ಸಾರಾಂಶ
ಪರೀಕ್ಷೆ ಪಾರದರ್ಶಕವಾಗಿ ಇರಲಿ ಎಂಬ ಉದ್ದೇಶದಿಂದ ಹ್ಯಾಟಿ ಮುಂಡರಗಿ ಶಾಲೆಯ ಶಿಕ್ಷಕ ಕೆ.ಎಂ. ಅಲಿ ಪ್ರಶ್ನೆ ಪತ್ರಿಕೆ ತಯಾರಿಕೆ, ಪರೀಕ್ಷೆ ನಡೆಸುವುದು ಹಾಗೂ ಮೌಲ್ಯಮಾಪನ ಮಾಡಿ 24 ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಕೊಪ್ಪಳ: ತಾಲೂಕಿನ ಬಹದ್ದೂರಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಚಿಲವಾಡಗಿ ತಮ್ಮ ಸ್ವಂತ ಖರ್ಚಿನಲ್ಲಿ ೨೪ ವಿದ್ಯಾರ್ಥಿಗಳನ್ನು ಹೈದರಾಬಾದ್‌ಗೆ ವಿಮಾನದ ಮೂಲಕ ಕರೆದುಕೊಂಡು ಹೋಗಲು ಸೋಮವಾರ ೫ರಿಂದ ೮ನೇ ತರಗತಿ ವರೆಗೆ ಲಿಖಿತ ಪರೀಕ್ಷೆ ನಡೆಸಿದ್ದಾರೆ. ಇದರಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ದೊರೆಯಲಿದೆ.
ಮಕ್ಕಳಲ್ಲಿ ಓದುವ ಮನೋಭಾವ ಹೆಚ್ಚಿಸುವ ಉದ್ದೇಶದಿಂದ ಶಿಕ್ಷಕರು ಈ ನಿರ್ಧಾರ ಕೈಗೊಂಡಿದ್ದು ಜಿಂದಾಲ್ ವಿಮಾನ ನಿಲ್ದಾಣದ ಮೂಲಕ ತೆರಳಲಿದ್ದಾರೆ.
ಪರೀಕ್ಷೆ ಪಾರದರ್ಶಕವಾಗಿ ಇರಲಿ ಎಂಬ ಉದ್ದೇಶದಿಂದ ಹ್ಯಾಟಿ ಮುಂಡರಗಿ ಶಾಲೆಯ ಶಿಕ್ಷಕ ಕೆ.ಎಂ. ಅಲಿ ಪ್ರಶ್ನೆ ಪತ್ರಿಕೆ ತಯಾರಿಕೆ, ಪರೀಕ್ಷೆ ನಡೆಸುವುದು ಹಾಗೂ ಮೌಲ್ಯಮಾಪನ ಮಾಡಿ ೨೪ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
೫ರಿಂದ ೮ನೇ ತರಗತಿ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಅದರಲ್ಲಿ ೫ನೇ ತರಗತಿಯಲ್ಲಿ ೬, ೬ರಲ್ಲಿ ೬, ೭ರಲ್ಲಿ ೬ ಹಾಗೂ ೮ನೇ ತರಗತಿಯಲ್ಲಿ ೬ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಯಲ್ಲಿ ಹಾಗೂ ಸ್ಪರ್ಧಾ ಮನೋಭಾವ ಮೂಡಲಿ ಎಂಬ ಉದ್ದೇಶದಿಂದ ಮುಖ್ಯೋಪಾಧ್ಯಾಯರು ಇಂತ ಕಾರ್ಯ ಕೈಗೊಂಡಿದ್ದಾರೆ..