ನಗರದ ಎಮ್ಮೆಕೆರೆ ರಮಾ ಲಕ್ಷ್ಮಿನಾರಾಯಣ ಕನ್ವೆಂಷನ್ ಸಭಾಂಗಣದಲ್ಲಿ ಶನಿವಾರ ಸರ್ವ ಕಾಲೇಜು ವಿದ್ಯಾರ್ಥಿಗಳ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮದ ವೇಳೆ ಸಭಾಂಗಣದ ಕಾರಿಡರ್‌ನ (ಪ್ಯಾಸೇಜ್) ಆವರಣಗೋಡೆ ಕುಸಿದು ಬಿದ್ದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.ಹಳೆಯಂಗಡಿ ನಿವಾಸಿ ಮಹಮ್ಮದ್ ಶಮಾಜ್ (16), ಸೂರಿಂಜೆ ನಿವಾಸಿ ಮಹಮ್ಮದ್ ಶನಾನ್ ಅಹಮ್ಮದ್ (18), ಅಡ್ಯಾರ್ ನಿವಾಸಿ ಹನೀಫ್ (23), ಕಾವೂರು ಗಾಂಧಿನಗರ ನಿವಾಸಿ ದಾವೂದ್ ಫರ್ಸಿನ್ ಅಹಮ್ಮದ್ (18) ಗಾಯಗೊಂಡವರು. ಇವರಲ್ಲಿ ಮಹಮ್ಮದ್ ಶವಾಜ್ ಅವರಿಗೆ ಗಂಭೀರ ಗಾಯವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರು: ನಗರದ ಎಮ್ಮೆಕೆರೆ ರಮಾ ಲಕ್ಷ್ಮಿನಾರಾಯಣ ಕನ್ವೆಂಷನ್ ಸಭಾಂಗಣದಲ್ಲಿ ಶನಿವಾರ ಸರ್ವ ಕಾಲೇಜು ವಿದ್ಯಾರ್ಥಿಗಳ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮದ ವೇಳೆ ಸಭಾಂಗಣದ ಕಾರಿಡರ್‌ನ (ಪ್ಯಾಸೇಜ್) ಆವರಣಗೋಡೆ ಕುಸಿದು ಬಿದ್ದ ಪರಿಣಾಮ ಓರ್ವ ಗಂಭೀರ ಗಾಯಗೊಂಡು, ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.ಹಳೆಯಂಗಡಿ ನಿವಾಸಿ ಮಹಮ್ಮದ್ ಶಮಾಜ್ (16), ಸೂರಿಂಜೆ ನಿವಾಸಿ ಮಹಮ್ಮದ್ ಶನಾನ್ ಅಹಮ್ಮದ್ (18), ಅಡ್ಯಾರ್ ನಿವಾಸಿ ಹನೀಫ್ (23), ಕಾವೂರು ಗಾಂಧಿನಗರ ನಿವಾಸಿ ದಾವೂದ್ ಫರ್ಸಿನ್ ಅಹಮ್ಮದ್ (18) ಗಾಯಗೊಂಡವರು. ಇವರಲ್ಲಿ ಮಹಮ್ಮದ್ ಶವಾಜ್ ಅವರಿಗೆ ಗಂಭೀರ ಗಾಯವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಶನಿವಾರ ಮಧ್ಯಾಹ್ನ ವೇಳೆ ಚುನಾವಣೆ ನಡೆದು ವಿಜೇತರ ಘೋಷಣೆಯಾಗಿ ಪದಗ್ರಹಣ ನಡೆಯುತ್ತಿದ್ದ ವೇಳೆ ಸಭಾಂಗಣದ ಒಂದನೇ ಮಹಡಿಯ ಪ್ಯಾಸೇಜ್‌ನ ತಡೆಗೋಡೆಗೆ ಹಲವು ವಿದ್ಯಾರ್ಥಿಗಳು ಒರಗಿದ್ದರು. ಈ ಸಂದರ್ಭ ಏಕಾಏಕಿ ತಡೆಗೋಡೆ ಕುಸಿದು ಕೆಳಕ್ಕೆ ಬಿದ್ದಿದ್ದು, ಇದರಿಂದ ಮೂವರು ವಿದ್ಯಾರ್ಥಿಗಳು ಕೂಡಾ ಆಯತಪ್ಪಿ ಬಿದ್ದಿದ್ದಾರೆ. ಇದೇ ವೇಳೆ ಕೆಳಗೆ ನಿಂತಿದ್ದ ಓರ್ವ ವಿದ್ಯಾರ್ಥಿ ಸೇರಿದಂತೆ ಒಟ್ಟು 4 ಮಂದಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರು ಡಿಕ್ಕಿಯಾಗಿ ಒಬ್ಬ ಗಾಯ: ಚುನಾವಣೆ ನಡೆಯುತ್ತಿದ್ದ ವೇಳೆ ರಸ್ತೆಯಲ್ಲಿ ತೆರಳುತ್ತಿದ್ದ ಕಾರೊಂದು ಡಿಕ್ಕಿಯಾಗಿ ಕಸಬ ಬೆಂಗ್ರೆ ನಿವಾಸಿ ಮಹಮ್ಮದ್ ಶಾಕೀಲ್ ಹುಸೈನ್(18) ಗಾಯಗೊಂಡ ಘಟನೆ ವರದಿಯಾಗಿದೆ. ಆತನನ್ನು ಕೂಡಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.----