ಸಾರಾಂಶ
ಹುಮನಾಬಾದ್‌ನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ 40 ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಯನ್ನು ಶಾಸಕರು ಮಾಡಿದರು.
ಕನ್ನಡಪ್ರಭ ವಾರ್ತೆ ಹುಮನಾಬಾದ್
ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಬೆಳೆಸಲು ಸಹಾಯ ಮಾಡುವ ಲ್ಯಾಪ್‌ಟಾಪ್‌ಗಳನ್ನು ತಮ್ಮ ಅಧ್ಯಯನಕ್ಕಾಗಿ ಬಳಸಬೇಕೆಂದು ಶಾಸಕ ಡಾ. ಸಿದ್ದಲಿಂಗಪ್ಪಾ ಪಾಟೀಲ್ ಹೇಳಿದರು.ಪಟ್ಟಣದ ಶಾಸಕರ ಕಚೇರಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಥಮ, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ 40 ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ ಮಾಡುವ ಮೂಲಕ ಮಾತನಾಡಿದ ಅವರು, ನಮ್ಮ ದೇಶದ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ಅಭಿವೃದ್ಧಿಯಾಗ ಬೇಕು ಎನ್ನುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ಸುಧಾರಿಸಲು ಸರ್ಕಾರ ಹಲವಾರು ಕ್ರಮ ಕೈಗೊಂಡಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಉಚಿತವಾಗಿ ಲ್ಯಾಪ್‌ಟಾಪ್ ನೀಡುತ್ತಿದ್ದು, ಪ್ರತಿಯೋರ್ವರು ಕೂಡಾ ಉನ್ನತ ಶಿಕ್ಷಣ ಪಡೆದಾಗ ಮಾತ್ರ ಅಭಿವೃದ್ಧಿ ಸಾಧ್ಯ ಎಂದರು. ಪ್ರತಿ ವಿದ್ಯಾರ್ಥಿಗಳೂ ಕೂಡಾ ತಮ್ಮ ಗುರಿಯನ್ನು ಮುಟ್ಟುವ ತನಕ ಸತತ ಪ್ರಯತ್ನ ಮಾಡುವಂತೆ ಅವರು ಕರೆ ನೀಡಿದರು.ಬೀದರ್ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ, ತಾಲೂಕು ಕಾರ್ಮಿಕ ಅಧಿಕಾರಿ ಗಂಗಾಧರ ನಿಲೂರ, ಸಿಬ್ಬಂದಿಯರಾದ ಸುಭಾಷ ನರಬೂಳೆ, ರಾಮ, ಲಕ್ಷ್ಮಣ ಪೂಜಾರಿ, ರೇವಣಸಿದ್ದಪ್ಪಾ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಪಾಲಕರು ಇದ್ದರು.