ಬಾಗಲಕೋಟೆಬಿವಿವಿ ಸಂಘದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು 2026ನೇ ಸಾಲಿನಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಿವಿವಿ ಸಂಘದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು 2026ನೇ ಸಾಲಿನಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.ವಿಟಿಯು ಹಾಗೂ ಸಂಘ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿವಿಧ ಕ್ರೀಡಾಕೂಟಗಳಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಒಟ್ಟು 110 ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ರಾಜ್ಯಮಟ್ಟದ ಹಾಗೂ ವಿಭಾಗಮಟ್ಟದ ಸ್ಪರ್ಧೆಗಳಲ್ಲಿ 70 ಟ್ರೋಫಿ, 20 ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ವಿಟಿಯು ರಾಜ್ಯಮಟ್ಟದ ಸ್ಪರ್ಧೆಗಳಿಗೆ 20 ವಿದ್ಯಾರ್ಥಿಗಳು ಬ್ಲೂಗಳಾಗಿ ಆಯ್ಕೆಯಾಗಿರುವುದು ಮತ್ತೊಂದು ಹೆಮ್ಮೆಯ ಗರಿಯಾಗಿದೆ. ಮಹಾವಿದ್ಯಾಲಯ 2019-20 ಹಾಗೂ 2024-25ನೇ ಸಾಲಿನಲ್ಲಿ ಎರಡು ಬಾರಿ ವಿಟಿಯು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ₹2ಲಕ್ಷ ಬಹುಮಾನವನ್ನೂ ತನ್ನದಾಗಿಸಿಕೊಂಡಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ, ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಬಿವಿವಿ ಸಂಘದ ಸದಸ್ಯರು, ಮಹಾವಿದ್ಯಾಲಯದ ತಾಂತ್ರಿಕ ನಿರ್ದೇಶಕ ಡಾ.ಆರ್.ಎನ್. ಹೆರಕಲ್, ಪ್ರಾಚಾರ್ಯಡಾ.ಬಿ,ಆರ್. ಹಿರೇಮಠ, ಜೆಮ್ಖಾನಾ ವಿಭಾಗದ ಡಾ.ಕಿರಣ ಬೆಳವಲದ, ಡಾ.ಮಂಜುಳಾ ಸುತಗುಂಡಾರ, ದೈಹಿಕ ನಿದೇರ್ಶಕ ಪ್ರೊ.ಗಣೇಶ ಕೋರಿ ಅಭಿನಂದಿಸಿದ್ದಾರೆ.