಟ್.....
ಸುಮಾರು ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ವಿಜಯಪುರದಲ್ಲಿ ಬಸ್ ಡಿಪೋ ನಿರ್ಮಾಣಕ್ಕೆ ಸರ್ಕಾರಿ ಜಾಗ ಮಂಜೂರಾಗಿತ್ತು. ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರು ಆ ಜಾಗಕ್ಕೆ ಕಾಂಪೌಂಡ್ ಗೋಡೆ ನಿರ್ಮಿಸಿ ಎಷ್ಟೋ ವರ್ಷಗಳು ಕಳೆದರೂ ಇದುವರೆಗೂ ಯಾವುದೇ ಪ್ರಗತಿಯಾಗಿಲ್ಲ. ಪ್ರಸ್ತುತ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎಚ್. ಮುನಿಯಪ್ಪ ಅವರು ಕೂಡಲೇ ಮಧ್ಯಪ್ರವೇಶಿಸಿ ನೆನೆಗುದಿಗೆ ಬಿದ್ದಿರುವ ಈ ಬಸ್ ಡಿಪೋ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.-ವೆಂಕಟೇಶ್ ಪ್ರಭು, ಅಧ್ಯಕ್ಷರು, ಟೌನ್ ಬಿಜೆಪಿ
(ಫೋಟೋ ಕ್ಯಾಪ್ಷನ್ ಬೆಂಗಳೂರು 13-11-26ನಲ್ಲಿ ವಿಜಯಪುರ ಪ್ರತಿಭಟನೆ ಅಂತಿದೆ)ವಿಜಯಪುರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್ಸುಗಳನ್ನು ತಡೆದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮುಖಂಡರ ಸಹಯೋಗದಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಪ್ರಯಾಣಿಕರು ಸಮುರ್ಪಕ ಬಸ್ಸುಗಳ ಸಂಚಾರಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ ನಡೆಸಿದರು.
