ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು
ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನದಿಂದ ಅಧ್ಯಯನ ನಡೆಸಿ ಶಾಲೆಗೆ ಕೀರ್ತಿ ತರಬೇಕು ಎಂದು ಸರ್ಕಾರಿ ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಎಂ.ಜೆ.ಮಹೇಶ್ ಆಚಾರ್ಯ ಹೇಳಿದರು.ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಶಾಲೆ ನಿಯಮ ಪಾಲಿಸಿ ಶಿಕ್ಷಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ಶಾಲೆಗೆ ಬರುವಾಗ ಶಿಕ್ಷಣ ಕುರಿತು ಮಾತ್ರ ಗಮನಹರಿಸಬೇಕಿದೆ. ಅನ್ಯ ವಿಚಾರಗಳ ಬಗ್ಗೆ ತಲೆಗೆ ಹಾಕಿಕೊಳ್ಳದೆ ಸದಾ ಅಧ್ಯಯನಶೀಲರಾಗಿರಬೇಕು. ಶಾಲೆ ಅಭಿವೃದ್ಧಿಗೆ ಎಸ್‌ಡಿಎಂಸಿ ಸದಾ ಸಹಕಾರ ನೀಡಲಿದೆ ಎಂದು ತಿಳಿಸಿದರು.ಎಸ್‌ಡಿಎಂಸಿ ಸದಸ್ಯ ಓ.ಡಿ.ಸ್ಟೀಫನ್ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಪೋಷಕರು ಕಾರ್ಯ ನಿರ್ವಹಿಸಬೇಕಿದೆ.ಸರ್ಕಾರಿ ಶಾಲೆಯಲ್ಲಿ ದೊರೆಯುವ ಅತ್ಯುತ್ತಮ ಶಿಕ್ಷಣ ಹಾಗೂ ವಿವಿಧ ಸೌಲಭ್ಯ ಬಳಸಿಕೊಂಡು ವಿದ್ಯಾರ್ಥಿಗಳು ಸಾಧಿಸಬೇಕಿದೆ. ಕಳೆದ ಬಾರಿ ಎಸ್‌ಡಿಎಂಸಿ ಸದಸ್ಯರು ವಾಗ್ದಾನ ನೀಡಿದಂತೆ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಲಾಗುತ್ತಿದೆ. ಇದು ಈ ಬಾರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಪ್ರೇರಣೆ ನೀಡಲಿದೆ ಎಂದರು.
ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಾದ ಮಹಮ್ಮದ್ ಸುಹೈಲ್, ಸೈಯ್ಯದ್ ಮಹಮ್ಮದ್ ಸಾಧಿಕ್, ಫಾತಿಮಾ ತುಲ್ ಸಫಾ, ರಿಕಾಜ್, ಮಹಮ್ಮದ್ ರಿಹಾನ್, ಮಹಮ್ಮದ್ ರೋಹನ್, ಡಿ.ವಿದ್ಯಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಬಿ.ಕಣಬೂರು ಗ್ರಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ಹನೀಫ್, ಎಂ.ಎಸ್.ಅರುಣೇಶ್, ಎಸ್‌ಡಿಎಂಸಿ ಸದಸ್ಯರಾದ ಮಯ್ಯದ್ದಿ, ಶುಕುರ್, ಹಿರಿಯಣ್ಣ, ಬಿ.ಎಚ್.ಮನುಕುಮಾರ್, ಮುಖ್ಯಶಿಕ್ಷಕ ಕೊಟ್ರೇಶಪ್ಪ, ಶಿಕ್ಷಕರಾದ ತಮನ್ನಾ, ಸ್ಮಿತಾ ಸವಿತಾ ಲೋಬೋ, ರಮೇಶ್ ಮತ್ತಿತರರು ಹಾಜರಿದ್ದರು.೦೬ಬಿಹೆಚ್‌ಆರ್ ೧:ಬಾಳೆಹೊನ್ನೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಹೇಶ್ ಆಚಾರ್ಯ, ಓ.ಡಿ.ಸ್ಟೀಫನ್, ಮಹಮ್ಮದ್ ಹನೀಫ್, ಅರುಣೇಶ್, ಮಯ್ಯದ್ದಿ ಇದ್ದರು.