ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಉಪವಿಭಾಗಧಿಕಾರಿ‌ ಕಾರ್ತಿಕ್ ಭೇಟಿ

| Published : Mar 29 2024, 12:53 AM IST

ಅತಿ ಸೂಕ್ಷ್ಮ ಮತಗಟ್ಟೆಗಳಿಗೆ ಉಪವಿಭಾಗಧಿಕಾರಿ‌ ಕಾರ್ತಿಕ್ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಸೂಕ್ಷ್ಮ ಮತ್ತು ಕಡಿಮೆ ಮತದಾನ ದಾಖಲಾಗಿರುವ ಚಿತ್ರದುರ್ಗ ನಗರದ 7 ಮತಗಟ್ಟೆಗಳಿಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿತ್ರದುರ್ಗ: ಸೂಕ್ಷ್ಮ ಮತ್ತು ಕಡಿಮೆ ಮತದಾನ ದಾಖಲಾಗಿರುವ ಚಿತ್ರದುರ್ಗ ನಗರದ 7 ಮತಗಟ್ಟೆಗಳಿಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸ್ಥಳೀಯರನ್ನು ಭೇಟಿ ಮಾಡಿ, ಮುಂಬರುವ ಲೋಕಸಭಾ ಚುನಾವಣೆಗೆ ಏ.26ರಂದು ಮತದಾನ ನಡೆಯಲಿದೆ. ತಪ್ಪದೇ ಎಲ್ಲರೂ ಮತದಾನ ಮಾಡಬೇಕು. ಮತದಾನಕ್ಕೆ ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾವುದೇ ಭಯ ಹಾಗೂ ಆತಂಕಕ್ಕೆ ಒಳಗಾಗದೆ ಮತದಾನ ಮಾಡುವಂತೆ ಸ್ಥಳೀಯರನ್ನು ಪ್ರೇರೇಪಿಸಿದರು.

ಬುರುಜನಹಟ್ಟಿಯ‌ ಹಿರಿಯ ಪ್ರಾಥಮಿಕ ಪಾಠಶಾಲೆ, ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢ ಶಾಲೆ, ನೆಹರುನಗರದ ಮಿಲ್ಲತ್ ಸಂಯುಕ್ತ ಪಿಯು ಕಾಲೇಜ್, ಉಮ‌ರ್ ಮಸೀದಿ ಹತ್ತಿರ ರಾಮದಾಸ ಕಾಂಪೌಂಡ್ ಇಲ್ ಮುಲ್ ಹುದಾ ಇಸ್ಲಾಮಿಯಾ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಜೆಜೆ ಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ, ಸಿ.ಕೆ.ಪುರ ಬಡಾವಣೆಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಪಾಠಶಾಲೆ,‌ಐಯುಡಿಪಿ ಲೇ ಔಟ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ತಹಸೀಲ್ದಾರ್ ಡಾ.ನಾಗವೇಣಿ, ನಗರ ಸಭೆ ಆಯುಕ್ತೆ ಎಂ.ರೇಣುಕಾ, ಕಂದಾಯ ಅಧಿಕಾರಿ ಜಯ್ಯಪ್ಪ ಉಪಸ್ಥಿತರಿದ್ದರು.