ಕಲ್ಪವೃಕ್ಷ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳು

| Published : May 10 2024, 01:34 AM IST

ಸಾರಾಂಶ

ಸಿಂದಗಿ: ಆಲಮೇಲ ತಾಲೂಕಿನ ಮೋರಟಗಿ ಗ್ರಾಮದ ಕಲ್ಪವೃಕ್ಷ ಶಾಲೆಯ ಆಂಗ್ಲ ಮತ್ತು ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ಅಶುತೋಷ 613, ತನುಷಾ ಮಂದೇವಾಲಿ 599, ರಮ್ಯಾ ತಮಗೊಂಡ 585, ಪ್ರಸಾದ ರಾಠೋಡ 585 ಮತ್ತು ಕನ್ನಡ ಮಾಧ್ಯಮದಲ್ಲಿ ಭಗವಂತರಾಯ ಮುದ್ದಾ 594, ದ್ಯಾವಮ್ಮ ನಾಯ್ಕೋಡಿ 576, ಸುನೀಲ ಆಸಂಗಿಹಾಳ 572 ಅಂಕಗಳನ್ನು ಪಡೆದಿದ್ದಾರೆ.

ಸಿಂದಗಿ: ಆಲಮೇಲ ತಾಲೂಕಿನ ಮೋರಟಗಿ ಗ್ರಾಮದ ಕಲ್ಪವೃಕ್ಷ ಶಾಲೆಯ ಆಂಗ್ಲ ಮತ್ತು ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ಅಶುತೋಷ 613, ತನುಷಾ ಮಂದೇವಾಲಿ 599, ರಮ್ಯಾ ತಮಗೊಂಡ 585, ಪ್ರಸಾದ ರಾಠೋಡ 585 ಮತ್ತು ಕನ್ನಡ ಮಾಧ್ಯಮದಲ್ಲಿ ಭಗವಂತರಾಯ ಮುದ್ದಾ 594, ದ್ಯಾವಮ್ಮ ನಾಯ್ಕೋಡಿ 576, ಸುನೀಲ ಆಸಂಗಿಹಾಳ 572 ಅಂಕಗಳನ್ನು ಪಡೆದಿದ್ದಾರೆ. ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 66 ವಿದ್ಯಾರ್ಥಿಗಳಲ್ಲಿ 63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುತ್ತಮ ಶ್ರೇಣಿ 20, ಪ್ರಥಮ ಶ್ರೇಣಿ 39, ದ್ವಿತೀಯ ಶ್ರೇಣಿ 4 ವಿದ್ಯಾರ್ಥಿಗಳು ಮತ್ತು ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ 76 ವಿದ್ಯಾರ್ಥಿಗಳಲ್ಲಿ 70 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುನ್ನತ ಶ್ರೇಣಿ 18, ಪ್ರಥಮ ಶ್ರೇಣಿ 45, ದ್ವಿತೀಯ ಶ್ರೇಣಿಯನ್ನು 6 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಶಿವಶರಣಗೌಡ ಬಿರಾದಾರ ಮತ್ತು ಆಡಳಿತ ಮಂಡಳಿ ಸದಸ್ಯರು ಶಿಕ್ಷಕ ಬಳಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.