ನಿಗದಿತ ಅವಧಿಯೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲಾಗುತ್ತದೆ. ಈಗಾಗಲೇ ತನಿಖೆ ಆರಂಭವಾಗಿದೆ, ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದೇನೆ.
ಹನೂರು: ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದು, ತನಿಖಾ ವರದಿಗೆ ಸಲ್ಲಿಕೆಗೆ 7 ದಿನ ಅವಕಾಶ ನೀಡಿದ್ದಾರೆ ಎಂದು ಕೊಳ್ಳೇಗಾಲ ಉಪ ವಿಭಾಗಧಿಕಾರಿ ದಿನೇಶ್ ಕುಮಾರ್ ಮೀನಾ ತಿಳಿಸಿದರು. ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನಿಗದಿತ ಅವಧಿಯೊಳಗೆ ತನಿಖೆ ನಡೆಸಿ ವರದಿ ಸಲ್ಲಿಸಲಾಗುತ್ತದೆ. ಈಗಾಗಲೇ ತನಿಖೆ ಆರಂಭವಾಗಿದೆ, ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದೇನೆ. ಗುಂಡೇಟಿಗೆ ಬಲಿಯಾದವರ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಂಪೂರ್ಣ ತನಿಖಾ ವರದಿ ಸಲ್ಲಿಸಲಾಗುತ್ತದೆ ಎಂದು ಹೇಳಿದರು.